ಅತಿ ಕಡಿಮೆ ಬೆಲೆಯಲ್ಲಿ ಸಿಗುವ ಜನಪ್ರಿಯ ಟಾಟಾ, ಮಾರುತಿ ಸುಜುಕಿ ಕಾರುಗಳು

ಭಾರತದಲ್ಲಿ ಬಹುತೇಕ ಮಧ್ಯಮ ವರ್ಗದ ಜನರೇ ವಾಸಿಸುತ್ತಾರೆ. ಪ್ರತಿಯೊಬ್ಬರಿಗೂ ಕಾರು ಖರೀದಿಸಬೇಕೆಂಬ ಕನಸಿರುತ್ತದೆ. ಆದರೆ, ಕೆಲವು ಕಾರುಗಳ ಬೆಲೆಯನ್ನು ಕೇಳಿದರೆ, ಅದರ ಹತ್ತಿರವೂ ಸುಳಿಯಲು ಸಾಧ್ಯವಾಗುವುದಿಲ್ಲ. ಇಲ್ಲಿ ಆಕರ್ಷಕ ಲುಕ್, ಬಜೆಟ್ ದರದಲ್ಲಿ ಖರೀದಿಗೆ ಸಿಗುವ ಟಾಟಾ, ಮಾರುತಿ ಸುಜುಕಿ ಸೇರಿದಂತೆ ಇತರೆ ಕಾರುಗಳು ಯಾವುದೆಂದು ತಿಳಿಯೋಣ.

ಮೊದಲಿಗೆ ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುವ ಟಾಟಾ ಮೋಟಾರ್ಸ್ ಕಾರಿನ ಬಗ್ಗೆ ಮಾತನಾಡೋಣ. ಕಂಪನಿಯು ಅತ್ಯಂತ ಕಡಿಮೆ ಬೆಲೆಯಲ್ಲಿ ನೋಡಲು ಅತ್ಯಾಕರ್ಷಕವಾಗಿರುವ 'ಟಿಯಾಗೊ' ಹ್ಯಾಚ್‌ಬ್ಯಾಕ್ ಮಾರಾಟ ಮಾಡುತ್ತಿದ್ದು, ನೂತನ ಟಾಟಾ ಟಿಯಾಗೊ, ರೂ.5.54 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯಲ್ಲಿ ಹೊಂದಿದೆ. ಐದು ಬಣ್ಣಗಳು ಹಾಗೂ ಆರು ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದ್ದು, ಪೆಟ್ರೋಲ್/ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ.

ಅತಿ ಕಡಿಮೆ ಬೆಲೆಯಲ್ಲಿ ಸಿಗುವ ಜನಪ್ರಿಯ ಟಾಟಾ, ಮಾರುತಿ ಸುಜುಕಿ ಕಾರುಗಳು

ಈ ಟಿಯಾಗೊ ಕಾರು, 19.0 - 19.01 kmpl ಮೈಲೇಜ್ ನೀಡಲಿದ್ದು, ಖರೀದಿದಾರರನ್ನು ಆಕರ್ಷಿಸುವ ಹತ್ತು ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಅವುಗಳೆಂದರೆ, 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಎಲ್ಇಡಿ DRLs, ಪ್ರೊಜೆಕ್ಟರ್ ಹೆಡ್‌ಲೈಟ್‌, 8 ಸ್ಪೀಕರ್ ಸೌಂಡ್ ಸಿಸ್ಟಮ್ ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಏರ್ ಬಾಗ್ಸ್, ರೇರ್ ಪಾರ್ಕಿಂಗ್ ಸೆನ್ಸರ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಭಾರತದಲ್ಲಿ ಮಾರುತಿ ಸುಜುಕಿಯ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್‌ಗಳಲ್ಲಿ ಒಂದಾಗಿ ಹಲವು ವರ್ಷಗಳಿಂದ ಆಲ್ಟೊ ಕೆ10 ಜನಪ್ರಿಯವಾಗಿದೆ. ಇದು ಬೆಸ್ಟ್ ಲುಕ್ ಹೊಂದಿದ್ದು, ನಗರ ಪ್ರದೇಶದ ಸಂಚಾರ ದಟ್ಟಣೆ ರಸ್ತೆಗಳಲ್ಲಿ ಸುಲಭವಾಗಿ ಓಡಿಸಬಹುದು. ಬೆಲೆ ವಿಚಾರಕ್ಕೆ ಬರುವುದಾದರೆ, ರೂ.3.99 ಲಕ್ಷದಿಂದ ರೂ.5.95 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದ್ದು, 24.39 - 24.9 kmpl ಮೈಲೇಜ್ ನೀಡಲಿದೆ.

