ಹೊಸ ರೂಪದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿರುವ ರೆನಾಲ್ಟ್ ಡಸ್ಟರ್ ವಿಶೇಷತೆಗಳು

ಭಾರತದಲ್ಲಿ ಯಶಸ್ವಿ ದಶಕದ ಓಟದ ನಂತರ, ರೆನಾಲ್ಟ್ ಡಸ್ಟರ್ (Renault Duster) ಎಸ್‍ಯುವಿಯು 2022ರಲ್ಲಿ ಸ್ಥಗಿತಗೊಂಡಿತು. ಪ್ರಸ್ತುತ, ಫ್ರೆಂಚ್ ವಾಹನ ತಯಾರಕ ಕಂಪನಿಯಾದ ರೆನಾಲ್ಟ್ ಭಾರತೀಯ ಪೋರ್ಟ್‌ಫೋಲಿಯೊ ಮೂರು ಮಾದರಿಗಳನ್ನು ಒಳಗೊಂಡಿದೆ. ರೆನಾಲೃ ಕಂಪನಿಯ ಕ್ವಿಡ್ ಹ್ಯಾಚ್‌ಬ್ಯಾಕ್, ಟ್ರೈಬರ್ ಎಂಪಿವಿ ಮತ್ತು ಕಿಗರ್ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿ ಮಾದರಿಗಳು ಪ್ರಸ್ತುತ ಭಾರತದಲ್ಲಿ ಮಾರಾಟವಾಗುತ್ತಿದೆ.

ಫ್ರೆಂಚ್ ವಾಹನ ತಯಾರಕ ಕಂಪನಿಯಾದ ರೆನಾಲ್ಟ್ ತನ್ನ ಜನಪ್ರಿಯ ಡಸ್ಟರ್ ಎಸ್‍ಯುವಿಯ ನ್ಯೂ ಜನರೇಷನ್ ಮಾದರಿಯು 2023ರ ನವೆಂಬರ್ 29 ರಂದು ಅನಾವರಣವಾಗಲಿದೆ. ಈ ನ್ಯೂ ಜನರೇಷನ್ ರೆನಾಲ್ಟ್ ಡಸ್ಟರ್ ಎಸ್‍ಯುವಿಯು ಭಾರತದಲ್ಲಿ 2025ರಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ನ್ಯೂ ಜನರೇಷನ್ ರೆನಾಲ್ಟ್ ಡಸ್ಟರ್ ಎಸ್‍ಯುವಿಯು ಸ್ಥಳೀಯವಾಗಿರುವ CMF-B ಮಾಡ್ಯುಲರ್ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದೆ.

New Renault Duster

ಹೊಸ ರೆನಾಲ್ಟ್ ಡಸ್ಟರ್ ಜೊತೆಗೆ ರೆನಾಲ್ಟ್ ಕಂಪನಿಯು ಹೊಸ ಬಿಗ್‌ಸ್ಟರ್ ಎಂಬ 7-ಸೀಟರ್ ಮಿಡ್ ಸೈಜ್ ಎಸ್‍ಯುವಿ ಕಾನ್ಸೆಪ್ಟ್ ಮಾದರಿಯನ್ನು ಪರಿಚಯಿಸಲಿದೆ ಎಂದು ಹೇಳಲಾಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ರೆನಾಲ್ಟ್ ಮತ್ತು ನಿಸ್ಸಾನ್ ಎರಡಕ್ಕೂ ವ್ಯಾಪಕ ಸರಣಿಯ ಹೊಸ ಮಾದರಿಗಳನ್ನು ಉತ್ಪಾದಿಸಲು ಇದೇ ಪ್ಲಾಟ್‌ಫಾರ್ಮ್ ಅನ್ನು ಬಳಸಲಾಗುತ್ತದೆ. ರೆನಾಲ್ಟ್ ಮೂರನೇ ತಲೆಮಾರಿನ ಡಸ್ಟರ್ ಎಸ್‌ಯುವಿಯನ್ನು 2024-25ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ.

