ನಿಸ್ಸಾನ್ ಇಂಡಿಯಾದಿಂದ ಗೇಮ್ ಚೇಂಜರ್ ಮ್ಯಾಗ್ನೈಟ್ ಎಸ್‌ಯುವಿಗೆ ಭಾರೀ ರಿಯಾಯಿತಿ ಘೋಷಣೆ
'ನಿಸ್ಸಾನ್ ಇಂಡಿಯಾ' BS6 ಹಂತ 2 ಎಮಿಷನ್ ಮಾನದಂಡಗಳು ದೇಶಾದ್ಯಂತ ಜಾರಿಯಾಗುವ ಮುನ್ನ ತನ್ನ ಗ್ರಾಹಕರಿಗಾಗಿ ಭರ್ಜರಿ ರಿಯಾಯಿತಿ ಘೋಷಣೆ ಮಾಡಿದೆ. ಇದು 2022 ಮತ್ತು 2023ರಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಮ್ಯಾಗ್ನೈಟ್ ಎಸ್‌ಯುವಿಗೆ ಅನ್ವಯಿಸುತ್ತದೆ. ಆ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ, ಗರಿಷ್ಠ ರೂ.90,000 ವರೆಗಿನ ಆಫರ್ ಒಳಗೊಂಡಿದ್ದು, ಅದರಲ್ಲಿ ರೂ.20,000 ಎಕ್ಸ್ಚೇಂಜ್ ಬೋನಸ್, ರೂ.20,000 ನಗದು ರಿಯಾಯಿತಿ, ರೂ.10,000 ಲಾಯಲ್ಟಿ ಬೋನಸ್ ಹಾಗೂ ರೂ.15,000 ವರೆಗೆ ಕಾರ್ಪೊರೇಟ್ ರಿಯಾಯಿತಿಯನ್ನು ಪಡೆದಿದೆ. ಇಷ್ಟೇ ಅಲ್ಲದೆ, ರೂ.12,100 (3 ವರ್ಷಗಳು) ಪ್ರಿ- ಮೈಂಟೆನನ್ಸ್ ಪ್ಯಾಕೇಜ್ ಹಾಗೂ ರೂ.2,000 ವರೆಗೆ ಆನ್‌ಲೈನ್ ಬುಕಿಂಗ್ ರಿಯಾಯಿತಿಯು ನಿಸ್ಸಾನ್ ಗ್ರಾಹಕರಿಗೆ ಲಭ್ಯವಿದೆ.

ನಿಸ್ಸಾನ್ ಕಂಪನಿಯ ಗೇಮ್ ಚೇಂಜರ್ ಎಂದೇ ಬಿಂಬಿಸಲಾಗಿರುವ ಈ ಮ್ಯಾಗ್ನೈಟ್ ಎಸ್‌ಯುವಿಯ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೇ, 1.0-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿರುವ ಕಾರು, 72 bhp ಗರಿಷ್ಠ ಪವರ್ ಹಾಗೂ 96 Nm ಪೀಕ್ ಟಾರ್ಕ್ ಉತ್ಪಾದಿಸಿತ್ತದೆ. 1.0-ಲೀಟರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಪಡೆದಿರುವ ಕಾರು, 98.6 bhp ಪವರ್, 160 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.
ನೂತನ ಮ್ಯಾಗ್ನೈಟ್ ಎಸ್‌ಯುವಿ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್, ಸ್ಮಾರ್ಟ್ ಕೀ, ಆಟೋ ಎಸಿ, ರೇರ್ ಎಸಿ ವೆಂಟ್ಸ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಏರ್ ಪ್ಯೂರಿಫೈಯರ್ ಸೇರಿದಂತೆ ಹಲವು ನೂತನ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದಲ್ಲೂ ಮ್ಯಾಗ್ನೈಟ್ ಎಸ್‌ಯುವಿ ಅತ್ಯುತ್ತಮವಾಗಿದೆ. ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ISOFIX ಚೈಲ್ಡ್ ಸೀಟ್ ಮೌಂಟ್ಸ್ ಅನ್ನು ಹೊಂದಿದೆ. ಟಾಪ್ ಎಂಡ್ ರೂಪಾಂತರವು 360-ಡಿಗ್ರಿ ಕ್ಯಾಮೆರಾ ಹಾಗೂ ಟೈರ್ ಪ್ರೆಶರ್ ಮಾನಿಟರ್ ಸಿಸ್ಟಮ್ ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.
ಭಾರತದ ಮಾರಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮ್ಯಾಗ್ನೈಟ್ ಎಸ್‌ಯುವಿ ರೂ.6 ಲಕ್ಷದಿಂದ ರೂ.10.94 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗಲಿದೆ. ಉತ್ತಮ ಇಂಧನ ದಕ್ಷತೆಯನ್ನು ಹೊಂದಿದ್ದು, 18.75 - 20.0 kmpl ಮೈಲೇಜ್ ನೀಡಲಾಗಿದ್ದು, ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ದೊಡ್ಡ ಮಟ್ಟದಲ್ಲಿ ರಿಯಾಯಿತಿ ಘೋಷಣೆಯಿಂದ ಈ ಎಸ್‌ಯುವಿಯ ಮಾರಾಟ ಪ್ರಮಾಣ ಸುಧಾರಿಸಲಿದ್ದು, ಕಂಪನಿಗೆ ಮತ್ತಷ್ಟು ಲಾಭ ತಂದುಕೊಡಲಿದೆ.

ಆದರೆ, ಬೇಸರದ ಸಂಗತಿಯೆಂದರೆ 2022ರ ನವೆಂಬರ್ ನಲ್ಲಿ 'ನಿಸ್ಸಾನ್' ಕಿಕ್ಸ್ ಎಸ್‌ಯುವಿಯ ಕೇವಲ ಮೂರು ಯುನಿಟ್ ಮಾರಾಟ ಮಾಡಿದೆ. ಡಿಸೆಂಬರ್ ನಿಂದ 2023 ಫೆಬ್ರವರಿವರೆಗೆ ಒಂದೇ ಒಂದು ಯುನಿಟ್ ಸೇಲ್ ಮಾಡಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಕಂಪನಿಯು ಕಿಕ್ಸ್ ಎಸ್‌ಯುವಿ ಬುಕಿಂಗ್ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ಮುಂಬರುವ ದಿನಗಳಲ್ಲಿ ಸಂಪೂರ್ಣ ಮಾರಾಟದಿಂದ ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications








