ಅಗ್ಗದ ಬೆಲೆಯ ಕಾರುಗಳಿಗೆ ದೊಡ್ಡ ರಿಯಾಯಿತಿ ನೀಡಿದ ರೆನಾಲ್ಟ್: ರೈತರಿಗೂ ವಿಶೇಷ ಆಫರ್

ದೇಶಾದ್ಯಂತ BS6 ಹಂತ 2 ಎಮಿಷನ್ ಮಾನದಂಡಗಳು ಜಾರಿಯಾಗುವ ಮುನ್ನ 'ರೆನಾಲ್ಟ್ ಇಂಡಿಯಾ' ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ತನ್ನ ವಿವಿಧ ಮಾದರಿ ಕಾರುಗಳ ಮೇಲೆ ರೂ.62,000ವರೆಗೆ ರಿಯಾಯಿತಿಯನ್ನು ಘೋಷಿಸಿದೆ. ಆಸಕ್ತ ಖರೀದಿದಾರರು ಈ ತಿಂಗಳಲ್ಲಿ ಪ್ರಯೋಜನವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿ ಇಲ್ಲಿದೆ.

ರೆನಾಲ್ಟ್ ಕ್ವಿಡ್: ಪ್ರಮುಖ ಫ್ರೆಂಚ್ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿರುವ 'ರೆನಾಲ್ಟ್' ಭಾರತದ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಎಂಟ್ರಿ ಲೆವೆಲ್ 2022ರ 'ಕ್ವಿಡ್' ಮಾದರಿ ಮೇಲೆ ಒಟ್ಟು ರೂ.57,000ವರೆಗೆ ಡಿಸ್ಕೌಂಟ್ ಆಫರ್ ನೀಡುತ್ತಿದೆ. ಅದರಲ್ಲಿ ರೂ.25,000 ನಗದು ರಿಯಾಯಿತಿ, ರೂ.20,000 ಎಕ್ಸ್ಚೇಂಜ್ ಬೋನಸ್ ಹಾಗೂ ರೂ.12,000 ಕಾರ್ಪೊರೇಟ್ ರಿಯಾಯಿತಿಯನ್ನು ಒಳಗೊಂಡಿದೆ. ವಿಶೇಷವಾಗಿ ರೈತರು, ಗ್ರಾಮ ಪಂಚಾಯಿತಿ ಸದಸ್ಯರು ಹೆಚ್ಚುವರಿಯಾಗಿ ರೂ.5,000 ರಿಯಾಯಿತಿ ಪಡೆಯಬಹುದು.

ಅಗ್ಗದ ಬೆಲೆಯ ಕಾರುಗಳಿಗೆ ದೊಡ್ಡ ರಿಯಾಯಿತಿ ನೀಡಿದ ರೆನಾಲ್ಟ್: ರೈತರಿಗೂ ವಿಶೇಷ ಆಫರ್

ದೇಶೀಯ ಮಾರುಕಟ್ಟೆಯಲ್ಲಿ ರೆನಾಲ್ಟ್ ಕ್ವಿಡ್ ರೂ.4.70 ಲಕ್ಷದಿಂದ ರೂ.6.33 ಲಕ್ಷ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 PS ಗರಿಷ್ಠ ಪವರ್ ಹಾಗೂ 91 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ರೆನಾಲ್ಟ್ ಕಿಗರ್: ಸಬ್ 4 ಮೀಟರ್ ಎಸ್‌ಯುವಿ, 'ಕಿಗರ್' 2022 ಹಾಗೂ 2023 (BS6 ಹಂತ 1) ಮಾದರಿಗಳು ಕೂಡ ರೂ.62,000ವರೆಗೆ ರಿಯಾಯತಿ ಪ್ರಯೋಜನಗಳನ್ನು ಒಳಗೊಂಡಿವೆ. ಅದರಲ್ಲಿ ರೂ.25,000 ನಗದು ರಿಯಾಯಿತಿ, ರೂ.25,000 ಎಕ್ಸ್ಚೇಂಜ್ ಬೋನಸ್ ಹಾಗೂ ರೂ.12,000 ಕಾರ್ಪೊರೇಟ್ ರಿಯಾಯಿತಿಯನ್ನು ಹೊಂದಿದೆ. ಜೊತೆಗೆ 2023ರ ಕಿಗರ್ (BS6 ಹಂತ 2) ಮಾದರಿಯು ಒಟ್ಟು ರೂ.54,000ವರೆಗೆ ಡಿಸ್ಕೌಂಟ್ ಆಫರ್ ಒಳಗೊಂಡಿದೆ. ರೂ.10,000 ನಗದು ರಿಯಾಯಿತಿ, ರೂ.20,000 ಎಕ್ಸ್ಚೇಂಜ್ ಬೋನಸ್ ಮತ್ತು ರೂ.12,000 ಕಾರ್ಪೊರೇಟ್ ರಿಯಾಯಿತಿ ಇದೆ.