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು 1 ಲೀಟರ್ ಡುಯಲ್ಜೆಟ್ ಪೆಟೋಲ್ ಎಂಜಿನ್ ಹೊಂದಿದ್ದು, 67 PS ಪವರ್ ಹಾಗೂ 89 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಅಥವಾ 5 ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಸಿಎನ್‌ಜಿ ಕಿಟ್ ಹೊಂದಿರುವ ಕಾರು, 57 PS ಪವರ್, 82.1 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಮಾರುತಿ ಸುಜುಕಿ ಕಂಪನಿಯ ಮತ್ತೊಂದು ಕೈಗೆಟುಕುವ ಬೆಲೆಯಲ್ಲಿ ದೊರೆಯುವ ಕಾರು, 'ಸೆಲೆರಿಯೊ' ಆಗಿದ್ದು, ದೊಡ್ಡ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತದೆ. ರೂ.5.35 ಲಕ್ಷದಿಂದ ರೂ.7.13 ಲಕ್ಷ ಪ್ರಾರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಕೆಫೀನ್ ಬ್ರೌನ್, ಫೈರ್ ರೆಡ್ ಹಾಗೂ ಸಿಲ್ಕಿ ಸಿಲ್ವರ್ ಸೇರಿದಂತೆ ಆರು ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್/ಸಿಎನ್‌ಜಿ ಎಂಜಿನ್ ಹೊಂದಿರುವ ಈ ಕಾರು, 24.97 - 26.68 kmpl ಮೈಲೇಜ್ ನೀಡುತ್ತದೆ.

ಹುಂಡೈ ಗ್ರಾಂಡ್ ಐ10 ನಿಯೋಸ್ ತನ್ನ ಆಕರ್ಷಕ ನೋಟದಿಂದಲೇ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ. ಇದು ರೂ.5.73 ಲಕ್ಷದಿಂದ ರೂ.8.51 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಇದರ 1.2 ಲೀಟರ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್, 83 PS ಗರಿಷ್ಠ ಪವರ್, ಹಾಗೂ 114 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 5 ಸ್ವೀಡ್ ಮ್ಯಾನುವಲ್ ಹಾಗೂ AMT ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ.

ರೆನಾಲ್ಟ್ ಕ್ವಿಡ್ ಕಾರನ್ನು ಭಾರತದ ಪ್ರತಿಯೊಬ್ಬ ಗ್ರಾಹಕರು ಲೈಕ್ ಮಾಡುತ್ತಾರೆ. ಇದು ಎಸ್‌ಯುವಿ ಹೊಂದಿರುವ ನೋಟವನ್ನು ಹೊಂದಿದ್ದು, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ ಪ್ಲೇ ಸೇರಿದಂತೆ ಭರಪೂರ ವೈಶಿಷ್ಟ್ಯಗಳನ್ನು ಪಡೆದಿದೆ. ಈ ರೆನಾಲ್ಟ್ ಕ್ವಿಡ್ ರೂ.4.70 ಲಕ್ಷದಿಂದ ರೂ.6.33 ಲಕ್ಷ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಜೊತೆಗೆ 21.46 - 22.3 kmpl ಮೈಲೇಜ್ ನೀಡುತ್ತದೆ.

Article Published On: Thursday, April 6, 2023, 15:56 [IST]
English summary
Popular cars available low prices in india details kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+