ಆಕರ್ಷಕ ಬೆಲೆ‌, ರಾಜಿಯಾಗದ ಫೀಚರ್ಸ್, ಪವರ್‌ಫುಲ್‌ ಪರ್ಫಾಮೆನ್: ಕಿಯಾ ಸೆಲ್ಟೋಸ್ 2.0

ಜನಪ್ರಿಯ ಕಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್‍ಯುವಿಯಾಗಿದೆ. ಇತ್ತೀಚೆಗೆ ಹೊಸ ನವೀಕರಣಗಳೊಂದಿಗೆ ಕಿಯಾ ಇಂಡಿಯಾ ಕಂಪನಿಯು 2023ರ ಕಿಯಾ ಸೆಲ್ಟೋಸ್ (Kia Seltos ) ಭಾರತದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿ ಸುನಾಮಿ ಎಬ್ಬಿಸಿದೆ. ಈ ಕಿಯಾ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು.

ಭಾರತದ ಗ್ರಾಹಕರು ಹೊಸ ಸೆಲ್ಟೋಸ್ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ.ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿದೆ. ಈ ರಿಫ್ರೆಶ್ ಮಾಡೆಲ್ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾದರಿಯು ಸೋರ್ಟಿ ವಿನ್ಯಾಸ, ಅತ್ಯಾಧುನಿಕ ಫೀಚರ್ಸ್ ಮತ್ತು ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ಈ ವೀಡಿಯೋ ನೋಡಿ.

ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಮಾಡೆಲ್ ಅದರ ಸ್ಪೋರ್ಟಿ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ. ಇನ್ನು ಈ ಹೊಸ ಎಸ್‍ಯುವಿಯ ಒಳಭಾಗವು ಅದರ ಹೊಸ ಡ್ಯುಯಲ್-ಸ್ಕ್ರೀನ್ ವಿನ್ಯಾಸದೊಂದಿಗೆ ಹೆಚ್ಚು ಹೈಟೆಕ್ ಆಗಿ ಕಾಣುತ್ತದೆ. ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಬಗ್ಗೆ ಹೇಳುವುದಾದರೆ, ಪ್ರಮುಖ ಅಂಶವೆಂದರೆ ಈಗ ಲೆವೆಲ್-2 ADAS ತಂತ್ರಜ್ಞಾನವನ್ನು ಹೊಂದಿದೆ.

ಈ ಲೆವೆಲ್-2 ADAS ತಂತ್ರಜ್ಞಾನವು ಆಟೋ ಎಮರ್ಜೆನ್ಸಿ ಬ್ರೇಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ರಿಯರ್ ಕ್ರಾಸ್-ಟ್ರಾಫಿಕ್ ಅಲರ್ಟ್, ಲೇನ್-ಕೀಪಿಂಗ್ ಅಸಿಸ್ಟ್, ಬ್ಲೈಂಡ್-ಸ್ಪಾಟ್ ಮಾನಿಟರಿಂಗ್ ಮತ್ತು ಹೆಚ್ಚಿನ ಸುರಕ್ಷತಾ ಫೀಚರ್ಸ್ ಗಳನ್ನು ಒಳಗೊಂಡಿವೆ. ಈ ಹೊಸ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್‌ಎಸ್‍ಯುವಿಗೆ HTE, HTK, HTK+ ಮತ್ತು HTX ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.

Kia Seltos

2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ನ್ಯಾಚುರಲ್ ಆಸ್ಪರರ್ಡ್ ಪೆಟ್ರೋಲ್ ಎಂಜಿನ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಒಳಗೊಂಡಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್, 6-ಸ್ಪೀಡ್ ಐಎಂಟಿ ಯುನಿಟ್, ಸಿವಿಟಿ ಯುನಿಟ್, ಸಿವಿಟಿ ಯುನಿಟ್, 6-ಜಿ-ಸ್ಪೀಡ್ ಡ್ಯುಯಲ್ ಟ್ರಾನ್ಸ್‌ಮಿಷನ್ ಮತ್ತು 6-ಜಿ-ಸ್ಪೀಡ್ ಡ್ಯುಯಲ್ ಟ್ರಾನ್ಸ್‌ಮಿಷನ್ ಆಯ್ಕೆಗಳನ್ನು ಹೊಂದಿವೆ.

ಇನ್ನು 2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.5-ಲೀಟರ್, ನ್ಯಾಚುರಲ್ ಪೆಟ್ರೋಲ್ ಎಂಜಿನ್ ಅನ್ನು ನೀಡಲಾಗಿದೆ. ಈ ಎಂಜಿನ್ 113bhp ಮತ್ತು 144Nm ಪೀಕ್ ಟಾರ್ಕ್‌ನೊಂದಿಗೆ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ iMT ಗೇರ್‌ಬಾಕ್ಸ್ ಅಥವಾ CVT ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ಫೇಸ್‌ಲಿಫ್ಟೆಡ್ ಮಾಡೆಲ್‌ನಲ್ಲಿಯೂ 1.5-ಲೀಟರ್, ಟರ್ಬೋಚಾರ್ಜ್ಡ್, ಡೀಸೆಲ್ ಎಂಜಿನ್ ಅನ್ನು ಹೊಂದಿದೆ.

1.5-ಲೀಟರ್, ಟರ್ಬೋಚಾರ್ಜ್ಡ್, ಡೀಸೆಲ್ ಎಂಜಿನ್ 114bhp ಮತ್ತು 250Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಯುನಿಟ್‌ನೊಂದಿಗೆ ಜೋಡಿಸಬಹುದು. ಇನ್ನು ಕೊನೆಯದಾಗಿ, ಹೊಸದಾಗಿ ಪರಿಚಯಿಸಲಾದ 1.5-ಲೀಟರ್, ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 158 bhp ಪವರ್ ಮತ್ತು 253 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು 6-ಸ್ಪೀಡ್ iMT ಯುನಿಟ್ ಅಥವಾ 7-ಸ್ಪೀಡ್ DCT ಗೇರ್‌ಬಾಕ್ಸ್‌ನೊಂದಿಗೆ ನೀಡಬಹುದು. ಇನ್ನು ಕಿಯಾ ಸೆಲ್ಟೋಸ್ ಅದರ ಫೀಚರ್ಸ್-ಲೋಡ್ ಮಾಡಲಾದ ಒಳಾಂಗಣಕ್ಕೆ ಹೆಸರುವಾಸಿಯಾಗಿದೆ. ಈ ಫೇಸ್‌ಲಿಫ್ಟೆಡ್ ಮಾಡೆಲ್ ವಿಭಿನ್ನವಾಗಿಲ್ಲ. 2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಮಾಡೆಲ್ ಅದರ ಸ್ಪೋರ್ಟಿ ವಿನ್ಯಾಸದ ಅಂಶಗಳೊಂದಿಗೆ ಮತ್ತಷ್ಟು ಸ್ಪೋರ್ಟಿಯಾಗಿ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತಿದೆ.

More from DriveSpark

Article Published On: Wednesday, November 8, 2023, 11:32 [IST]
English summary
New kia seltos 2 0 video design features specs details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+