Maruti Suzuki Swift: ಬಿಡುಗಡೆಗೂ ಮುನ್ನವೇ ಕಾಣಿಸಿತು ಹೊಸ ಮಾರುತಿ ಸುಜುಕಿ ಸ್ವಿಫ್ಟ್, 35 KM ಮೈಲೇಜ್?

ದೇಶದಲ್ಲಿ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಜನಪ್ರಿಯವಾಗಿದೆ. ಜಪಾನೀಸ್ ಮೊಬಿಲಿಟಿ ಶೋನಲ್ಲಿ ಸುಜುಕಿ (Suzuki), 4ನೇ ತಲೆಮಾರಿನ ಸ್ವಿಫ್ಟ್ (Fourth - Generation Swift) ಕಾರನ್ನು ಪ್ರದರ್ಶನ ಮಾಡಿತ್ತು. ಅಂದಿನಿಂದ ಈ ಕಾರಿಗೆ ಭಾರತದಲ್ಲಿಯೂ ಭಾರೀ ನಿರೀಕ್ಷೆಗಳು ಹೆಚ್ಚಾಗಿವೆ.

ಈ ಹೊಸ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ದೇಶೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದ (2024) ಆರಂಭದಲ್ಲಿ ಬಹುತೇಕ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಹಲವು ಭಾರೀ ನಮ್ಮ ರಸ್ತೆಗಳಲ್ಲಿ ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದೆ. ಇತ್ತೀಚೆಗೂ ಸಂಪೂರ್ಣವಾಗಿ ಕವರ್ ಮಾಡಲಾದ ನೂತನ ಸ್ವಿಫ್ಟ್ ಟೆಸ್ಟ್ ವೇಳೆ ಕಾಣಿಸಿಕೊಂಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

Maruti Suzuki Swift: ಬಿಡುಗಡೆಗೂ ಮುನ್ನವೇ ಕಾಣಿಸಿತು ಹೊಸ ಮಾರುತಿ ಸುಜುಕಿ ಸ್ವಿಫ್ಟ್, 35 KM ಮೈಲೇಜ್?

ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋದಲ್ಲಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ರೇರ್ ಪ್ರೊಫೈಲ್ (ಹಿಂಭಾಗ) ಅನ್ನು ನೋಡಬಹುದು. ಕಂಪನಿಯು ಭಾರತದಲ್ಲಿ ಈ ಕಾರಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಲ್ಲ. ಆದರೂ ಜಾಗತಿಕವಾಗಿ ಅನಾವರಣಗೊಳಿಸಲಾದ ಮಾದರಿಯಂತೆಯೇ ಇದೆ. ಹಿಂಭಾಗದ ಬಂಪರ್‌ ಮತ್ತು ಟೈಲ್ ಲ್ಯಾಂಪ್‌ ನವೀನ ವಿನ್ಯಾಸವನ್ನು ಹೊಂದಿರುವುದನ್ನು ಸುಲಭವಾಗಿ ಗುರುತಿಸಬಹುದು.

ಅಲ್ಲದೆ, ನೂತನ ಸ್ವಿಫ್ಟ್, ಮರು - ವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್, ನವೀನವಾದ ಕಪ್ಪು ಬಣ್ಣದ ಗ್ರಿಲ್, ಆಕರ್ಷಕ ಎಲ್ಇಡಿ ಹೆಡ್‌ಲ್ಯಾಂಪ್‌, ಡ್ಯುಯಲ್ - ಟೋನ್ ವೀಲ್ಸ್ ಕೂಡ ಹೊಂದಿದೆ. ಇದನ್ನು ಜಾಗತಿಕವಾಗಿ ಪ್ರದರ್ಶಿಸಲಾದ ಮಾದರಿಯಲ್ಲಿ ನೋಡಬಹುದು. ಸುರಕ್ಷತೆಯ ಸಲುವಾಗಿ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯದೊಂದಿಗೆ ಲಾಂಚ್ ಆಗಬಹುದು ಎಂದು ಹೇಳಲಾಗಿದೆ.

ಮುಂಬರಲಿವ ಈ ಕಾರು, 1.2 - ಲೀಟರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹಾಗೂ ಇ - ಸಿವಿಟಿ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗ್ರಾಹಕರಿಗೆ ಖರೀದಿಗೆ ಸಿಗುವ ಸಾಧ್ಯತೆಯಿದ್ದು, 30 - 35 kmpl ಮೈಲೇಜ್ ನೀಡಬಹುದು ಎನ್ನಲಾಗಿದೆ. ಮತ್ತೊಂದು, ನಾನ್ ಹೈಬ್ರಿಡ್ 1.2 - ಲೀಟರ್ 3 - ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಆಯ್ಕೆಯೊಂದಿಗೂ ಖರೀದಿದಾರಿಗೆ ಲಭ್ಯವಾಗಬಹುದು.

ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್, ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಈ ಕಾರು, ಆಕರ್ಷಕ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ವೈರ್‌ಲೆಸ್ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕನೆಕ್ಟ್ ಕಾರ್ ಕಾರ್ ಟೆಕ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 360 - ಡಿಗ್ರಿ ಕ್ಯಾಮೆರಾ ಏರ್ ಬ್ಯಾಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿರಬಹುದು.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್, ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್, ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ . ರೂಪಾಂತರಗಳಿಗೆ ಅನುಗುಣವಾಗಿ 22.38 - 22.56 kmpl ಮೈಲೇಜ್ ನೀಡುತ್ತದೆ.

ಈ ಕಾರು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ನಾನಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಿಲ್ - ಹೋಲ್ಡ್ ಕಂಟ್ರೋಲ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಒಳಗೊಂಡಿದೆ.

Article Published On: Tuesday, November 28, 2023, 20:41 [IST]
English summary
New maruti suzuki swift spotted indian roads before launch 35 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+