ಸೋತು ಬೇಸರದಲ್ಲಿದ್ದ ಸೌತ ಆಫ್ರಿಕಾಕ್ಕೆ ಖುಷಿ ಸುದ್ದಿ ನೀಡಿದ ಸುಜುಕಿ: ರಣಬೇಟೆಗಾರನ ಎಂಟ್ರಿ

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜಿಮ್ನಿ ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿ ಹೊಸ ಕ್ರಾಂತಿಯನ್ನು ಸೃಷ್ಟಿಸಿತು. ಜನಪ್ರಿಯ ಜಿಮ್ನಿ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲೂ ಕೂಡ ಬಾರೀ ಬೇಡಿಕೆಯೊಂದಿಗೆ ಹೊಸ ಕ್ರಾಂತಿ ಮಾಡುತ್ತಿದೆ. ಇದೀಗ ಈ ಜನಪ್ರಿಯ ಸುಜುಕಿ ಜಿಮ್ನಿ 5-ಡೋರ್ (Suzuki Jimny 5-door) ಸೌತ ಆಫ್ರಿಕಾದ ಮಾರುಕಟ್ಟೆಗೂ ಎಂಟ್ರಿ ಕೊಟ್ಟಿದೆ.

ಜಪಾನಿನ ವಾಹನ ತಯಾರಕ ಕಂಪನಿಯಾದ ಸುಜುಕಿ ಭಾರತದಲ್ಲಿ ತಯಾರಿಸಿದ ಜಿಮ್ನಿ 5-ಡೋರಿನ ಎಸ್‍ಯುವಿಯನ್ನು ಸೌತ ಆಫ್ರಿಕಾದ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಸುಜುಕಿ ಜಿಮ್ನಿ ಎಸ್‍ಯುವಿಯು GL ಮತ್ತು GLX ಎಂಬ ಎರಡು ಟ್ರಿಮ್ ಹಂತಗಳಲ್ಲಿ ಲಭ್ಯವಿದೆ. ಸುಜುಕಿ ಜಿಮ್ನಿ 5-ಡೋರ್ ಬೆಲೆಯು ಆರ್ 429,900 (ಅಂದಾಜು ರೂ. 19.63 ಲಕ್ಷ) ಆಗಿದೆ.

Suzuki Jimny 5-door

ಜನಪ್ರಿಯ ಜಿಮ್ನಿ ಆಫ್-ರೋಡರ್‌ನ 3-ಡೋರ್ ಮತ್ತು 5-ಡೋರ್ ಎರಡೂ ಆವೃತ್ತಿಗಳನ್ನು ಪರಿಚಯಿಸಿದ ಮೊದಲ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ದಕ್ಷಿಣ ಆಫ್ರಿಕಾ ಒಂದಾಗಿದೆ. ಜನಪ್ರಿಯ ಜಿಮ್ನಿ ಆಫ್-ರೋಡರ್‌ನ 3-ಡೋರ್ ಮತ್ತು 5-ಡೋರ್ ಎರಡೂ ಆವೃತ್ತಿಗಳನ್ನು ಪರಿಚಯಿಸಿದ ಮೊದಲ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ದಕ್ಷಿಣ ಆಫ್ರಿಕಾ ಒಂದಾಗಿದೆ. ಇಂಡಿಯಾ-ಸ್ಪೆಕ್ ಮಾಡೆಲ್ ಝೀಟಾ ಮತ್ತು ಆಲ್ಫಾ ಎಂಬ ಎರಡು ಟ್ರಿಮ್‌ಗಳಲ್ಲಿ ಲಭ್ಯವಿದೆ.

ಎರಡನ್ನೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ. ದಕ್ಷಿಣ ಆಫ್ರಿಕನ್-ಸ್ಪೆಕ್ ಮಾದರಿಯು ನಮ್ಮ ಮಾರುಕಟ್ಟೆಯಲ್ಲಿ ನೀಡಲಾದ ಮಾದರಿಗೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಿನ ಬೆಲೆಯನ್ನು ಹೊಂದಿದೆ. ಸುಜುಕಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ.

Suzuki Jimny 5-door

ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದ್ದು, ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಎಸ್‍ಯುವಿಯ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ.

ಈ ಎಂಜಿನ್ 6000 rpm ನಲ್ಲಿ 104.8 ಪಿಎಸ್ ಗರಿಷ್ಠ ಪವರ್ ಹಾಗೂ 4000 rpm ನಲ್ಲಿ 134.2 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಹಳೆಯ ಜಿಪ್ಸಿಯಂತೆಯೇ, ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಬಳಸುತ್ತದೆ.

Suzuki Jimny 5-door

ಜಿಮ್ನಿ ಕಾಂಪ್ಯಾಕ್ಟ್ ಆಯಾಮಗಳನ್ನು ಹೊಂದಿದೆ, ಇದು ಗರಿಷ್ಠ ಟ್ರಾಫಿಕ್ ಸಮಯದಲ್ಲಿ ಚಾಲನೆ ಮಾಡಲು ಸುಲಭ. ರಸ್ತೆಯಲ್ಲಿ ಕಡಿಮೆ ಜಾಗ ಸಾಕಾಗುತ್ತದೆ. ಅದರ ಹೊರತಾಗಿ, ಜಿಮ್ನಿಯು ಕುಶಲತೆಯಿಂದ ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ. ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ. ಈ ಮಾರುತಿ ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಂಡ್ರಾಯ್ಡ್ ಆಟೋ ಹೊಂದಿದೆ.

ಇದರೊಂದಿಗೆ ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ. ಜಿಮ್ನಿ ಎಸ್‍ಯುವಿಯ ಸುರಕ್ಷತಾ ವೈಶಿಷ್ಟ್ಯಗಳ ಕುರಿತು ಮಾತನಾಡುವುದಾದರೆ, ಇದು 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಸೈಡ್ ಇಂಪ್ಯಾಕ್ಟ್ ಡೋರ್ ಬೀಮ್ಸ್ ಒಳಗೊಂಡಂತೆ ವಿವಿಧ ಪಿಚರ್ಸ್ ಗಳನ್ನು ಹೊಂದಿವೆ.

Suzuki Jimny 5-door

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.

Article Published On: Friday, November 17, 2023, 13:30 [IST]
English summary
Suzuki jimny 5 door suv launched in south africa details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+