ಕೈಗೆಟುಕುವ ಬೆಲೆಯ ಹೊಸ ಟಾಟಾ ನೆಕ್ಸಾನ್ ಎಸ್‍ಯುವಿಯ ವಿಶೇಷತೆಗಳು

ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಬಹುನಿರೀಕ್ಷಿತ 2023ರ ಟಾಟಾ ನೆಕ್ಸಾನ್ (Tata Nexon) ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಹೊಸ ಟಾಟಾ ನೆಕ್ಸಾನ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8.09 ಲಕ್ಷವಾಗಿದೆ.

ಈ ಹೊಸ ಟಾಟಾ ನೆಕ್ಸಾನ್ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದೆ. 2023 ಟಾಟಾ ನೆಕ್ಸಾನ್ ಎಸ್‍ಯುವಿಯನ್ನು ಖರೀದಿಸಲು ಬಯಸುವ ಗ್ರಾಹಕರು ಆನ್‌ಲೈನ್‌ನಲ್ಲಿ ಅಥವಾ ಭಾರತದಾದ್ಯಂತ ಅಧಿಕೃತ ಡೀಲರ್‌ಶಿಪ್ ನೆಟ್‌ವರ್ಕ್‌ನಲ್ಲಿ ಬುಕ್ ಮಾಡಬಹುದು. ಈ ಹಬ್ಬದ ಸೀಸನ್ ನಲ್ಲಿ ನೀವು ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಇದು ಉತ್ತಮ ಆಯ್ಕೆಯಾಗಿದೆ.

Tata Nexon

ಎಂಜಿನ್: ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಇದರಲ್ಲಿ ಒಂದು 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 120 bhp ಮತ್ತು 170 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ AMT, ಮತ್ತು 7-ಸ್ಪೀಡ್ DCT ಗೇರ್‌ಬಾಕ್ಸ್ ಎಂಬ ಮೂರು ಗೇರ್ ಬಾಕ್ಸ್ ಗಳೊಂದಿಗೆ ಬರುತ್ತದೆ.

ಇದರೊಂದಿಗೆ ಈ ಹೊಸ ನೆಕ್ಸಾನ್ ಎಸ್‍ಯುವಿಯಲ್ಲಿ 1.5-ಲೀಟರ್, ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ನೀಡಲಾಗಿದೆ. ಈ ಎಂಜಿನ್ 114 bhp ಪವರ್ ಮತ್ತು 260 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ AMT ಗೇರ್‌ಬಾಕ್ಸ್‌ನೊಂದಿಗೆ ನಿರ್ದಿಷ್ಟಪಡಿಸಬಹುದು.

Tata Nexon

ವಿನ್ಯಾಸ: ಹೊಸ ಟಾಟಾ ನೆಕ್ಸಾನ್ ಎಸ್‍ಯುವಿಯ ವಿನ್ಯಾಸ ಬಗ್ಗೆ ಹೇಳುವುದಾದರೆ, ಹೊಸ ವಿನ್ಯಾಸ, ಮತ್ತು ಮಾದರಿಯು ಈಗ ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳನ್ನು ಮತ್ತು ಟಾಟಾ ಮೋಟಾರ್ಸ್ ಲೋಗೋದೊಂದಿಗೆ ದಪ್ಪವಾದ ಮೇಲಿನ ಗ್ರಿಲ್ ವಿಭಾಗವನ್ನು ಹೊಂದಿದೆ. ಇದಲ್ಲದೆ, ಮಾದರಿಯು ಟ್ರೆಪೆಜಾಯಿಡಲ್ ಹೌಸಿಂಗ್‌ನಲ್ಲಿ ಲಂಬವಾಗಿ ಜೋಡಿಸಲಾದ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ.

ಈ 2023ರ ಟಾಟಾ ನೆಕ್ಸಾನ್ ಎಸ್‍ಯುವಿಯ ಹಿಂಭಾಗದಲ್ಲಿ ಈಗ ಫುಲ್ ಎಲ್ಇಡಿ ಲೈಟ್ ಬಾರ್, ಹೊಸ ಟೈಲ್‌ಲ್ಯಾಂಪ್‌ಗಳು, ಹೊಸ ಹಿಂಭಾಗದ ಬಂಪರ್‌ಗಳು, ಪ್ರಮುಖ ಫಾಕ್ಸ್ ಸ್ಕಿಡ್ ಪ್ಲೇಟ್ ಮತ್ತು ಹೆಚ್ಚಿನದನ್ನು ಪಡೆಯುತ್ತದೆ. ಇನ್ನು ಈ ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್‌ನ ಸಿಲೂಯೆಟ್ ಹಿಂದಿನ ಮಾದರಿಯಂತೆಯೇ ಉಳಿದಿದೆ. ದೊಡ್ಡ ಬದಲಾವಣೆ ಎಂದರೆ, ನೆಕ್ಸಾನ್ ಈಗ ಎರಡು-ಸ್ಪೋಕ್ ಸ್ಟೀರಿಂಗ್ ವೀಲ್‌ನೊಂದಿಗೆ ಹೊಸ ಡ್ಯಾಶ್‌ಬೋರ್ಡ್ ಪಡೆಯುತ್ತದೆ.

ಫೀಚರ್ಸ್: ನವೀಕರಿಸಿದ ಮಾದರಿಯು ಈಗ ಟಚ್-ಆಧಾರಿತ ಕ್ಲೈಮೆಂಟ್ ಕಂಟ್ರೋಲ್ ಸೆಟಪ್ ಅನ್ನು ಒಳಗೊಂಡಿದೆ. ಈ ಕಾರಿನ ಇಂಟಿರಿಯರ್ ಮತ್ತಷ್ಟು ಸ್ಮಾರ್ಟ್ ಆಗಿದೆ. ಇನ್ನು . ಈ ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ದೊಡ್ಡ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್ ಮತ್ತು ಅಷ್ಟೇ ದೊಡ್ಡ ಸಂಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

ಇದರ ಜೊತೆಗೆ ಅತ್ಯುತ್ತಮ 360-ಡಿಗ್ರಿ ಸರೌಂಡ್-ವ್ಯೂ ಕ್ಯಾಮೆರಾ, ಕನೆಕ್ಟ್ ಕಾರ್ ಟೆಕ್ ಮತ್ತು ವೈರ್‌ಲೆಸ್ ಚಾರ್ಜರ್ ಅನ್ನು ಹೊಂದಿದೆ. ಇನ್ನು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಇತರ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿವೆ. ಟಾಟಾ ಕಾರುಗಳು ಹೆಚ್ಚು ಸುರಕ್ಷತೆಗೆ ಹೆಚ್ಚು ಖ್ಯಾತಿಯನ್ನು ಪಡೆದಿದೆ. ನೆಕ್ಸಾನ್ ಫೇಸ್‌ಲಿಫ್ಟ್‌ಎಸ್‍ಯುವಿಯಲ್ಲಿ ಕೆಲವು ಗಮನಾರ್ಹ ಸುರಕ್ಷತಾ ಫೀಚರ್ಸ್ ಗಳನ್ನು ನೀಡಿದೆ.

ಸುರಕ್ಷತಾ ಫೀಚರ್ಸ್: ಈ ನವೀಕರಿಸಿದ ನೆಕ್ಸಾನ್ ಎಸ್‍ಯುವಿಯಲ್ಲಿ ಸುರಕ್ಷತಾ ಫೀಚರ್ಸ್ ಗಳಲ್ಲಿ, ಸ್ಟ್ಯಾಂಡರ್ಡ್ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC), ABS, EBD, ISOFIX ಚೈಲ್ಡ್‌ಸೀಟ್ ಆಂಕರ್ರಿಂಗ್ ಪಾಯಿಂಟ್‌ಗಳು, ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಇತರವುಗಳನ್ನು ಹೊಂದಿವೆ. ಹೊಸ ಪ್ರತಿಸ್ಪರ್ಧಿಗಳೊಂದಿಗೆ ಸ್ಪರ್ಧಿಸಲು ಮತ್ತು ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಟಾಟಾ ತನ್ನ ನೆಕ್ಸಾನ್ ಎಸ್‍ಯುವಿಯನ್ನು ನವೀಕರಿಸಿದೆ. ಇದು ಮಾರುಕಟ್ಟೆಯಲ್ಲಿ ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತದೆ.

Article Published On: Saturday, September 16, 2023, 17:13 [IST]
English summary
New tata nexon facelift suv top things you need to know
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+