ಹೊಸ ನವೀಕರಣಗಳೊಂದಿಗೆ ಬರಲಿದೆ ಜೀಪ್ ಕಂಪಾಸ್ ಎಸ್‍ಯುವಿ
ಅಮೆರಿಕ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಜೀಪ್ ಕಂಪಾಸ್ ಎಸ್‌ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. 2024ರ ಜೀಪ್ ಕಂಪಾಸ್ (Jeep Compass) ಯುರೋಪ್‌ನಲ್ಲಿ ಮಾಡೆಲ್ ಇಯರ್ ಅಪ್‌ಡೇಟ್‌ನ ಭಾಗವಾಗಿ ಹೊಸ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆಯುತ್ತದೆ ಮತ್ತು ಅದರ ಲಭ್ಯತೆಯನ್ನು ಇತರ ಜಾಗತಿಕ ಮಾರುಕಟ್ಟೆಗಳಿಗೂ ವಿಸ್ತರಿಸಬಹುದು.
ಈ ಎಸ್‍ಯುವಿಯನ್ನು ಭಾರತದಲ್ಲಿ FCA ಯ ರಂಜನ್‌ಗಾಂವ್ ಸೌಲಭ್ಯದಿಂದ ಹೊರತರಲಾಗಿದೆ ಮತ್ತು ಇದು ಬಲಗೈ-ಡ್ರೈವ್ ಮಾರುಕಟ್ಟೆಗಳಿಗೆ ಉತ್ಪಾದನಾ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ. ಇದರ ಏಳು ಸೀಟುಗಳ ಮೆರಿಡಿಯನ್ ಅನ್ನು ಭಾರತದಲ್ಲಿಯೂ ಮಾರಾಟ ಮಾಡಲಾಗುತ್ತದೆ. ಇತ್ತೀಚಿನ ಜೀಪ್ ಕಂಪಾಸ್ 2016 ರಿಂದ ಮಾರಾಟದಲ್ಲಿದೆ ಮತ್ತು ಕಳೆದ ಏಳು ವರ್ಷಗಳಲ್ಲಿ, ಇದು ಭಾರತದಲ್ಲಿ ಮತ್ತು ವಿದೇಶದಲ್ಲಿ ನಿಯಮಿತ ನವೀಕರಣಗಳು ಮತ್ತು ರೂಪಾಂತರಗಳನ್ನು ಸ್ವೀಕರಿಸಿದೆ.

ಯುರೋಪ್‌ನಲ್ಲಿ, 2024 ಜೀಪ್ ಕಂಪಾಸ್ ಅನ್ನು ಇ-ಹೈಬ್ರಿಡ್ ಮತ್ತು 4Xe ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯೊಂದಿಗೆ ಮಾರಾಟ ಮಾಡಲಾಗಿದೆ ಮತ್ತು ಈ ಬಾರಿ ಯಾವುದೇ ದೃಶ್ಯ ಪರಿಷ್ಕರಣೆ ಮಾಡಲಾಗಿಲ್ಲ ಮತ್ತು ಒಳಭಾಗವು ಒಂದೇ ಆಗಿರುತ್ತದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ. ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.
ಈ ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಒಳಗೊಂಡಿದೆ. ಇದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್ ಫೀಚರ್ ಗಳನ್ನು ಒಳಗೊಂಡಿವೆ. ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಂತರಿಕ ಮತ್ತು ಬಾಹ್ಯ ನವೀಕರಣಗಳೊಂದಿಗೆ ಪರಿಚಯಿಸಿದ್ದರು.

ಈ ಜೀಪ್ ಕಂಪಾಸ್ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ),ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಮಾಡೆಲ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಕೂಡ ಲಭ್ಯವಿದೆ. ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿತ್ತು, ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಗೊಂಡ 2021ರ ಜೀಪ್ ಕಂಪಾಸ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ.
ಈ ಎಸ್‍ಯುವಿಯ ಹೊರಗಿನ ನವೀಕರಣಗಳನ್ನು ಹತ್ತಿರದಿಂದ ಗಮನಿಸಿದರೆ ಮಾತ್ರ ತಿಳಿಯುತ್ತದೆ. ಇನ್ನು ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಪಡೆದುಕೊಂಡಿತ್ತು. ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿರುತ್ತದೆ. ಇದರೊಂದಿಗೆ ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಕೂಡ ಒಳಗೊಂಡಿದೆ.

ಈ ಜೀಪ್ ಕಂಪಾಸ್ ಎಸ್‍ಯುವಿಯಲ್ಲಿ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಕಂಪಾಸ್ ಪೆಟ್ರೋಲ್ ರೂಪಾಂತರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿತ್ತು. ಸದ್ಯ, ಕಂಪನಿ ಅಧಿಕೃತ ಹೇಳಿಕೆಯನ್ನು ಬಿಡುಗಡೆಗೊಳಿಸುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ. ಈ ಮೂಲಕ ಕಂಪಾಸ್ ಪೆಟ್ರೋಲ್ ವೇರಿಯೆಂಟ್ ಯುಗಾಂತ್ಯವಾಗಿದೆ.
ಸುರಕ್ಷತೆಯ ದೃಷ್ಟಿಯಿಂದಲೂ 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ರೋಲ್‌ಓವರ್ ಮಿಟಿಗೇಶನ್, ಹಿಲ್ ಹೋಲ್ಡ್ ಅಸಿಸ್ಟ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, 360 ಡಿಗ್ರಿ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಒಟ್ಟಾರೆ, ಜೀಪ್ ಕಂಪನಿ ಕಂಪಾಸ್ ಪೆಟ್ರೋಲ್ ರೂಪಾಂತರವನ್ನು ಸ್ಥಗಿತಗೊಳಿಸಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.


Click it and Unblock the Notifications








