Tata Punch EV: ಟಾಟಾ ಪಂಚ್ ಇವಿ ಬಹುತೇಕ ಬಿಡುಗಡೆಗೆ ಸಿದ್ದ, ವಿಶೇಷತೆಗಳೇನು?

ಭಾರತದ ಮೈಕ್ರೋ ಎಸ್‌ಯುವಿ (SUV) ಮಾರುಕಟ್ಟೆಯಲ್ಲಿ ಟಾಟಾ ಪಂಚ್ (Tata Punch) ವಿಶೇಷವಾದ ಸ್ಥಾನಗಳಿಸಿದೆ. ಸದ್ಯ, ಕಂಪನಿಯು ಎಲೆಕ್ಟ್ರಿಕ್ ರೂಪದಲ್ಲಿ ಪಂಚ್ ಕಾರನ್ನು ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದ್ದು, ನೂತನ ಕಾರು, ಮುಂದಿನ ತಿಂಗಳು (ಅಕ್ಟೋಬರ್‌) ಲಾಂಚ್ ಆಗುವ ಎಲ್ಲ ಸಾಧ್ಯತೆಗಳಿವೆ.

ಪ್ರತಿಯೊಬ್ಬರಿಗೂ ಈ ಕಾರು, ಯಾವೆಲ್ಲ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಡಿಸೈನ್ ಹೇಗಿರಲಿದೆ ಎಂಬ ಕುತೂಹಲವಿರಬಹುದು. ಅದಕ್ಕೆ ಉತ್ತರ ನೀಡುವ ಪ್ರಯತ್ನ ಮಾಡಿದ್ದೇವೆ. ಈಗಾಗಲೇ, ಈ ಪಂಚ್ ಇವಿ ಹಲವು ಬಾರಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದ್ದು, ಕಂಪನಿಯು ಎಲ್ಲಿಯೂ ವಿನ್ಯಾಸದ ಬಗ್ಗೆ ರಿವೀಲ್ ಮಾಡಿಲ್ಲ. ಬಹುತೇಕ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಇಂಧನ ಚಾಲಿತ ಪಂಚ್ ಕಾರಿಗೆ ಹೋಲಿಕೆಯಾಗಲಿದೆ.

Tata Punch EV: ಟಾಟಾ ಪಂಚ್ ಇವಿ ಬಹುತೇಕ ಬಿಡುಗಡೆಗೆ ಸಿದ್ದ, ವಿಶೇಷತೆಗಳೇನು?

ಆದರೆ, ಪಂಚ್ ಇವಿಯಲ್ಲಿ ಕಂಡು ಬಂದಿರುವ ಪ್ರಮುಖ ಬದಲಾವಣೆ ಎಂದರೆ, ಚಾರ್ಜಿಂಗ್ ಸಾಕೆಟ್ ಅನ್ನು ಮುಂಭಾಗ ಪಡೆದಿರುವುದು. ಜೊತೆಗೆ ಅಲಾಯ್ ವೀಲ್ಸ್ ಹೊಂದಿರುವ ನೀರಿಕ್ಷೆಯಿದೆ. ಇದರೊಟ್ಟಿಗೆ, ಕ್ಯಾಬಿನ್ ಒಳಭಾಗದಲ್ಲಿ ಅದ್ಬುತ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದ್ದು, ನವೀಕರಿಸಿದ ನೆಕ್ಸಾನ್‌ ಕಾರಿನಂತೆ 10.25 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಪಡೆಡಿರುವ ನೀರಿಕ್ಷೆಯಿದೆ.

ಇದರೊಂದಿಗೆ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಹೊಸದಾದ ಟೂ - ಸ್ಪೋಕ್ ಸ್ಟೀರಿಂಗ್ ವೀಲ್ ಸೇರಿದಂತೆ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಪಂಚ್ ಇವಿ ಬೆಲೆ ಬಗ್ಗೆ ಟಾಟಾ ಕಂಪನಿ ಎಲ್ಲಿಯೂ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೂ, ಇಂಧನ ಚಾಲಿತ ಕಾರಿಗೆ ಹೋಲಿಸಿದರೆ, ಕೊಂಚ ಅಧಿಕ ದರ ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ರೂ.11 ಲಕ್ಷ ಬೆಲೆಗೆ ಸಿಗಬಹುದು.

Tata Punch EV: ಟಾಟಾ ಪಂಚ್ ಇವಿ ಬಹುತೇಕ ಬಿಡುಗಡೆಗೆ ಸಿದ್ದ, ವಿಶೇಷತೆಗಳೇನು?

ಮುಂಬರಲಿರುವ ಟಾಟಾ ಪಂಚ್ ಇವಿ, ಟಿಗೂರ್ ಇವಿ ಹಾಗೂ ಟಿಯಾಗೊ ಇವಿಯಂತೆ 26 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿರಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 300 km ರೇಂಜ್ ನೀಡುವ ಸಾಮರ್ಥ್ಯ ಹೊಂದಿರಬಹುದು. ಜೊತೆಯಲ್ಲಿ 7.2 kW ಎಸಿ ಚಾರ್ಜರ್ ಹಾಗೂ ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಖರೀದಿಗೆ ದೊರೆಯಬಹುದು.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಇಂಧನ ಚಾಲಿತ ಟಾಟಾ ಪಂಚ್ ಕಾರಿನ ಬಗ್ಗೆ ಮಾತನಾಡುವುದಾದರೆ, ಇದು ರೂಪಾಂತರಗಳಿಗೆ ಅನುಗುಣವಾಗಿ ರೂ.6 ಲಕ್ಷದಿಂದ ರೂ.10.10 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1.2 - ಲೀಟರ್ ಸಾಮರ್ಥ್ಯದ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 20.09 kmpl ರಿಂದ 26.99 km/kg ಮೈಲೇಜ್ ನೀಡುತ್ತದೆ.

ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುವ ಈ ಕಾರು, 7 - ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7 - ಇಂಚಿನ ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಂ) ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, September 20, 2023, 8:30 [IST]
English summary
New tata punch ev what to expect details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+