ಜನಪ್ರಿಯ ಟಾಟಾ ನೆಕ್ಸಾನ್ ಎಸ್‌ಯುವಿ ಬೆಲೆ ಏರಿಕೆ: ಇಲ್ಲಿದೆ ಮಾಹಿತಿ
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿರುವ ಟಾಟಾ ಮೋಟಾರ್ಸ್, ಆಯ್ದ ನೆಕ್ಸಾನ್ ಎಸ್‌ಯುವಿಯ ಪೆಟ್ರೋಲ್ ಹಾಗೂ ಡೀಸೆಲ್ ರೂಪಾಂತರಗಳ ಬೆಲೆಯನ್ನು ಏರಿಕೆ ಮಾಡಿದೆ. ಬರೋಬ್ಬರಿ ರೂ.15,000 ಹೆಚ್ಚಳವಾಗಿದ್ದು, 2022ರ ಜನವರಿ, ಜುಲೈ ಹಾಗೂ ನವೆಂಬರ್ ಬಳಿಕ ನಾಲ್ಕನೇ ಬಾರಿಗೆ ದರ ಹೆಚ್ಚಳವಾಗಿದೆ.
ಟಾಟಾ ನೆಕ್ಸಾನ್ ಎಸ್‌ಯುವಿ ಪೆಟೋಲ್ ಆವೃತ್ತಿ ಬೆಲೆಗಳು ರೂ.10,000 ಹೆಚ್ಚಾಗಿದ್ದು, ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಈ ಕಾರುಗಳ ದರಗಳು ರೂ.7.80 ಲಕ್ಷದಿಂದ ಪ್ರಾರಂಭವಾಗಲಿದ್ದು, ಟಾಪ್ ಎಂಡ್ ಮಾದರಿ ಬೆಲೆ ರೂ.12.95 ಲಕ್ಷ ಇದೆ. ಡೀಸೆಲ್ ಎಂಜಿನ್ ಚಾಲಿತ ನೆಕ್ಸಾನ್ ಎಸ್‌ಯುವಿ ಬೆಲೆ ಬರೋಬ್ಬರಿ ರೂ.15,000 ಏರಿಕೆಯಾಗಿದ್ದು, ಈ ಕಾರಿನ ಆರಂಭಿಕ ಬೆಲೆ ರೂ.10 ಲಕ್ಷದಿಂದ ರೂ.14.30 ಲಕ್ಷದವರೆಗೆ ಇದೆ. ಇಷ್ಟೇಅಲ್ಲದೆ, ನೆಕ್ಸಾನ್ ಎಸ್‌ಯುವಿ ಜೆಟ್ ಆವೃತ್ತಿಯನ್ನು ಸ್ಥಗಿತಗೊಳಿಸಲಾಗಿದೆ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಟಾಟಾ ನೆಕ್ಸಾನ್ ಎಸ್‌ಯುವಿ 8 ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದ್ದು, ಎರಡು ಎಂಜಿನ್ ಆಯ್ಕೆಯಲ್ಲಿ ದೊರೆಯಲಿದೆ. ಅವುಗಳೆಂದರೆ, 1.2- ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5- ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ಎಂಜಿನ್, 120 PS ಪವರ್, 170 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಡೀಸೆಲ್ ಎಂಜಿನ್, 110 PS ಪವರ್, 260 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 6-ಸ್ವೀಡ್ ಮ್ಯಾನುಯಲ್ ಟ್ರಾಸ್ಮಿಷನ್ ಅಥವಾ 6-ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ.
ಟಾಟಾ ನೆಕ್ಸಾನ್ ಎಸ್‌ಯುವಿ, ಗ್ರಾಹಕರನ್ನು ಆಕರ್ಷಿಸವ ಹತ್ತು ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. 7 ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 8 ಸ್ಪೀಕರ್ ಸೌಂಡ್ ಸಿಸ್ಟಮ್ ಅನ್ನು ಹೊಂದಿದೆ. ಪ್ರಸ್ತುತ, ದಿನಮಾನಗಳಲ್ಲಿ ಹೊಸ ಕಾರು ಖರೀದಿಸುವ ಗ್ರಾಹಕ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಸುರಕ್ಷತೆ ದೃಷ್ಟಿಯಿಂದಲ್ಲೂ ಇದು ಅತ್ಯುತ್ತಮವಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ಸ್, ಎಬಿಎಸ್, ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.
ಅಧಿಕೃತ ಮಾಹಿತಿ ಪ್ರಕಾರ, ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಆವೃತ್ತಿಯನ್ನು ರೆಡಿ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ರಸ್ತೆಯಲ್ಲಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ. ಹೊಸ ಕಾರು ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿ ಸಾಕಷ್ಟು ಬದಲಾವಣೆಯಾಗಿರಲಿದೆ ಎಂದು ಹೇಳಲಾಗಿದೆ. ಪವರ್ ಫುಲ್ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗಬಹುದು. ಆರು ಏರ್ ಬಾಗ್ಸ್ ಸೇರಿದಂತೆ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ರೂ.7.79 ಲಕ್ಷ ಬೆಲೆಯನ್ನು ಹೊಂದಿರಬಹುದು.
ಟಾಟಾ ನೆಕ್ಸಾನ್ ಎಸ್‌ಯುವಿ ಪೆಟ್ರೋಲ್, ಡೀಸೆಲ್ ಮಾತ್ರವಲ್ಲ ಎಲೆಕ್ಟ್ರಿಕ್ ಆವೃತ್ತಿಯಾಗಿ ಖರೀದಿಗೆ ಲಭ್ಯವಿದೆ. ನೆಕ್ಸಾನ್ ಇವಿ ಪ್ರೈಮ್, ರೂ.14.49 ಲಕ್ಷದಿಂದ ರೂ.16.99 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಒಟ್ಟು ಮೂರು ರೂಪಾಂತರಗಳಲ್ಲಿ ದೊರೆಯಲಿದೆ. ಅವುಗಳೆಂದರೆ, XM, XZ+, and XZ+ Lux. ಇದು 30.2kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, 129 PS ಪವರ್ ಮತ್ತು 245 Nm ಪೀಕ್ ಟಾರ್ಕ್ ಉತ್ಪಾದಿಸಲಿದ್ದು, 312 ಕಿಮೀ ರೇಂಜ್ ನೀಡುತ್ತದೆ.
ಟಾಟಾ ನೆಕ್ಸಾನ್ ಇವಿಯ ಚಾರ್ಜಿಂಗ್ ಆಯ್ಕೆ ಬಗ್ಗೆ ಮಾತನಾಡುವುದಾದರೆ, ಈ ಕಾರಿನ ಬ್ಯಾಟರಿ ಪ್ಯಾಕ್, 3.3kW AC ಚಾರ್ಜರ್ ನಲ್ಲಿ ಸಂಪೂರ್ಣ ಚಾರ್ಜ್ ಆಗಲು 8.5 ಗಂಟೆ ತೆಗೆದುಕೊಳ್ಳುತ್ತದೆ. 50kW DC ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಶೇಕಡ 80% ಬ್ಯಾಟರಿ ಚಾರ್ಜ್ ಆಗಲು 60 ನಿಮಿಷ ತೆಗೆದುಕೊಳ್ಳುತ್ತದೆ. ಇದು ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏಳು-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸಿಂಗಲ್ - ಪೇನ್ ಸನ್‌ರೂಫ್ ಸೇರಿದಂತೆ ಹತ್ತಾರು ನವೀನ ವೈಶಿಷ್ಟಗಳನ್ನು ಹೊಂದಿರಲಿದೆ.
ಸದ್ಯ, ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಎಲೆಕ್ಟ್ರಿಕ್ ಕಾರಿನ ಬೆಲೆಯನ್ನು ರೂ.20,000 ವರೆಗೆ ಹೆಚ್ಚಿಸಲಾಗಿದ್ದು, ರೂ.8.69 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ಇದು ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಅವುಗಳೆಂದರೇ, 19.2kWh ಹಾಗೂ 24kWh ಬ್ಯಾಟರಿ ಪ್ಯಾಕ್, ಕ್ರಮವಾಗಿ 250 km ಹಾಗೂ 315 km ರೇಂಜ್ ನೀಡುತ್ತದೆ. ಏಳು ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಹಾಗೂ ಆಪಲ್ ಕಾರ್ ಪ್ಲೇ ಸೇರಿದಂತೆ ಅನೇಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications