ಹ್ಯುಂಡೈ ಎಕ್ಸ್‌ಟರ್‌ಗೆ ಮುಗಿಬಿದ್ದ ಗ್ರಾಹಕರು: ಟಾಟಾ ಪಂಚ್‌ಗೆ ನಡುಕ ಶುರು

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ.

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ಕಂಪನಿಯು ಎಕ್ಸ್‌ಟರ್ ಕಾರಿಗಾಗಿ 50,000 ಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಸ್ವೀಕರಿಸಿದ್ದಾರೆ. ಬಿಡುಗಡೆಯಾದ ಕೇವಲ 30 ದಿನಗಳಲ್ಲಿ ಬುಕಿಂಗ್ 10,000 ರಿಂದ 50,000ಕ್ಕೆ ಏರಿತು. ಹ್ಯುಂಡೈ ಕೂಡ ಮೂರನೇ ಒಂದು ಭಾಗದಷ್ಟು ಬುಕ್ಕಿಂಗ್‌ಗಳು AMT ರೂಪಾಂತರಗಳಿಗಾಗಿ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5,99,900 ಆಗಿದೆ.

Hyundai Exter

ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಗೆ ಭಾರೀ ಬೇಡಿಕೆಯನು ಹೊಂದಿರುವುದರಿಂದ ಈ ಕಾರಿನ EX ಮತ್ತು EX(O) ರೂಪಾಂತರಗಳ ಕಾಯುವ ಅವಧಿಯು 1 ವರ್ಷದವರೆಗೆ ತಲುಪಿದೆ. ಆದರೆ ಇತರ ರೂಪಾಂತರಗಳಿಗೆ ಇದು 5 ರಿಂದ 6 ತಿಂಗಳ ನಡುವೆ ಇರುತ್ತದೆ. ಹ್ಯುಂಡೈ ಎಕ್ಸ್‌ಟರ್ ಕಾರು ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಇವು EX, EX(O), S, S(O), SX, SX(O) ಮತ್ತು SX(O) ಆಗಿದೆ.

ಇತ್ತೀಚೆಗೆ ಹೊಸದಾಗಿ ಬಿಡುಗಡೆಗೊಂಡ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇತ್ತೀಚೆಗೆ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ. ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ.

Hyundai Exter

ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 81.8 bhp ಪವರ್ ಮತ್ತು 113.8 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಕ್ಸ್‌ಟರ್ ಕಾರಿನ CNG ಆವೃತ್ತಿಯು 67.7 bhp ಪವರ್ ಮತ್ತು 95.2 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಹ್ಯುಂಡೈ ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.ಇನ್ನು CNG ಆವೃತ್ತಿಯು ಭರ್ಜರಿ 27.1 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಒಳಗೊಂಡಿದೆ.

Hyundai Exter

ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ.

ಒಟ್ಟಾರೆಯಾಗಿ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), VSM ಮತ್ತು HAC (ಹಿಲ್ ಅಸಿಸ್ಟ್ ಕಂಟ್ರೋಲ್) ಸೇರಿದಂತೆ 26 ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ. ಹೊಸ ಹ್ಯುಂಡೈ ಎಕ್ಸ್‌ಟರ್ ಕಾರ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳನ್ನು ಪರಿಚಯಿಸಲಾಗಿವೆ.

ಇದರಲ್ಲಿ ಗ್ರಾಹಕರು ತಮ್ಮ ಮೆಚ್ಚಿನ ಬಣ್ಣಗಳನ್ನು ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕಾರಿನ ಮುಂಭಾಗ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಕ್ಲಾಮ್‌ಶೆಲ್ ಬಾನೆಟ್ ಮತ್ತು ಎಚ್ ಆಕಾರದ ಎಲ್‌ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿವೆ. ಇನ್ನು ಈ ಮೈಕ್ರೋ ಎಸ್‍ಯುವಿಗೆ ಸುಲಭವಾಗಿ ಪ್ರವೇಶಿಸಲು ಮತ್ತು ಹೊರಬರಲು ಡೋರುಗಳು ವಿಶಾಲವಾಗಿ ತೆರೆದುಕೊಳ್ಳುತ್ತವೆ.

Article Published On: Thursday, August 10, 2023, 8:30 [IST]
English summary
New hyundai exter receives more than 50 000 bookings details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+