Suzuki Swift: ಮೋಟಾರ್ ಶೋನಲ್ಲಿ ಸುಜುಕಿ ಸ್ವಿಫ್ಟ್ ಪ್ರದರ್ಶನ, ಭಾರತದಲ್ಲಿ ಕಡಿಮೆ ಬೆಲೆಗೆ ಬಿಡುಗಡೆ?
ಜಪಾನಿನ ಪ್ರಮುಖ ವಾಹನ ತಯಾರಕ ಕಂಪನಿ ಸುಜುಕಿ (Suzuki), ಟೋಕಿಯೊ ಮೋಟಾರ್ ಶೋ (Tokyo Motor Show)ನಲ್ಲಿ ಹೊಸ ಕಾರು ಹಾಗೂ ಎಸ್‌ಯುವಿಗಳನ್ನು ಪ್ರದರ್ಶಿಸಲು ಸಿದ್ಧವಾಗಿದೆ. ಪ್ರಮುಖವಾಗಿ, ಹೊಸ ತಲೆಮಾರಿನ ಸ್ವಿಫ್ಟ್ ಕಾರನ್ನು ಅನಾವರಣಗೊಳಿಸಲಿದೆ. ಇದು ವಿನ್ಯಾಸ ಹಾಗೂ ವೈಶಿಷ್ಟ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಹೊಂದಿರಲಿದೆ.
ಇತ್ತೀಚೆಗೆ, ಸುಜುಕಿ ಹೊಸ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಚಿತ್ರವನ್ನು ಬಹಿರಂಗಪಡಿಸಿತ್ತು. ಈ ಕಾರು, ಮರು - ವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ (bumper) ಮತ್ತು ಹೊಸದಾದ ಕಪ್ಪು ಬಣ್ಣದ ಗ್ರಿಲ್ ಅನ್ನು ಪಡೆದಿರಲಿದೆ. ಡಿಆರ್‌ಎಲ್ ಕೂಡ ನವೀನವಾಗಿದ್ದು, ಆಕರ್ಷಕ ಎಲ್ಇಡಿ ಹೆಡ್‌ಲ್ಯಾಂಪ್‌ನ್ನು ಹೊಂದಿರಲಿದ್ದು, ಅದರ ಕೆಳಗೆ ಫಾಗ್ ಲ್ಯಾಂಪ್ ಒಳಗೊಂಡಿರಲಿದ್ದು, ನೋಡುಗರನ್ನು ಸೆಳೆಯುತ್ತದೆ.

ಈಗ, ಸುಜುಕಿ ಲೋಗೋ (Suzuki logo) ಬಾನೆಟ್‌ನ ಮೇಲ್ಭಾಗದಲ್ಲಿರಾಲಿದೆ. ಜೊತೆಯಲ್ಲಿ ಹೊಸದಾಗಿ ವಿನ್ಯಾಸಗೊಳಿಸಿರುವ ಡ್ಯುಯಲ್ - ಟೋನ್ ವೀಲ್ಸ್ ಕೂಡ ಪಡೆದಿರಲಿದೆ. ಇದರೊಟ್ಟಿಗೆ, ಒಆರ್‌ವಿಎಂ (ORVM), ರೂಫ್ ಹಾಗೂ ಪಿಲ್ಲರ್ ಕಪ್ಪು ಬಣ್ಣವನ್ನು ಹೊಂದಿರಲಿದ್ದು, ಈ ಕಾರಿಗೆ ಆಕರ್ಷಕ ನೋಟವನ್ನು ನೀಡುತ್ತದೆ. ಹಿಂಭಾಗದಲ್ಲಿ ಮರು-ವಿನ್ಯಾಸಗೊಳಿಸಲಾದ ಟೈಲ್‌ಗೇಟ್, ಬಂಪರ್ ಮತ್ತು ಸಿ-ಆಕಾರದ ಡಿಆರ್‌ಎಲ್ ಅನ್ನು ಪಡೆದಿರಲಿದೆ.
ಹೊಸ ತಲೆಮಾರಿನ ಸ್ವಿಫ್ಟ್, ಒಳಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಹೊಂದಿರಲಿದ್ದು, ಡ್ಯಾಶ್‌ಬೋರ್ಡ್ ವಿನ್ಯಾಸ ಫ್ರಾಂಕ್ಸ್ ಮತ್ತು ಬ್ರೆಜ್ಜಾ ಎಸ್‌ಯುವಿಗಳಿಗೆ ಹೋಲಿಕೆಯಾಗುತ್ತದೆ. ನೂತನ ಎಸಿ ವೆಂಟ್ಸ್, ಆಕರ್ಷಕ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕನೆಕ್ಟ್ ಕಾರ್ ಕಾರ್ ಟೆಕ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ.
ಸುರಕ್ಷತೆಯ ದೃಷ್ಟಿಯಿಂದಲೂ ಈ ಕಾರು, ಅತ್ಯುತ್ತಮವಾಗಿರಲಿದ್ದು, 360 - ಡಿಗ್ರಿ ಕ್ಯಾಮೆರಾ, ಡ್ಯುಯಲ್ ಸೆನ್ಸರ್ ಬ್ರೇಕ್ ಸಪೋರ್ಟ್, ಅಡಾಪ್ಟಿವ್ ಹೈ ಬೀಮ್ ಅಸಿಸ್ಟ್, ಡ್ರೈವರ್ ಮಾನಿಟರಿಂಗ್ ಸಿಸ್ಟಮ್, ಡಿಕ್ಕಿ ಮಿಟಿಗೇಶನ್ ಬ್ರೇಕಿಂಗ್ ಸಿಸ್ಟಮ್ ಹಾಗೂ ADAS (ಸುಧಾರಿತ ಚಾಲಕ ಸಹಾಯಕ ವ್ಯವಸ್ಥೆ) ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿರಲಿದೆ.
ಹೊಸ ತಲೆಮಾರಿನ ಸ್ವಿಫ್ಟ್, ಪವರ್‌ಟ್ರೇನ್ ಮತ್ತು ಗೇರ್‌ಬಾಕ್ಸ್ ಆಯ್ಕೆ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿಯಿಲ್ಲ. ಇದು, ಹೈಬ್ರಿಡ್ ಹಾಗೂ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಸಿಗಬಹುದು. ಇದರೊಂದಿಗೆ 1.2-ಲೀಟರ್, 4-ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 5-ಸ್ಪೀಡ್ ಮ್ಯಾನುವಲ್ ಅಥವಾ ಎಎಂಟಿ ಗೇರ್‌ಬಾಕ್ಸ್‌ನೊಂದಿಗೆ ಲಭ್ಯವಾಗುವ ಸಾಧ್ಯತೆಯಿದೆ.
ಈ ಕಾರು, 2024ರ ಆರಂಭದ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಭಾರತದ ಮಾರುಕಟ್ಟೆಯಲ್ಲಿ 2024 ರ ದ್ವಿತೀಯಾರ್ಧದಲ್ಲಿ ಲಾಂಚ್ ಆಗಬಹುದು. ಹೊಸ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವುದರಿಂದ ರೂ.6.3 ಲಕ್ಷ (ಎಕ್ಸ್ ಶೋ ರೂಂ) ಆರಂಭಿಕ ಬೆಲೆಯಲ್ಲಿ ಖರೀದಿಗೆ ಸಿಗಲಿದ್ದು, ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ರೂ.5.99 ಲಕ್ಷದಿಂದ ರೂ.9.03 ಲಕ್ಷ ದರದಲ್ಲಿ ಸಿಗಲಿದ್ದು, ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲೂ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 22.38 - 22.56 kmpl ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications