Hyundai Exter: ಟಾಟಾ ಪಂಚ್‌ಗೆ ನೇರ ಪ್ರತಿಸ್ಪರ್ಧಿಯಾಗುವ ತಾಕತ್ತಿದೆಯೇ?... ಈ ರಿವ್ಯೂ ವಿಡಿಯೋ ನೋಡಿ

ಭಾರತೀಯ ಮಾರುಕಟ್ಟೆಯಲ್ಲಿ ಎಸ್‌ಯುವಿ ವಿಭಾಗವೇ ಹಾಗೆ ನೋಡಿ, ಒಂದಕ್ಕೆ ಮೀರಿ ಮತ್ತೊಂದು ಎಸ್‌ಯುವಿ ಬಿಡುಗಡೆಯಾಗುತ್ತಲೇ ಇದೆ. ಇದೀಗ ಮೈಕ್ರೋ ಎಸ್‌ಯುವಿ ವಿಭಾಗದಲ್ಲಿ ತನ್ನ ಅದೃಷ್ಟ ಪರೀಕ್ಷಿಸಿಕೊಳ್ಳಲು ಹ್ಯುಂಡೈನವರ ಎಕ್ಸ್‌ಟರ್ ಬಿಡುಗಡೆಯಾಗಿದೆ. ಅದ್ಬುತ ವಿನ್ಯಾಸ, ಆಕರ್ಷಕ ನೋಟ, ಉತ್ತಮ ಮೈಲೇಜ್, ಫೀಚರ್ಸ್‌ನೊಂದಿಗೆ ಬಿಡುಗಡೆಯಾಗಿದೆ.

ಈ ಕಾರಿನ ಡಿಸೈನ್ ಹಾಗೂ ಫೀಚರ್ಸ್ ಗ್ರ್ಯಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್ ಹಾಗೂ ಔರಾ ಸೆಡಾನ್‌ಗೆ ಹೋಲಿಕೆಯಾಗುತ್ತದೆ. ಆದರೆ ಕಂಪನಿಯು ತುಸು ವ್ಯತ್ಯಾಸ ಕಾಣಲು ಎಕ್ಸ್‌ಟರ್‌ ಎಸ್‌ಯುವಿಯನ್ನು ಬೇರೆ ಲುಕ್‌ನಲ್ಲಿ ವಿನ್ಯಾಸಗೊಳಿಸಿದ್ದು, ಮುಂಭಾಗವನ್ನು ಅತ್ಯಾಕರ್ಷಕವಾಗಿ ಡಿಸೈನ್ ಮಾಡಿದೆ. ನಮ್ಮ ಡ್ರೈವ್‌ಸ್ಪಾರ್ಕ್ ತಂಡಕ್ಕೆ ಈ ಕಾರಿನ ಟೆಸ್ಟ್ ಡ್ರೈವ್ ಮಾಡಲು ಅವಕಾಶ ದೊರೆಯಿತು. ಕಾರಿನ ಕುರಿತ ಸಂಪೂರ್ಣ ಮಾಹಿತಿಯನ್ನು ಕೆಳಗಿನ ವಿಡಿಯೋದಲ್ಲಿ ನೀಡಲಾಗಿದೆ.

ಈ ಎಸ್‌ಯುವಿ, 1.2-ಲೀಟರ್, 4 ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 81.8 bhp ಗರಿಷ್ಠ ಪವರ್ ಹಾಗೂ 113.8 Nm ಪಿಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಮೋಡ್ ನಲ್ಲಿ 67.7 bhp ಪವರ್ ಮತ್ತು 95.2 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಪೆಟ್ರೋಲ್ ಆವೃತ್ತಿಯು ಮ್ಯಾನ್ಯುವಲ್ ಮತ್ತು AMT ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಸಿಎನ್‌ಜಿ ಆವೃತ್ತಿಯು ಮ್ಯಾನ್ಯುವಲ್‌ 5 ಸ್ಪೀಡ್ ಗೇರ್‌ಬಾಕ್ಸ್ ಅನ್ನು ಪಡೆದಿದೆ. ಹ್ಯುಂಡೈ ಎಕ್ಸ್‌ಟರ್‌ ಕಾರಿನ ಮೈಲೇಜ್ ವಿಚಾರವಾಗಿ ಮಾತನಾಡುವದಾದರೆ, ಪೆಟ್ರೋಲ್ ಚಾಲಿತ ಕಾರು, 19.2km/l - 19.4km/l ಇಂಧನ ದಕ್ಷತೆಯನ್ನು ಹೊಂದಿದೆ. ಸಿಎನ್‌ಜಿ ಚಾಲಿತ ಕಾರು ಗರಿಷ್ಠ 27.1km/kg ಮೈಲೇಜ್ ನೀಡುತ್ತದೆ.

new-hyundai-exter-review-video

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 17, 2023, 11:40 [IST]
English summary
New hyundai exter review video
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+