ಭಾರತದಲ್ಲಿ ಬಿಡುಗಡೆಯಾಗಲಿವೆ ಜನಪ್ರಿಯ ಮಿಡ್-ಸೈಜ್ SUVಗಳು: ಇಲ್ಲಿದೆ ಪ್ರಮುಖ ಮಾಹಿತಿ

ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಂಪನಿಗಳ ಮಿಡ್ ಸೈಜ್ ಎಸ್‌ಯುವಿಗಳು ದೊಡ್ಡ ಪ್ರಮಾಣದಲ್ಲಿ ಜನಪ್ರಿಯತೆಯನ್ನು ಗಳಿಸಿವೆ. ಅದರಲ್ಲೂ ವಿದೇಶಿ ಕಾರು ತಯಾರಕ ಕಂಪನಿಗಳಾದ ಹ್ಯುಂಡೈ ಹಾಗೂ ಕಿಯಾ ಈ ವಿಭಾಗದಲ್ಲಿ ಪಾರುಪತ್ಯ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಕ್ರೆಟಾ ಹಾಗೂ ಸೆಲ್ಟೋಸ್ ಫೇಸ್‌ಲಿಫ್ಟ್ ಲಾಂಚ್ ಆಗಲಿದೆ. ಹೆಚ್ಚಿನ ವಿವರ ಇಲ್ಲಿದೆ.

ಭಾರತದಲ್ಲಿ ಮಿಡ್-ಸೈಜ್ ಎಸ್‌ಯುವಿ ವಿಭಾಗದಲ್ಲಿ ಹ್ಯುಂಡೈ ಕ್ರೆಟಾ ಹಾಗೂ ಕಿಯಾ ಸೆಲ್ಟೋಸ್ ಕಾರುಗಳು ದೊಡ್ಡಮಟ್ಟದ ಜನಪ್ರಿಯತೆಯನ್ನು ಗಳಿಸಿವೆ. ಕಳೆದ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಕೊರಿಯಾದ ಪ್ರಮುಖ ಕಾರು ತಯಾರಕ ಕಂಪನಿಗಳಾಗಿ ಗುರುತಿಸಿಕೊಂಡಿರುವ ಹ್ಯುಂಡೈ, ಕ್ರೆಟಾ ಎಸ್‌ಯುವಿಯ 10,421 ಯುನಿಟ್, ಕಿಯಾ, ಸೆಲ್ಟೋಸ್ ಎಸ್‌ಯುವಿಯ 8,012 ಯುನಿಟ್ ಸೇಲ್ ಮಾಡಿತ್ತು. ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಬಹುತೇಕ ಈ ವರ್ಷವೇ ಬಿಡುಗಡೆಯಾಗಲಿದ್ದು, ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ 2024ರಲ್ಲಿ ಲಾಂಚ್ ಆಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿವೆ ಜನಪ್ರಿಯ ಮಿಡ್-ಸೈಜ್ SUVಗಳು: ಇಲ್ಲಿದೆ ಪ್ರಮುಖ ಮಾಹಿತಿ

ಮೊದಲಿಗೆ ಮುಂಬರಲಿರುವ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ ಬಗ್ಗೆ ಮಾತನಾಡೋಣ. ಈಗಾಗಲೇ ನವೀಕರಿಸಿದ ಕ್ರೆಟಾ ಕಾರುಗಳನ್ನು ಕಂಪನಿಯು ಆಯ್ದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಭಾರತದಲ್ಲಿ ಬಿಡುಗಡೆಯಾಗುವ ಮೊದಲು ಒಳ ಹಾಗೂ ಹೊರಭಾಗದ ವಿನ್ಯಾಸದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗುವುದು ಎಂದು ಕಂಪನಿ ಮಾಹಿತಿ ನೀಡಿದ್ದು, ಕ್ರೆಟಾ ಈ ವರ್ಷವೇ ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಗಿದ್ದು, 2024ರಲ್ಲಿ ಖರೀದಿಗೆ ಸಿಗಲಿದೆ.

