Tata Harrier: ಸುರಕ್ಷಿತ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ, ನಂಬರ್ 1 ಖಚಿತ!

ಟಾಟಾ (Tata) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಖ್ಯಾತಿಗಳಿಸಿದ್ದು, ಹೊರ - ಒಳಭಾಗದಲ್ಲಿ ಸಾಕಷ್ಟು ನವೀನ ಬದಲಾವಣೆ ಹಾಗೂ ವೈಶಿಷ್ಟ್ಯಗಳನ್ನು ಪಡೆದಿರುವ ಫೇಸ್‌ಲಿಫ್ಟ್ ಹ್ಯಾರಿಯರ್ (Harrier facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಿದೆ. ರೂಪಾಂತರಗಳಿಗೆ ಅನುಗುಣವಾಗಿ ರೂ.15.49 ಲಕ್ಷದಿಂದ ರೂ.24.49 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ (Tata Harrier facelift) ಎಸ್‌ಯುವಿ, ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಪಡೆದುಕೊಂಡಿದೆ. ಹಿಂದಿನ ಮಾದರಿಗೆ ಹೋಲಿಸಿದರೆ, ಹೊಸ ಕಾರು, ಪ್ರತಿಯೊಬ್ಬರನ್ನು ಆಕರ್ಷಿಸುವ ಡಿಸೈನ್ ಹೊಂದಿದೆ. ಮುಂಭಾಗದಲ್ಲಿ ಹಲವು ನವೀಕರಣಗಳನ್ನು ಒಳಗೊಂಡಿದ್ದು, ಹೊಸದಾದ ಗ್ರಿಲ್, ಸ್ಪ್ಲಿಟ್ ಹೆಡ್‌ಲೈಟ್ ಪಡೆದಿದೆ. ಜೊತೆಗೆ ಗ್ರಿಲ್‌ ಮೇಲ್ಭಾಗ ಫುಲ್-ವಿಡ್ತ್ (ಅಗಲ) ಎಲ್ಇಡಿ ಲೈಟ್ ಬಾರ್ ಹೊಂದಿದೆ.

Tata Harrier: ಸುರಕ್ಷಿತ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ, ನಂಬರ್ 1 ಖಚಿತ!

ಬಂಪರ್ ಕೂಡ ಹೊಸದಾಗಿದ್ದು, ಸೈಡ್ ಪ್ರೊಫೈಲ್‌ನಲ್ಲಿ ಹ್ಯಾರಿಯರ್ ಫೇಸ್‌ಲಿಫ್ಟ್‌ ಅಷ್ಟಾಗಿ ಬದಲಾವಣೆ ಪಡೆದಿಲ್ಲ. 18 ಹಾಗೂ 19 ಇಂಚಿನ ಅಲಾಯ್ ವೀಲ್ಸ್ ಅನ್ನು ಒಳಗೊಂಡಿದೆ. ಹ್ಯಾರಿಯರ್ ಫೇಸ್‌ಲಿಫ್ಟ್ ಹಿಂಭಾಗ ಹಲವು ಹೊಸತನವನ್ನು ಹೊಂದಿದೆ. ನವೀಕರಿಸಿದ ಬಂಪರ್ ಹಾಗೂ ಎಲ್ಇಡಿ ಲೈಟಿಂಗ್ ಅನ್ನು ಒಳಗೊಂಡಿದೆ. ಇದರ ಒಟ್ಟಾರೆ ವಿನ್ಯಾಸ ಕಳೆದ ಜನವರಿಯಲ್ಲಿ ನಡೆದ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಹ್ಯಾರಿಯರ್ ಇವಿಗೆ ಹೋಲಿಕೆಯಾಗುತ್ತದೆ.

ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಒಳಭಾಗವು ಹಲವು ಬದಲಾವಣೆಗಳಾಗಿವೆ. ರೂಪಾಂತರಗಳಿಗೆ ಅನುಗುಣವಾಗಿ 10.25 - ಇಂಚು ಅಥವಾ 12.3 - ಇಂಚಿನ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಅನ್ನು ಹೊಂದಿದೆ. ಎಲ್ಇಡಿ ಅಂಬಿಯೇಟ್ ಲೈಟಿಂಗ್, 10.25 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಾಟಾ ಲೋಗೋದೊಂದಿಗೆ ಹೊಸದಾದ 4- ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಒಳಗೊಂಡಿದೆ.

Tata Harrier: ಸುರಕ್ಷಿತ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ, ನಂಬರ್ 1 ಖಚಿತ!

ಇದರೊಟ್ಟಿಗೆ, ಡ್ಯುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, 10 - ಸ್ಪೀಕರ್ ಜೆಬಿಎಲ್ - ಟ್ಯೂನ್ಡ್ ಸೌಂಡ್ ಸಿಸ್ಟಮ್, 360 - ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಲೂನಾರ್ ವೈಟ್, ಪೆಬಲ್ ಗ್ರೇ, ಸನ್ಲೈಟ್ ಯೆಲ್ಲೋ ಮತ್ತು ಕೊರಲ್ ರೆಡ್ ಸೇರಿದಂತೆ 6 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ.

ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಎಸ್‌ಯುವಿ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು 2.0 - ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿದ್ದು, 170 hp ಗರಿಷ್ಠ ಪವರ್ ಹಾಗೂ 350 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ ರೂಪಾಂತರಗಳ ಅನ್ವಯ 6 - ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ.

Tata Harrier: ಸುರಕ್ಷಿತ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ, ನಂಬರ್ 1 ಖಚಿತ!

ಈ ಕಾರು, ಇಕೋ (Eco), ಸಿಟಿ (City) ಮತ್ತು ಸ್ಪೋರ್ಟ್ (Sports) ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಪಡೆದಿದೆ. ಟಾಟಾ ಹ್ಯಾರಿಯರ್ ಸೇಫ್ಟಿ ದೃಷ್ಟಿಯಿಂದ ಅತ್ಯುತ್ತಮ ಕಾರೆಂದು ಗುರುತಿಸಿಕೊಂಡಿದ್ದು, ಗ್ಲೋಬಲ್ ಎನ್‌ಸಿಎಪಿ (Global NCAP) ಪರೀಕ್ಷೆಯ ವಯಸ್ಕರ ಸುರಕ್ಷತೆ ವಿಭಾಗದಲ್ಲಿ 34ಕ್ಕೆ 33.05 ಅಂಕ ಗಳಿಸುವ ಮೂಲಕ 5 - ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ.

ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಸುರಕ್ಷತೆ ಸಲುವಾಗಿ 7 ಏರ್‌ಬ್ಯಾಗ್‌, ADAS (ಸುಧಾರಿತ ಚಾಲಕ ಸಹಾಯಕ ವ್ಯವಸ್ಥೆ) ಹಿಲ್ - ಹೋಲ್ಡ್ ಕಂಟ್ರೋಲ್, 3 - ಪಾಯಿಂಟ್ ಸೀಟ್ ಬೆಲ್ಟ್‌ ರಿಮೆಂಡರ್ ಒಳಗೊಂಡಂತೆ ವಿವಿಧ ಫೀಚರ್ಸ್ ಹೊಂದಿದೆ. ಈ ಕಾರಿಗೆ ಹುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದು, ಈಗಾಗಲೇ ಬುಕ್ಕಿಂಗ್ ಶುರುವಾಗಿದೆ

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, October 17, 2023, 16:47 [IST]
English summary
New tata harrier facelift launch india rs 15 49 lakh starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+