ಹೊಸ ಡಸ್ಟರ್ ಮಾದರಿಯನ್ನು ಹೊಸ CMF-B ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗುವುದು ಮತ್ತು ಅಭಿವೃದ್ಧಿಪಡಿಸಲಾಗುವುದು. ಈ ಆಧುನಿಕ ಪ್ಲಾಟ್‌ಫಾರ್ಮ್ ಹೆಚ್ಚು ಆಧುನಿಕ ವೈಶಿಷ್ಟ್ಯಗಳು ಮತ್ತು ಆಧಾರಗಳನ್ನು ನೀಡಲು ರೆನಾಲ್ಟ್ ಕಂಪನಿಗೆ ಅವಕಾಶ ನೀಡುತ್ತದೆ. ನಿಸ್ಸಾನ್ ಕಂಪನಿಯೊಂದಿಗೆ ರೆನಾಲ್ಟ್‌ನ ಪಾಲುದಾರಿಕೆಯು ಈ ಹೊಸ ಮಾದರಿಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ.

New Renault Duster

CMF-B ಪ್ಲಾಟ್‌ಫಾರ್ಮ್ ಅನ್ನು ಭಾರತ ಸೇರಿದಂತೆ ಇತರ ಹೊಸ ಉದಯೋನ್ಮುಖ ಮಾರುಕಟ್ಟೆಗಳಲ್ಲಿ ಬಳಸಲು ಮಾರ್ಪಡಿಸಲಾಗಿದೆ. ರೆನಾಲ್ಟ್ ಡಸ್ಟರ್ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಎಂಜಿ ಆಸ್ಟರ್, ಮಾರುತಿ ಸುಜುಕಿ ಗ್ರಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ವಿಡಬ್ಲ್ಯೂ ಟೈಗನ್ ಮತ್ತು ಸ್ಕೋಡಾ ಕುಶಾಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡಲಿದೆ.

ಈ ಹೊಸ ರೆನಾಲ್ಟ್ ಡಸ್ಟರ್ ಎಸ್‍ಯುವಿಯಲ್ಲಿ ನೀಡುವ ಎಂಜಿನ್ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ. ರೆನಾಲ್ಟ್ ಡಸ್ಟರ್ ಹಿಂದಿನ ಮಾದರಿಯಲ್ಲಿ 1.0-ಲೀಟರ್ ಮೂರು-ಸಿಲಿಂಡರ್ NA ಪೆಟ್ರೋಲ್ ಮತ್ತು 1.0-ಲೀಟರ್ ಮೂರು-ಸಿಲ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿತ್ತು. ಈ ಎಂಜಿನ್ ಗಳೊಂದಿಗೆ ಮ್ಯಾನುಯಲ್ ಮತ್ತು AMT ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿತ್ತು.

New Renault Duster

ರೆನಾಲ್ಟ್ ಡಸ್ಟರ್ ಎಸ್‍ಯುವಿಯ ಉತ್ಪಾದನೆಯನ್ನು ಸುಮಾರು ಒಂದು ವರ್ಷದ ಹಿಂದೆ ತಮಿಳುನಾಡಿನಲ್ಲಿರುವ ರೆನಾಲ್ಟ್ ಉತ್ಪಾದನಾ ಘಟಕದಲ್ಲಿ ಸ್ಥಗಿತಗೊಳಿಸಲಾಯಿತು. ಈ ಹೊಸ ರೆನಾಲ್ಟ್ ಡಸ್ಟರ್ ಎಸ್‍ಯುವಿಯು ಸುಮಾರು ಒಂದು ದಶಕದ ಕಾಲ ಪ್ರೀಮಿಯಂ ಬ್ರ್ಯಾಂಡ್ ಇಮೇಜ್ ಅನ್ನು ರಚಿಸುವ ಮೂಲಕ ನಿಜವಾಗಿಯೂ ರೆನಾಲ್ಟ್ ಕಂಪನಿಗೆ ದೊಡ್ಡ ಕೊಡುಗೆಯನ್ನು ನೀಡಿತ್ತು. ನ್ಯೂ ಜನರೇಷನ್ ಡಸ್ಟರ್ ಎಸ್‍ಯುವಿ ಬಿಡುಗಡೆಯ ಬಳಿಕ, ರೆನಾಲ್ಟ್ CBU ಮಾರ್ಗದ ಮೂಲಕ ಜಾಗತಿಕ ಮಾದರಿಗಳನ್ನು ಭಾರತಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.

ಫ್ರೆಂಚ್ ವಾಹನ ತಯಾರಕರು 2021ರ ಆರಂಭದಲ್ಲಿ ಬಿಗ್‌ಸ್ಟರ್ 7-ಸೀಟರ್ ಎಸ್‍ಯುವಿ ಕಾನ್ಸೆಪ್ಟ್ ಅನ್ನು ಬಹಿರಂಗಪಡಿಸಿದ್ದರು. ಎಸ್‍ಯುವಿಯ ಉತ್ಪಾದನಾ ಆವೃತ್ತಿಯು 2024-25 ರಲ್ಲಿ ಬರಲಿದೆ ಎಂದು ಹೇಳಲಾಗುತ್ತಿದೆ. ಈ ಡಸ್ಟರ್ ಎಸ್‍ಯುವಿ ಗಾತ್ರವು ಸ್ಕೋಡಾ ಕೊಡಿಯಾಕ್‌ನಂತಹ ದೊಡ್ಡ ಎಸ್‍ಯುವಿಗಳಿಗೆ ಪರೋಕ್ಷ ಪ್ರತಿಸ್ಪರ್ಧಿಯಾಗಿಸುತ್ತದೆ. ಈ ಹೊಸ ಬಿಗ್‌ಸ್ಟರ್ ಕಾನ್ಸೆಪ್ಟ್ ಮೀಟರ್ ಉದ್ದವನ್ನು ಹೊಂದಿರುತ್ತದೆ.

New Renault Duster

ಈ ರೆನಾಲ್ಟ್ ಡಸ್ಟರ್ ಎಸ್‍ಯುವಿಯು 2012ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿತ್ತು. ಈ ರೆನಾಲ್ಟ್ ಡಸ್ಟರ್ ಮಿಡ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಆರಂಭದಲ್ಲಿ ಹೊಸ ಸಂಚಲವನ್ನು ಸೃಷ್ಟಿಸಿತು.ಈ ರೆನಾಲ್ಟ್ ಡಸ್ಟರ್ ಎಸ್‍ಯುವಿಯು ಬಾರತದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಗ್ರಾಹಕರ ಗಮನಸೆಳೆಯಲು ಯಶಸ್ವಿಯಾಗಿತ್ತು. ರೆನಾಲ್ಟ್ ಡಸ್ಟರ್ 2014ರಲ್ಲಿ ಎಡಬ್ಲ್ಯೂಡಿ ರೂಪಾಂತರವನ್ನು ಪಡೆದುಕೊಂಡಿತು ಮತ್ತು ಎಎಂಟಿ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 2016ರಲ್ಲಿ ಮಿಡ್-ಸೈಕಲ್ ನವೀಕರಣವನ್ನು ಪಡೆದುಕೊಂಡಿತ್ತು.

ಇನ್ನು 2017ರ ಅಂತ್ಯದಲ್ಲಿ ರೆನಾಲ್ಟ್ ಕಂಪನಿಯು ಎರಡನೇ ತಲೆಮಾರಿನ ಡಸ್ಟರ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಆದರೆ ಈ ರೆನಾಲ್ಟ್ ಡಸ್ಟರ್ ಎಸ್‍ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿಲ್ಲ. 2019ರ ಜುಲೈ ತಿಂಗಳಿನಲ್ಲಿ ಡಸ್ಟರ್‌ಗೆ ಜಾಗತಿಕ ಮಾದರಿಯಂತೆಯೇ ವಿನ್ಯಾಸ ಪರಿಷ್ಕರಣೆಗಳೊಂದಿಗೆ ಹೆಚ್ಚು ಅಗತ್ಯವಿರುವ ಫೇಸ್‌ಲಿಫ್ಟ್ ಅನ್ನು ನೀಡಿತು.

More from DriveSpark

Article Published On: Sunday, November 12, 2023, 12:00 [IST]
English summary
New renault duster suv top things details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+