ನೂತನ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು ಹ್ಯುಂಡೈ ವೆರ್ನಾ ಮತ್ತು ಅಲ್ಕಾಜರ್ ಪಡೆದಿರುವಂತೆ 1.5 ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 160 PS ಗರಿಷ್ಠ ಪವರ್ ಹಾಗೂ 253 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. ಅಲ್ಲದೆ, 1.4 ಲೀಟರ್ ಟರ್ಬೊ ಎಂಜಿನ್ ಗಿಂತ ಪವರ್ ಫುಲ್ ಆಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿವೆ ಜನಪ್ರಿಯ ಮಿಡ್-ಸೈಜ್ SUVಗಳು: ಇಲ್ಲಿದೆ ಪ್ರಮುಖ ಮಾಹಿತಿ

ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ, ಪ್ಯಾರಮೇಟ್ರಿಕ್ ಜ್ಯೂವೆಲ್ ಟೈಪ್ ಫ್ರಂಟ್ ಗ್ರಿಲ್, ಎಲ್ಇಡಿ DRLs ಹಾಗೂ ಟೈಲಿ ಲೈಟ್ಸ್ ಅನ್ನು ಪಡೆಯಲಿದೆ. ಜೊತೆಗೆ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿದೆ. ಅದರಲ್ಲಿ ಪ್ರಮುಖವಾಗಿ ಎಮರ್ಜೆನ್ಸಿ ಬ್ರೇಕಿಂಗ್, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್, ಲೇನ್ ಕೀಪ್ ಅಸಿಸ್ಟ್ ಹಾಗೂ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ನಂತಹ ವೈಶಿಷ್ಟ್ಯಗಳು ಇರಲಿವೆ.

ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿಯು ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಈ ಕಾರು ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡು ಬಂದಿತ್ತು. ಆ ಚಿತ್ರಗಳು ಸೋರಿಕೆಯಾಗಿದ್ದವು. ನೂತನ ಸೆಲ್ಟೋಸ್ ಫೇಸ್‌ಲಿಫ್ಟ್ ಹೊಸದಾದ ಗ್ರಿಲ್, ಆಕರ್ಷಕ ಹೆಡ್‌ಲ್ಯಾಂಪ್ಸ್, ಎಲ್ಇಡಿ DRLs, ಫಾಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ಅಲಾಯ್ ವೀಲ್ಸ್, ಸನ್‌ರೂಫ್ ಹೊಂದಿರಲಿದ್ದು, ಈ ವರ್ಷದ ಮಧ್ಯಭಾಗದಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಗ್ರೀನ್, ಪ್ಲುಟನ್ ಬ್ಲೂ, ಫ್ಯೂಷನ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ.

ನವೀಕರೀಸಿದ ಕಿಯಾ ಸೆಲ್ಟೋಸ್ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು ಹೊಸದಾದ 1.5 ಲೀಟರ್ 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿರಲಿದೆ. 158 bhp ಗರಿಷ್ಠ ಪವರ್ ಹಾಗೂ 260 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿರಲಿದ್ದು, 6-ಸ್ವೀಡ್ ಟಾರ್ಕ್ ಕನ್ವರ್ಟರ್ ಆಟೊಮೇಟಿಕ್ ಹಾಗೂ 7-ಸ್ವೀಡ್ DCT ಆಟೊಮೇಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರಬಹುದು. ಜೊತೆಗೆ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಪಡೆದಿರಲಿದೆ.

ಇನ್ನು, ಭಾರತದ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ರೂ.10.84 ಲಕ್ಷದಿಂದ ರೂ.19.13 ಲಕ್ಷ, ಹಾಗೂ ಕಿಯಾ ಸೆಲ್ಟೋಸ್ ರೂ.10.84 ಲಕ್ಷದಿಂದ ರೂ.19.13 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. ಮುಂಬರಲಿರುವ ಫೇಸ್‌ಲಿಫ್ಟ್ ಮಾದರಿಗಳು ಆಕರ್ಷಕ ಬದಲಾವಣೆಗಳನ್ನು ಪಡೆದುಕೊಳ್ಳುವುದರಿಂದ ದರವು ಕೊಂಚ ಮಟ್ಟಿಗೆ ಹೆಚ್ಚಿರಬಹುದು. ಆದರೆ, ಕಾರ್ಯಕ್ಷಮತೆ, ವೈಶಿಷ್ಟ್ಯ ಹಾಗೂ ವಿನ್ಯಾಸದ ಕುರಿತ ಹೆಚ್ಚಿನ ಮಾಹಿತಿ ಅವುಗಳನ್ನು ಅನಾವರಣ ಮಾಡಿದ ಮೇಲೆ ತಿಳಿಯಲಿದೆ.

Article Published On: Tuesday, March 28, 2023, 15:36 [IST]
English summary
Popular mid size suvs launched india important information in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+