Maruti Suzuki: ಮಾರುತಿ ಸುಜುಕಿ ಸ್ವಿಫ್ಟ್ ಹೊಸ ಅವತಾರದಲ್ಲಿ.. ಮೈಲೇಜ್‌ನಲ್ಲಿ ಯಾವ ಬೈಕ್‌ಗೂ ಕಮ್ಮಿಯಿಲ್ಲ!

ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ಅದರ ಕಾರುಗಳ ಆಕರ್ಷಕ ವೈಶಿಷ್ಟ್ಯ, ವಿನ್ಯಾಸ ಹಾಗೂ ಕೈಗೆಟುಕುವ ಬೆಲೆ ಪ್ರತಿಯೊಬ್ಬ ಗ್ರಾಹಕರನ್ನು ಸೆಳೆಯುತ್ತಿದೆ. ಪ್ರಸ್ತುತ, ಕಂಪನಿಯ ಜನಪ್ರಿಯ ಹ್ಯಾಚ್‌ಬ್ಯಾಕ್ 'ಸ್ವಿಫ್ಟ್' ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ಜಪಾನ್ ಸ್ಥಳೀಯ ಮಾಧ್ಯಮಗಳ ಇತ್ತೀಚಿನ ವರದಿಯ ಪ್ರಕಾರ, ಇಂಡೋ - ಜಪಾನ್ ವಾಹನ ತಯಾರಕ ಕಂಪನಿಯಾಗಿರುವ ಮಾರುತಿ ಸುಜುಕಿ 2023ರ ಅಂತ್ಯ ವೇಳೆಗೆ ಐದನೇ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಪರಿಚಯಿಸಲಿದೆ. ಆ ಬಳಿಕ, 2024ರ ಫೆಬ್ರವರಿಯಲ್ಲಿ ಭಾರತದಲ್ಲಿ ಲಾಂಚ್ ಆಗಬಹುದು. ಆದರೆ, ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Maruti Suzuki: ಮಾರುತಿ ಸುಜುಕಿ ಸ್ವಿಫ್ಟ್ ಹೊಸ ಅವತಾರದಲ್ಲಿ.. ಮೈಲೇಜ್‌ನಲ್ಲಿ ಯಾವ ಬೈಕ್‌ಗೂ ಕಮ್ಮಿಯಿಲ್ಲ!

ಇದೊಂದು ಸ್ಪೋರ್ಟಿಯರ್ ಆವೃತ್ತಿಯಾಗಿದ್ದು, ಬಹುತೇಕ ಈ ಕಾರಿಗೆ 'ಸ್ವಿಫ್ಟ್ ಸ್ಪೋರ್ಟ್' ಎಂದು ಹೆಸರಿಡಬಹುದು ಎಂದು ಅಂದಾಜಿಸಲಾಗಿದೆ. ಮಾರುತಿ ಸುಜುಕಿ ಹಾಗೂ ಟೊಯೊಟಾ ಕಂಪನಿಗಳು ಪಾಲುದಾರಿಕೆ ಹೊಂದಿರುವುದರಿಂದ ಹೊಚ್ಚ ಹೊಸ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಸಹ ಟೊಯೊಟಾ ಕಾರುಗಳು ಹೊಂದಿರುವಂತೆ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್ ತಂತ್ರಜ್ಞಾನವನ್ನು ಪಡೆದಿರುವ ನೀರಿಕ್ಷೆಯಿದೆ.

ಒಂದೊಮ್ಮೆ ನೂತನ ಸ್ವಿಫ್ಟ್ ಕಾರು 1.2 ಲೀಟರ್ 3 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಪಡೆದರೆ, ಯಾವ ಬೈಕ್‌ಗೂ ಕಮ್ಮಿಯಿಲ್ಲ ಎಂಬಂತೆ ಇಂಧನ ದಕ್ಷತೆ ಹೊಂದಿರಲಿದೆ. ಮೂಲಗಳ ಪ್ರಕಾರ, 35 - 40kmpl ಮೈಲೇಜ್ ನೀಡುವ ಸಾಧ್ಯತೆಯಿದೆ. ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುತ್ತಿರುವ ಈಗಿನ ಸ್ವಿಫ್ಟ್ ಕಾರಿಗಿಂತ ಇದು ದುಪಟ್ಟು ಎಂದು ಸುಲಭವಾಗಿ ಹೇಳಬಹುದು.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹೊರ ಹಾಗೂ ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿರಲಿದೆ. ಮುಖ್ಯವಾಗಿ ಹೊಸದಾದ ಗ್ರಿಲ್, ಎಲ್ಇಡಿ ಸ್ಲೀಕರ್ ಹೆಡ್‌ಲ್ಯಾಂಪ್ಸ್, ಬ್ಲ್ಯಾಕ್ ಔಟ್ ಪಿಲ್ಲರ್‌, ರೂಫ್ ಮೌಂಟೆಡ್ ಸ್ಪಾಯ್ಲರ್‌, ವೀಲ್ ಆರ್ಚ್ಸ್, ಆಸನ ಹಾಗೂ ಬಂಪರ್‌ ನಲ್ಲಿ ಬದಲಾವಣೆಗಳನ್ನು ಹೊಂದಿರಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವಾಯ್ಸ್ ಕಂಟ್ರೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿತಂತಹ ವೈಶಿಷ್ಟ್ಯಗಳನ್ನು ಪಡೆದಿರಬಹುದು.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಸ್ವಿಫ್ಟ್ ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. LXi ಹಾಗೂ VXi ಸೇರಿದಂತೆ ಐದು ರೂಪಾಂತರಗಳಲ್ಲಿ ಆಯ್ಕೆಯಲ್ಲಿ ಸಿಗುತ್ತದೆ. ಇದು, ಪೆಟ್ರೋಲ್ ಹಾಗೂ CNG ಎಂಜಿನ್ ಆಯ್ಕೆಯನ್ನು ಹೊಂದಿದ್ದು, ವೇರಿಯೆಂಟ್ ಗೆ ಅನುಗುಣವಾಗಿ 22.38 - 22.56 kmpl ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಸ್ವಿಫ್ಟ್ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಮತ್ತು ಎಲ್‌ಇಡಿ ಹೆಡ್‌ಲೈಟ್ಸ್ ಹಾಗೂ ಎಲ್‌ಇಡಿ DRLs ಅನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯೂಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ವಿವಿಧ ಫೀಚರ್ಸ್ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 3, 2023, 18:35 [IST]
English summary
New maruti suzuki swift unveiled late 2023 report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+