Nissan Magnite: ನಿಸ್ಸಾನ್ ಮ್ಯಾಗ್ನೈಟ್ ಪಕ್ಕಾ ಗೇಮ್ ಚೇಂಜರ್ ಬಿಡ್ರಿ!

ಜಪಾನ್ ವಾಹನ ತಯಾರಕ ನಿಸ್ಸಾನ್ (Nissan) ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಏಕೈಕ ಕಾರು ಮ್ಯಾಗ್ನೈಟ್ (Magnite). ಇದು, ಕಂಪನಿಯ ಗೇಮ್ ಚೇಂಜರ್ ಎಸ್‌ಯುವಿಯಾಗಿ ಗುರುತಿಸಿಕೊಂಡಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಪಡೆದುಕೊಂಡಿದೆ. ಸದ್ಯ, ಈ ಕಾರಿನ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಬನ್ನಿ ಏನೆಂದು ತಿಳಿಯೋಣ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನಿಸ್ಸಾನ್ ಮ್ಯಾಗ್ನೈಟ್ ರೂ.6 ಲಕ್ಷದಿಂದ ರೂ.11.02 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಸ್ಪರ್ಧಾತ್ಮಕ ಕಾಯುವಿಕೆ ಅವಧಿಯನ್ನು ಪಡೆದಿದೆ. ನೀವು ಇವತ್ತು ಈ ಕಾರನ್ನು ಬುಕ್ಕಿಂಗ್ ಮಾಡಿದರೂ ವಿತರಣೆಯಾಗಲು ಎರಡರಿಂದ ಮೂರು ವಾರಗಳು ಹಿಡಿಯುತ್ತದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ಈ ಅವಧಿ ಬೇರೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್ ಶಿಪ್ ಸಂಪರ್ಕಿಸಿರಿ.

Nissan Magnite: ನಿಸ್ಸಾನ್ ಮ್ಯಾಗ್ನೈಟ್ ಪಕ್ಕಾ ಗೇಮ್ ಚೇಂಜರ್ ಬಿಡ್ರಿ!

ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ, ಎಕ್ಸ್ಇ, ಎಕ್ಸ್ಎಲ್, ಎಕ್ಸ್ ವಿ, ಟರ್ಬೊ, ಪ್ರೀಮಿಯಂ ಟರ್ಬೊ (ಒ) ಹಾಗೂ ಗೆಜಾ ರೂಪಾಂತರಗಳ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಜೊತೆಗೆ 3 ಡ್ಯುಯಲ್ ಟೋನ್ ಹಾಗೂ 5 ಮೊನೊಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ. ಅವುಗಳೆಂದರೆ, ಪರ್ಲ್ ವೈಟ್ ವಿತ್ ಓನಿಕ್ಸ್ ಬ್ಲ್ಯಾಕ್‌, ಟೂರ್‌ಮ್ಯಾಲಿನ್ ಬ್ರೌನ್ ವಿತ್ ಓನಿಕ್ಸ್ ಬ್ಲ್ಯಾಕ್‌, ವಿವಿಡ್ ಬ್ಲೂ ವಿತ್ ಸ್ಟಾರ್ಮ್ ವೈಟ್.

ಇದರೊಟ್ಟಿಗೆ ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲ್ಯಾಕ್, ಸ್ಯಾಂಡ್‌ಸ್ಟೋನ್ ಬ್ರೌನ್ ಹಾಗೂ ಸ್ಟಾರ್ಮ್ ವೈಟ್ ಬಣ್ಣಗಳು ಇವೆ. ನಿಸ್ಸಾನ್ ಮ್ಯಾಗ್ನೈಟ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಎರಡು ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರ, 1 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 72 PS ಗರಿಷ್ಠ ಪವರ್ ಹಾಗೂ 96 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ.

1 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 PS ಪವರ್ ಹಾಗೂ 160 Nm ಪೀಕ್ ಟಾರ್ಕ್ ಉತ್ಪಾದಿಸಲಿದೆ. 5 ಸ್ವೀಡ್ ಮ್ಯಾನುವಲ್ ಹಾಗೂ CVT ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ. ಈ ನಿಸ್ಸಾನ್ ಮ್ಯಾಗ್ನೈಟ್ ಅತ್ಯುತ್ತಮ ಇಂಧನ ದಕ್ಷತೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 20.0 kmpl ಮೈಲೇಜ್ ನೀಡುತ್ತದೆ.

ನಿಸ್ಸಾನ್ ಮ್ಯಾಗ್ನೈಟ್ ದೇಶೀಯ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 7 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, LED ಹೆಡ್‌ಲೈಟ್ಸ್, LED ಡಿಆರ್‌ಎಲ್‌, ಆಟೋ ಎಸಿ ಸೇರಿದಂತೆ ವಿವಿಧ ಫೀಚರ್ಸ್ ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದಲ್ಲೂ ನಿಸ್ಸಾನ್ ಮ್ಯಾಗ್ನೈಟ್ ಅತ್ಯುತ್ತಮವಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ಸ್, 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ಹತ್ತು ಹಲವು ಸೇಫ್ಟಿ ಫೀಚರ್ಸ್ ಪಡೆದಿದೆ. 2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡ ಈ ಕಾರಿನ ಉತ್ಪಾದನೆಯಲ್ಲಿ ಕಂಪನಿಯು (100,000 ಯುನಿಟ್) ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ.

ಇನ್ನು, ನಿಸ್ಸಾನ್ ಕಂಪನಿಯು ಮೇ ತಿಂಗಳಲ್ಲಿ ಮ್ಯಾಗ್ನೈಟ್ ಗೆಜಾ ಸ್ಪೆಷಲ್ ಎಡಿಷನ್ ಲಾಂಚ್ ಮಾಡಿತ್ತು. 1.0 ಲೀಟರ್ 3 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿರುವ ಈ ಕಾರು, ಅತ್ಯಂತ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ ಎಂದು ಕಂಪನಿಯೇ ಹೇಳಿಕೊಂಡಿದ್ದು, ಕಿಲೋಮೀಟರ್ ಗೆ ಕೇವಲ 35 ಪೈಸೆ ಖರ್ಚಾಗುತ್ತದೆ ಎಂದು ತಿಳಿಸಿತ್ತು.

ಸೇಫ್ಟಿ ಸಲುವಾಗಿ ಗ್ಲೋಬಲ್ NCAPಯಿಂದ 4 ಸ್ಟಾರ್ ರೇಟಿಂಗ್ ಪಡೆದಿರುವ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸನ್, ಮಹೀಂದ್ರಾ XUV300, ರೆನಾಲ್ಟ್ ಕಿಗರ್, ಸಿಟ್ರಸ್ C3. ಮಾರುತಿ ಸುಜುಕಿ ಫ್ರಾಂಕ್ಸ್ ಮತ್ತು ಹ್ಯುಂಡೈ ಎಕ್ಸ್‌ಟರ್‌ ಪ್ರತಿಸ್ಪರ್ಧಿಯಾಗಿವೆ. ಬೇಡಿಕೆ ಕುಸಿತವಾದ ಹಿನ್ನೆಲೆ, ನಿಸ್ಸಾನ್ ಕಂಪನಿ ಈ ವರ್ಷದ ಆರಂಭದಲ್ಲಿ 'ಕಿಕ್ಸ್' ಕಾರಿನ ಮಾರಾಟವನ್ನು ಸ್ಥಗಿತಗೊಳಿಸಿತ್ತು.

More from DriveSpark

Article Published On: Monday, July 31, 2023, 15:18 [IST]
English summary
Nissan magnite waiting period up to 3 weeks details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+