Tata Punch EV: ರಸ್ತೆಯಲ್ಲಿ ಕಂಡುಬಂತು ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು, ಬೆಲೆ ತುಂಬಾ ಕಡಿಮೆ?

ಟಾಟಾ ಮೋಟಾರ್ಸ್ (Tata Motors) ದೇಶದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದ್ದು, ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ತನಗಾಗಿ ಪ್ರತ್ಯೇಕ ಸ್ಥಾನ ಸಂಪಾದಿಸಿಕೊಂಡಿದೆ. ಈಗಾಗಲೇ ಕಂಪನಿಯು ನೆಕ್ಸಾನ್ ಇವಿ (Nexon EV) ಟಿಯಾಗೊ ಇವಿ (Tiago EV) ಹಾಗೂ ಟಿಗೂರ್ ಇವಿ (Tigor EV)ಗಳನ್ನು ಮಾರಾಟ ಮಾಡುತ್ತಿದೆ.

ದೇಶೀಯ ಮಾರುಕಟ್ಟೆಯ ಮೆಕ್ರೋ ಎಸ್‌ಯುವಿ ವಿಭಾಗದಲ್ಲಿ ಟಾಟಾ ಪಂಚ್ (Tata Punch) ಕಾರಿಗೆ ಸರಿ ಸಾಟಿಯೇ ಇಲ್ಲ ಎಂದು ಹೇಳಬಹುದು. ಇದರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡಿರುವ ಕಂಪನಿಯು ಪಂಚ್ ಇವಿ (Punch EV)ಯನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದೆ. ಈಗಾಗಲೇ, ಹಲವು ಬಾರಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಈ ಕಾರು ಕಂಡು ಬಂದಿದ್ದು, ಒಂದಿಷ್ಟು ವಿನ್ಯಾಸದ ಅಂಶಗಳ ಕುರಿತು ಮಾಹಿತಿ ಲಭ್ಯವಾಗಿದೆ.

Tata Punch EV: ರಸ್ತೆಯಲ್ಲಿ ಕಂಡುಬಂತು ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು, ಬೆಲೆ ತುಂಬಾ ಕಡಿಮೆ?

ಸದ್ಯ, ಇದೇ ಪಂಚ್ ಇವಿ ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿರುವಾಗ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದ್ದು, ಅದರ ಸ್ಪೈ ಚಿತ್ರಗಳು ಇಂಟರ್ನೆಟ್ ನಲ್ಲಿ ಹರಿದಾಡಿವೆ. ಇಂಧನ ಚಾಲಿತ ಮಾದರಿಗೆ ಹೋಲಿಕೆ ಮಾಡಿದರೆ, ನೂತನ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು ವಿನ್ಯಾಸದಲ್ಲಿ ಹಲವು ಬದಲಾವಣಿಗಳನ್ನು ಪಡೆದಿಕೊಂಡಿದೆ. ರಸ್ತೆಯಲ್ಲಿ ಪರೀಕ್ಷಾರ್ಥ ಸಂಚಾರ ನಡೆದ ಕಾರಿನ ಡಿಸೈನ್ ಹೊಸದಾಗಿರುವುದನ್ನು ಸ್ಪೈ ಫೋಟೋದಲ್ಲಿ ನೋಡಬಹುದು.

ಈ ಕಾರು, ಮರುವಿನ್ಯಾಸಗೊಳಿಸಲಾದ ಗ್ರಿಲ್, ಹೆಡ್‌ಲೈಟ್ ಹೌಸಿಂಗ್‌ ಹೊಂದಿದ್ದು, ಬಂಪರ್ ಕೂಡ ಹೊಸದಾಗಿದೆ. ಜೊತೆಗೆ ಫುಲ್-ವಿಡ್ತ್ ಲೈಟ್ ಬಾರ್ ಒಳಗೊಂಡಿದ್ದು, ನವೀನ ಅಲಾಯ್ ವೀಲ್ಸ್ ಹಾಗೂ ರೇರ್ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿರುವುದನ್ನು ಗಮನಿಸಬಹುದು. ಹಿಂಭಾಗದಲ್ಲಿ ಆಕರ್ಷಕ ಎಲ್ಇಡಿ ಟೈಲ್ ಲ್ಯಾಂಪ್ಸ್, ಜೊತೆಗೆ ಅತ್ಯಾಕರ್ಷಕ ಬಂಪರ್ ಹೊಂದಿರುವುದನ್ನು ಗುರುತಿಸಬಹುದು.

Tata Punch EV: ರಸ್ತೆಯಲ್ಲಿ ಕಂಡುಬಂತು ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು, ಬೆಲೆ ತುಂಬಾ ಕಡಿಮೆ?

ಟಾಟಾ ಪಂಚ್ ಇವಿ ಒಳಭಾಗದಲ್ಲಿ ವಿನ್ಯಾಸ ಹಾಗೂ ವೈಶಿಷ್ಟ್ಯದ ವಿಚಾರದಲ್ಲಿ ಹೆಚ್ಚು ಅತ್ಯಾಧುನಿಕವಾಗಿ ಇರಲಿದ್ದು, 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ನವೀಕರಿಸಿದ ನೆಕ್ಸಾನ್ ಇವಿಯಂತೆ ಟಾಟಾ ಲೋಗೋದೊಂದಿಗೆ ನೂತನ ಟು - ಸ್ಪೋಕ್ ಸ್ಟೀರಿಂಗ್ ವೀಲ್ ಒಳಗೊಂಡಿರುವ ನೀರಿಕ್ಷೆಯಿದೆ. ಇದರೊಟ್ಟಿಗೆ ಮತ್ತಷ್ಟು ಆಕರ್ಷಕ ಫೀಚರ್ಸ್ ಇರಲಿವೆ.

ಅವುಗಳೆಂದರೆ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸನ್‌ರೂಫ್. ಸುರಕ್ಷತೆಯ ದೃಷ್ಟಿಯಿಂದಲೂ ಅತ್ಯುತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದ್ದು, 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಂ) ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿರಲಿದೆಯಂತೆ.

Tata Punch EV: ರಸ್ತೆಯಲ್ಲಿ ಕಂಡುಬಂತು ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು, ಬೆಲೆ ತುಂಬಾ ಕಡಿಮೆ?

ಟಾಟಾ, ಪಂಚ್ ಇವಿ ಬೆಲೆ ಬಗ್ಗೆ ಎಲ್ಲಿಯೂ ವಿವರಗಳನ್ನು ಬಹಿರಂಗಪಡಿಸಿಲ್ಲ. ಆದರೂ ಗ್ರಾಹಕರಿಗೆ ಕೈಗೆಟುಕುವ ಬೆಲೆಗೆ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ. ರೂ.12 ಲಕ್ಷ ಆರಂಭಿಕ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯಬಹುದು ಎನ್ನಲಾಗಿದ್ದು, ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ. ಸಂಪೂರ್ಣ ಚಾರ್ಜ್ ನಲ್ಲಿ 500 km ವರೆಗೆ ರೇಂಜ್ ನೀಡಬಹುದು.

ಪ್ರಸ್ತುತ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್, ರೂ.6 ಲಕ್ಷದಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 18.8 - 20.09 kmpl ಮೈಲೇಜ್ ನೀಡುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Zigwheels

Article Published On: Wednesday, November 8, 2023, 15:25 [IST]
English summary
New tata punch ev spotted in road launch soon price very low
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+