ರೆನಾಲ್ಟ್ ಕಿಗರ್ ರೂ.6.50 ಲಕ್ಷದಿಂದ ರೂ.11.23 ಲಕ್ಷ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 18.24 - 20.5 kmpl ಮೈಲೇಜ್ ನೀಡಲಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 72 PS ಪವರ್ ಹಾಗೂ 96 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 PS ಪವರ್ 160 Nm ಹಾಗೂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ನಾಲ್ಕು ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹೊಂದಿದೆ.

ರೆನಾಲ್ಟ್ ಟ್ರೈಬರ್: ಭಾರತದ ಗ್ರಾಹಕರಿಗೆ 'ಟ್ರೈಬರ್' ಕಾರಿನ 2022ರ ಮಾದರಿ ಮೇಲೆಯು ರೆನಾಲ್ಟ್ ಇಂಡಿಯಾ ರೂ.62,000ವರೆಗೆ ರಿಯಾಯತಿ ಪ್ರಯೋಜನವನ್ನು ನೀಡುತ್ತಿದೆ. ಅದರಲ್ಲಿ ರೂ.25,000 ನಗದು ರಿಯಾಯಿತಿ, ರೂ.25,000 ಎಕ್ಸ್ಚೇಂಜ್ ಬೋನಸ್ ಹಾಗೂ ರೂ.12,000 ಕಾರ್ಪೊರೇಟ್ ರಿಯಾಯಿತಿಯನ್ನು ಒಳಗೊಂಡಿದೆ. ಈ ಕಾರು, ರೂ.6.33 ಲಕ್ಷದಿಂದ ರೂ.8.97 ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ.

ಈ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುವುದಾದರೆ, ಇದು 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು 72 PS ಪವರ್ ಹಾಗೂ 96 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 18.2 - 20 kmpl ಮೈಲೇಜ್ ನೀಡುತ್ತದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಒಟ್ಟಾರೆಯಾಗಿ ರೆನಾಲ್ಟ್ ಇಂಡಿಯಾ ತನ್ನ ಅಗ್ಗದ ಬೆಲೆಯ ಕಾರುಗಳ ಮೇಲೆ ಭರ್ಜರಿ ರಿಯಾಯತಿ ನೀಡಿದ್ದು, ಇದರಿಂದ ಗ್ರಾಹಕರಿಗೆ ಕೊಂಚ ಮಟ್ಟಿಗೆ ಅನುಕುಲವಾಗಲಿದೆ. ಜೊತೆಗೆ ರೈತರಿಗೂ ವಿಶೇಷ ಆಫರ್ ನೀಡುತ್ತಿರುವುದು ಆಕರ್ಷಣೀಯವಾಗಿದೆ. ಕಂಪನಿಯು ಒಳ್ಳೆಯ ಲಾಭವನ್ನು ಪಡೆಯುವ ಮೂಲಕ ತನ್ನ ಮಾರಾಟದಲ್ಲಿ ಮತ್ತಷ್ಟು ಉತ್ತಮವಾದ ಪ್ರಗತಿಯನ್ನು ಕಾಣಬಹುದು. ಈಗಾಗಲೇ ಮಾರುತಿ ಸುಜುಕಿ ಸಹ ತನ್ನ ಎಂಟ್ರಿ ಲೆವೆಲ್ ಕಾರುಗಳ ಮೇಲೆ ರಿಯಾಯಿತಿಯನ್ನು ಘೋಷಿಸಿದೆ.

Article Published On: Wednesday, March 8, 2023, 10:26 [IST]
English summary
Renault india updates discounts offers details kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+