ಜನಪ್ರಿಯ ಕಾರು ತಯಾರಕರ ಎದೆಯಲ್ಲಿ ನಡುಕ ಹುಟ್ಟಿಸಿದ ಹೋಂಡಾ ಎಲಿವೇಟ್: ಬಿಡುಗಡೆಗೆ ಸಜ್ಜು

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಅಮೇಜ್ ಮತ್ತು ಸಿಟಿ ಸೆಡಾನ್‌ಗಳನ್ನು ಮಾತ್ರ ಮಾರಾಟ ಮಾಡುತ್ತಿವೆ. ಇದೀಗ ಜಪಾನ್ ಮೂಲದ ಹೋಂಡಾ ಕಂಪನಿಯು ಅತಿ ಹೆಚ್ಚು ಪೈಪೋಟಿ ಹೊಂದಿರುವ ಎಸ್‍ಯುವಿ ವಿಭಾಗದಲ್ಲಿ ಹೊಸ ಮಾದರಿಯನ್ನು ಬಿಡುಗಡೆಗೊಳಿಸಿ ಭಾರತದಲ್ಲಿ ತನ್ನ ಕಾರುಗಳ ಸರಣಿಯನ್ನು ವಿಸ್ತರಿಸಲಾಗುತ್ತಿದೆ.

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಹೊಸ ಎಲಿವೇಟ್ ಎಸ್‍ಯುವಿಯನ್ನು ಭಾರತದಲ್ಲಿ ಈಗಾಗಲೇ ಅನಾವರಣಗೊಳಿಸಲಾಗಿದೆ. ಈ ಹೊಸ ಹೋಂಡಾ ಎಲಿವೇಟ್ (Honda Elevate) ಎಸ್‍ಯುವಿಯು ಅತ್ಯಾಧುನಿಕ ತಂತ್ರಜ್ಙಾನ ಮತ್ತು ಫೀಚರ್ಸ್ ಗಳೊಂದಿಗೆ ಬರುತ್ತಿದೆ. ಇದು ಹೆಚ್ಚು ಪೈಪೋಟಿ ಹೊಂದಿರುವ ಮಿಡ್ ಎಸ್‍ಯುವಿ ವಿಭಾಗದಲ್ಲಿ ಸ್ಪರ್ಧಿಸಲು ಸಜ್ಜಾಗಿದೆ. ಹೋಂಡಾ ಎಲಿವೇಟ್ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ.

Honda Elevate

ಡೀಲರ್ ಮೂಲಗಳ ಪ್ರಕಾರ, ಈ ಹೊಸ ಹೋಂಡಾ ಎಲಿವೇಟ್ ಎಸ್‌ಯುವಿಯನ್ನು ಖರೀದಿಸಲು ಬಯಸುವ ಗ್ರಾಹಕರು ರೂ.25,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಹೊಸ ಹೋಂಡಾ ಎಲಿವೇಟ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರ್ಡರ್, ಫೋಕ್ಸ್‌ವ್ಯಾಗನ್ ಟೈಗನ್ ಮತ್ತು ಸ್ಕೋಡಾ ಕುಶಾಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಹೋಂಡಾ ಎಲಿವೇಟ್ ಎಸ್‍ಯುವಿಯಲ್ಲಿ 1.5 ಲೀಟರ್, 4-ಸಿಲಿಂಡರ್ ನ್ಯಾಚುರಲ್ ಆಸ್ಪೈರ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 121 bhp ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಮತ್ತು CVT ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಇನ್ನು ಇದರ 1.5 ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಆವೃತ್ತಿಯ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ.

Honda Elevate

ಹೊಸ ಹೋಂಡಾ ಎಲಿವೇಟ್ ಎಸ್‍ಯುವಿಯ ಬಣ್ಣ ಆಯ್ಕೆಗಳ ಬಗ್ಗೆ ಹೇಳುವುದಾದರೆ, ಎಸ್‍ಯುವಿಯು 10 ಬಣ್ಣ ಆಯ್ಕೆಗಳಲ್ಲಿ ಬರಲಾಗುತ್ತದೆ. ಈ ಬಣ್ಣದ ಆಯ್ಕೆಗಳಲ್ಲಿ 7 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಣ್ಣಗಳು ಸೇರಿವೆ. ಡ್ಯುಯಲ್-ಟೋನ್ ಛಾಯೆಗಳು ಬ್ಲ್ಯಾಕ್ ರೂಫ್ ನೊಂದಿಗೆ ಬರುತ್ತವೆ ಎಂದು ಹೇಳಬಹುದು.

ಇನ್ನು ಈ ಎಸ್‍ಯುವಿಯು ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆಗಳಲ್ಲಿ ರೇಡಿಯಂಟ್ ರೆಡ್, ಫೀನಿಕ್ಸ್ ಆರೆಂಜ್ ಮತ್ತು ಪ್ಲಾಟಿನಂ ವೈಟ್ ಸೇರಿವೆ. ಮತ್ತೊಂದೆಡೆ, ಮೊನೊಟೋನ್ ಬಣ್ಣಗಳಾಗಿ ಅಬ್ಸಿಡಿಯನ್ ಬ್ಲೂ, ಲೂನಾರ್ ಸಿಲ್ವರ್, ಮೆಟರಾಯ್ಡ್ ಗ್ರೇ ಮತ್ತು ಗೋಲ್ಡನ್ ಬ್ರೌನ್ ಅನ್ನು ಒಳಗೊಂಡಿರುತ್ತದೆ. ಹೋಂಡಾ ಎಲಿವೇಟ್ ಎಸ್‍ಯುವಿಯು SV, V, VX, ಮತ್ತು ZX ಸೇರಿದಂತೆ 4 ಟ್ರಿಮ್ ಹಂತಗಳಲ್ಲಿ ನೀಡಲಾಗುವುದು.

Honda Elevate

ಈ ಟ್ರಿಮ್ ಹಂತಗಳಲ್ಲಿ, 'SV' ಮೂಲ ರೂಪಾಂತರವಾದರೆ, 'ZX' ಟಾಪ್-ಸ್ಪೆಕ್ ಮಾದರಿಯಾಗಿರುತ್ತದೆ. ಇನ್ನು ಈ ಹೊಸ ಹೋಂಡಾ ಎಸ್‍ಯುವಿಯು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗಲಿದೆ. ಹೋಂಡಾ ಎಲಿವೇಟ್ ಎಸ್‍ಯುವಿಯನ್ನು ಹೋಂಡಾ ಆರ್&ಡಿ ಏಷ್ಯಾ ಪೆಸಿಫಿಕ್, ಥೈಲ್ಯಾಂಡ್ ಅಭಿವೃದ್ಧಿಪಡಿಸಿದೆ. ಈ ಹೊಸ ಎಸ್‍ಯುವಿಯು ಅತ್ಯಾಧುನಿಕ ಸೌಕರ್ಯ ಮತ್ತು ತಂತ್ರಜ್ಞಾನದ ಜೊತೆಗೆ ಸ್ಥಿತಿ ಮತ್ತು ಹೆಚ್ಚು ವಿಶೇಷವಾದ ಖರೀದಿದಾರರನ್ನು ಆಕರ್ಷಿಸಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಹೊಸ ಎಸ್‍ಯುವಿ ಮಾದರಿಯ ವಿನ್ಯಾಸವು ನ್ಯೂ ಜನರೇಷನ್ CR-V ಮತ್ತು WR-V ಎಸ್‍ಯುವಿಗಳಿಂದ ಸ್ಫೂರ್ತಿ ಪಡೆದಿದೆ. ಇವುಗಳು ಆಯ್ದ ಜಾಗತಿಕ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ. ಹೊಸ ಹೋಂಡಾ ಎಲಿವೇಟ್ ಎಸ್‍ಯುವಿಯ ಮಧ್ಯದಲ್ಲಿ ದೊಡ್ಡ ಸಿಗ್ನೇಚರ್ ಬ್ಯಾಡ್ಜ್‌ನೊಂದಿಗೆ ಫ್ಲಾಟ್ ನೋಸ್, ಮೆಶ್ ಇನ್ಸರ್ಟ್‌ನೊಂದಿಗೆ ಪರಿಚಿತ ಗ್ರಿಲ್ ಮತ್ತು ದಪ್ಪ ಕ್ರೋಮ್ ಸ್ಲೇಟ್ ಹೊಂದಿದೆ.

ಹೊಸ ಎಲಿವೇಟ್ ಎಸ್‍ಯುವಿಯಲ್ಲಿ ಬ್ಲ್ಯಾಕ್ ಫಿನಿಶ್ ಹೊಂದಿರುವ ಮಲ್ಟಿ-ಸ್ಪೋಕ್ ಅಲಾಯ್ ವೀಲ್‌ಗಳನ್ನು ಹೊಂದಿವೆ . ಈ ಎಸ್‍ಯುವಿಯು ADAS (ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೂಟ್ - ಹೋಂಡಾ ಸೆನ್ಸಿಂಗ್ ಎಂದು ಕರೆಯಲ್ಪಡುತ್ತದೆ. ಇನ್ನು ಎಸ್‍ಯುವಿಯಲ್ಲಿ ವೈರ್‌ಲೆಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯೊಂದಿಗೆ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜ್, ಕನೆಕ್ಟೆಡ್ ಕಾರ್ ಟೆಕ್ ಮತ್ತು ಇನ್ನೂ ಅನೇಕ ಫೀಚರ್ಸ್ ಗಳನ್ನು ಹೊಂದಿವೆ.

More from DriveSpark

Article Published On: Thursday, July 6, 2023, 11:16 [IST]
English summary
New honda elevate suv variants colour options revealed details
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+