ಭಾರತದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾದ ಬಹುನಿರೀಕ್ಷಿತ ಹ್ಯುಂಡೈ ಟ್ಯೂಸಾನ್ ವಿಶೇಷತೆಗಳು
ಜನಪ್ರಿಯ ಕಾರು ಉತ್ಪಾದನಾ ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿದೆ. 2024ರ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ ಎಸ್‍ಯುವಿ ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಪ್ರಸ್ತುತ ಜನರೇಷನ್ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ (Hyundai Tucson Facelift) ಎಸ್‍ಯುವಿಯನ್ನು 2022ರ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತು.
2024ರ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ ಎಸ್‍ಯುವಿ ಕಾಸ್ಮೆಟಿಕ್ ವಿನ್ಯಾಸ ಮತ್ತು ಒಳಾಂಗಣ ಬದಲಾವಣೆಗಳೊಂದಿಗೆ ಬರುತ್ತದೆ. ಆದರೆ ಎಂಜಿನ್ ಆಯ್ಕೆಗಳು ಒಂದೇ ಆಗಿರುತ್ತವೆ. ದಕ್ಷಿಣ ಕೊರಿಯಾದ ಕಾರು ತಯಾರಕರಾದ ಹ್ಯುಂಡೈ ಫೇಸ್‌ಲಿಫ್ಟೆಡ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯನ್ನು ಅದರ ವಿನ್ಯಾಸವನ್ನು ಅದರ ಉಳಿದ ಮಾದರಿಗಳ ಸರಣಿಗೆ ಅನುಗುಣವಾಗಿ ತರಲು ನವೀಕರಿಸುವುದನ್ನು ನೋಡುತ್ತಾರೆ.

ವಿನ್ಯಾಸ: 2024ರ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ ಎಸ್‍ಯುವಿ ಕಾಸ್ಮೆಟಿಕ್ ವಿನ್ಯಾಸ ಬದಲಾವಣೆಗಳೊಂದಿಗೆ ಬರುತ್ತದೆ, ಇದು ಬ್ರ್ಯಾಂಡ್‌ನ ಹೊಸ ಪ್ಯಾರಾಮೆಟ್ರಿಕ್ ಡೈನಾಮಿಕ್ಸ್ ವಿನ್ಯಾಸ ಭಾಷೆಗೆ ಅನುಗುಣವಾಗಿರುತ್ತದೆ. ಸ್ಟೈಲಿಂಗ್ ಜಾಗತಿಕ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿರುವ ನ್ಯೂ ಜನರೇಷನ್ ಕೋನಾ ಮತ್ತು ಎಲ್ಲಾ ಹೊಸ ಸಾಂಟಾ ಫೆ ಎಸ್‌ಯುವಿಯಿಂದ ಪ್ರೇರಿತವಾಗಿದೆ.
2024ರ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯ ಮುಂಭಾಗದ ಫಾಸಿವು ಬ್ರ್ಯಾಂಡ್‌ನ ಸಿಗ್ನೇಚರ್ ಫ್ರಂಟ್ ಗ್ರಿಲ್ ಮತ್ತು ಸ್ವಲ್ಪ ಪರಿಷ್ಕೃತ ಹೆಡ್‌ಲೈಟ್‌ಗಳನ್ನು ಪಡೆಯುತ್ತದೆ. ಇದು ಮುಂಭಾಗ ಮತ್ತು ಹಿಂಭಾಗದಲ್ಲಿ ಪ್ರಮುಖ ಸ್ಕಿಡ್ ಪ್ಲೇಟ್‌ಗಳು ಮತ್ತು ಹೊಸ ಅಲಾಯ್ ವ್ಹೀಲ್ ಗಳೊಂದಿಗೆ ಬರುತ್ತದೆ. ಈ ಹೊಸ ಟ್ಯೂಸಾನ್ ವಿನ್ಯಾಸ ಮತ್ತಷ್ಟು ಸೋರ್ಟಿಯಾಗಿದೆ.

ಫೀಚರ್ಸ್: ಹೊಸ ಎಸ್‍ಯುವಿಯ ಒಳಭಾಗದಲ್ಲಿ ಹೊಸ ಪ್ಯಾನೆಲ್ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಮತ್ತು ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಅನ್ನು ನೀಡಿದೆ. ಇನ್ನು ಈ ಎಸ್‍ಯುವಿಯಲ್ಲಿ ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗಿದೆ, ಇದು ಈಗ ವಿಭಿನ್ನ ಕಾರ್ಯಗಳಿಗಾಗಿ ಹೊಸ ಹ್ಯಾಪ್ಟಿಕ್ ಕಂಟ್ರೋಲ್ ಸ್ಟಾಕ್ ಅನ್ನು ಹೊಂದಿದೆ. ಸೆಂಟರ್ ಸ್ಟಾಕ್ ಸೆಂಟರ್ ಕನ್ಸೋಲ್‌ನ ಮುಂದೆ ದೊಡ್ಡ ಸ್ಟೋರೇಜ್ ಸ್ಪೇಸ್ ಅನ್ನು ಹೊಂದಿದೆ.
2024ರ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಯಾವುದೇ ಯಾಂತ್ರಿಕ ಬದಲಾವಣೆಗಳನ್ನು ಪಡೆದಿಲ್ಲ ಮತ್ತು ಅದರ ಪ್ರಸ್ತುತ ಎಂಜಿನ್ ಆಯ್ಕೆಗಳೊಂದಿಗೆ ಮುಂದುವರೆದಿದೆ. 2024ರ ಹ್ಯುಂಡೈ ಟ್ಯೂಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.0-ಲೀಟರ್ ಪೆಟ್ರೋಲ್ ಮತ್ತು ಟರ್ಬೊ ಡೀಸೆಲ್ ಎಂಜಿನ್‌ಗಳೊಂದಿಗೆ ನೀಡಲಾಗುತ್ತದೆ. ಈ ಎಂಜಿನ್ 156 bhp ಪವರ್ ಮತ್ತು 192 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಈ ಎಸ್‍ಯುವಿಯಲ್ಲಿ 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬರುತ್ತದೆ, ಅದು ಅಲ್ಕಾಜರ್‌ಗೆ 160 bhp ಪವರ್ ಅನ್ನು ಉತ್ಪಾದಿಸುತ್ತದೆ. ಇನ್ನು ಸೆಲ್ ಆವೃತ್ತಿಯು 2.0-ಲೀಟರ್ ಯೂನಿಟ್ ಅನ್ನು ಪಡೆಯುತ್ತದೆ, ಇದು 186 bhp ಮತ್ತು 416 Nm ಟಾರ್ಕ್ ಅನ್ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ಎಯುವಿಯು ಮಲ್ಟಿ-ಟೆರೈನ್ ಮೋಡ್‌ಗಳೊಂದಿಗೆ AWD ಸೆಟಪ್‌ನೊಂದಿಗೆ ಬರುತ್ತದೆ. ಇನ್ನು ಹುಂಡೈ ಕಂಪನಿಯು ತನ್ನ ಹೊಸ ಕ್ರೆಟಾ ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಹುಂಡೈ ಕ್ರೆಟಾ ಮಾದರಿಯು ಹೊಸ ವೆರ್ನಾ ಸೆಡಾನ್‌ನಿಂದ ಒಳಭಾಗ ಮತ್ತು ವೈಶಿಷ್ಟ್ಯಗಳನ್ನು ಹಂಚಿಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications