Renault: ಸಿಹಿಸುದ್ದಿ.. ರೆನಾಲ್ಟ್ ಕಂಪನಿಯ ಈ ಕಾರುಗಳಿಗೆ ರೂ.65,000ವರೆಗೆ ರಿಯಾಯಿತಿ, ಈಗ ಬಿಟ್ಟರೆ ಸಿಗಲ್ಲ!
ಫ್ರೆಂಚ್ ವಾಹನ ತಯಾರಕ ರೆನಾಲ್ಟ್ (Renault), ಭಾರತದಲ್ಲಿ ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿದೆ. ಕಂಪನಿ ಕಾರುಗಳು ಆಕರ್ಷಕ ವೈಶಿಷ್ಟ್ಯ, ವಿನ್ಯಾಸ ಹಾಗೂ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಈ ವರ್ಷಾಂತ್ಯದಲ್ಲಿ ವಿವಿಧ ಮಾದರಿಗಳು ಭರ್ಜರಿ ರಿಯಾಯಿತಿ ಪ್ರಯೋಜವನ್ನು ಹೊಂದಿವೆ.
ರೆನಾಲ್ಟ್ ಕಾರುಗಳು ಒಟ್ಟು ರೂ.65,000ವರೆಗೆ ಡಿಸ್ಕೌಂಟ್ ಪಡೆದಿದ್ದು, ಅದರಲ್ಲಿ ನಗದು ರಿಯಾಯಿತಿ (Cash Discounts), ವಿನಿಮಯ ಬೋನಸ್ (Exchange Bonuses) ಮತ್ತು ಲಾಯಲ್ಟಿ ಬೋನಸ್ (Loyalty Bonuses) ಒಳಗೊಂಡಿದೆ. ಈ ರಿಯಾಯಿತಿ ಸೌಲಭ್ಯಗಳು ಡಿಸೆಂಬರ್ 31ರವರೆಗೆ ಲಭ್ಯವಿದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್ ಆಧರಿಸಿ, ಡಿಸ್ಕೌಂಟ್ ಆಫರ್ ಬೇರೆ-ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂನ್ನು ಸಂಪರ್ಕಿಸಿರಿ.

ಮೊದಲಿಗೆ ರೆನಾಲ್ಟ್ ಕ್ವಿಡ್ (Renault Kwid) ಹೊಂದಿರುವ ರಿಯಾಯಿತಿ ಸೌಲಭ್ಯದ ಬಗ್ಗೆ ಮಾತನಾಡೋಣ. ಈ ಕಾರು, ರೂ.50,000 ವರೆಗೆ ಡಿಸ್ಕೌಂಟ್ ಪಡೆದಿದ್ದು, ರೂ.20,000 ನಗದು ರಿಯಾಯಿತಿ, ರೂ.20,000 ಎಕ್ಸ್ಚೇಂಜ್ ಬೋನಸ್ ಹಾಗೂ ರೂ.10,000 ಲಾಯಲ್ಟಿ ಬೋನಸ್ ಸೇರಿದೆ. ಕ್ವಿಡ್ ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.
ಈ ಹೊಸ ರೆನಾಲ್ಟ್ ಕ್ವಿಡ್ ಕಾರು, 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 PS ಪವರ್, 91 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿದಾರರಿಗೆ ದೊರೆಯುತ್ತದೆ. 21.46 - 22.3 kmpl ಮೈಲೇಜ್ ನೀಡುತ್ತದೆ.

ಕ್ವಿಡ್ ಕಾರು ಆರ್‌ಎಕ್ಸ್‌ಇ, ಆರ್‌ಎಕ್ಸ್‌ಎಲ್, ಆರ್‌ಎಕ್ಸ್‌ಎಲ್ (ಒ) ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಿಗಲಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೇನಾರ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಹಿಲ್ ಸ್ಟಾರ್ಟ್ ಅಸಿಸ್ಟ್) ಅನ್ನು ಹೊಂದಿದೆ.
ಜನಪ್ರಿಯ ರೆನಾಲ್ಟ್ ಟ್ರೈಬರ್ (Renault Triber) ಸಹ ಒಟ್ಟು ರೂ.50,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಅದರೊಳಗೆ ರೂ.20,000 ನಗದು ರಿಯಾಯಿತಿ, ರೂ.20,000 ವಿನಿಮಯ ಬೋನಸ್ ಹಾಗೂ ರೂ.10,000 ಲಾಯಲ್ಟಿ ಬೋನಸ್ ಒಳಗೊಂಡಿದೆ. ಈ ಕಾರು, ರೂ.6.33 ಲಕ್ಷದಿಂದ ರೂ.8.97 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

ಈ ರೆನಾಲ್ಟ್ ಟ್ರೈಬರ್ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 7 ಆಸನಗಳನ್ನು ಹೊಂದಿರುವ ಈ ಕಾರು, 18.2 - 20.0 kmpl ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ಫೀಚರ್ಸ್ ಪಡೆದಿದೆ.
ರೆನಾಲ್ಟ್ ಕಿಗರ್ (Renault Kiger) ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಒಟ್ಟು ರೂ.65,000ವರೆಗೆ ಡಿಸ್ಕೌಂಟ್ ಆಫರ್ ಪಡೆದಿದೆ. ಇದರಲ್ಲಿ ರೂ.25,000 ನಗದು ರಿಯಾಯಿತಿ, ರೂ.20,000 ಎಕ್ಸ್ಚೇಂಜ್ ಬೋನಸ್, ಮತ್ತು ರೂ.20,000 ಲಾಯಲ್ಟಿ ಬೋನಸ್ ಸೇರಿವೆ. ಈ ಕಾರು, ರೂ.6.50 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ.
ಈ ಕಿಗರ್, 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 18.24 - 20.5 kmpl ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








