Tata: ಟಾಟಾದ ಈ ಕಾರಿಗೆ ಎಲ್ಲಿಲ್ಲದ ಬೇಡಿಕೆ, ಇದೇ ಜನರಿಗೆ ಇಷ್ಟವಂತೆ!
ಟಾಟಾ (Tata) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಈ ಅಕ್ಟೋಬರ್ (2023) ತಿಂಗಳಲ್ಲಿ ವಿವಿಧ ಮಾದರಿಗಳು ಪಡೆದಿರುವ ಕಾಯುವಿಕೆ ಅವಧಿ ಬಗ್ಗೆ ಮಾಹಿತಿ ಲಭ್ಯವಿದೆ. ಅದರಲ್ಲೂ ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅಲ್ಟೋಜ್ (Altroz) ವಿತರಣೆಗೆ ಒಂದಷ್ಟು ಹೆಚ್ಚು ಸಮಯಾವಕಾಶ ಬೇಕಾಗಿದೆ.
ಟಾಟಾ ಅಲ್ಟೋಜ್ (Tata Altroz) ಡೀಸೆಲ್ ಆವೃತ್ತಿಗಳು ಅಧಿಕ ಕಾಯುವಿಕೆ ಅವಧಿ ಹೊಂದಿವೆ. ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು 6 ವಾರಗಳ ಸಮಯಬೇಕು. ಅದೇ ರೀತಿಯಲ್ಲಿ ಪೆಟ್ರೋಲ್ ಹಾಗೂ ಸಿಎನ್‌ಜಿ ಅಲ್ಟೋಜ್ ಹ್ಯಾಚ್‌ಬ್ಯಾಕ್, 4 ವಾರಗಳಿಗೆ ಡಿಲೆವರಿಯಾಗಲಿದೆ. ಇದು, ಮುಂಬೈ ನಗರಕ್ಕೆ ಮಾತ್ರ ಅನ್ವಯಿಸುತ್ತದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ಕಾಯುವಿಕೆ ಅವಧಿ ಬೇರೆಯಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್ ಶಿಪ್ ಭೇಟಿ ನೀಡಿರಿ.

ಟಾಟಾ ಅಲ್ಟೋಜ್ ಹ್ಯಾಚ್‌ಬ್ಯಾಕ್ ಪೆಟ್ರೋಲ್ ಹಾಗೂ ಡಿಸೇಲ್ ಮಾದರಿಗಳು ರೂ.6.60 ಲಕ್ಷದಿಂದ ರೂ.10.74 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. ಸಿಎನ್‌ಜಿ ಅಲ್ಟೋಜ್ ರೂ.7.55 ಆರಂಭಿಕ ದರಕ್ಕೆ ಗ್ರಾಹಕರಿಗೆ ಸಿಗುತ್ತದೆ. ಎಕ್ಸ್ಇ, ಎಕ್ಸ್ಇ ಪ್ಲಸ್, ಎಕ್ಸ್ಎಂ ಪ್ಲಸ್, ಡಾರ್ಕ್ ಎಡಿಷನ್ ಸೇರಿದಂತೆ ವಿವಿಧ ರೂಪಾಂತರದ ಆಯ್ಕೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ.
ಈ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 86 PS ಪವರ್, 113 Nm ಪೀಕ್ ಟಾರ್ಕ್, 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 PS ಗರಿಷ್ಠ ಪವರ್, 140 Nm ಪೀಕ್ ಟಾರ್ಕ್ ಹಾಗೂ 1.5-ಲೀಟರ್ ಡಿಸೇಲ್ ಎಂಜಿನ್ 90 PS ಗರಿಷ್ಠ ಪವರ್ ಹಾಗೂ 200 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 6 ಸ್ವೀಡ್ ಡುಯಲ್ ಕ್ಲಚ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿವೆ. ಅಲ್ಟೋಜ್ ಸಿಎನ್‌ಜಿ ರೂಪಾಂತರ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಹೊಂದಿದ್ದು, 73.5 PS ಗರಿಷ್ಠ ಪವರ್ ಹಾಗೂ 103 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಒಳಗೊಂಡಿದೆ. 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.
ಟಾಟಾ ಅಲ್ಟೋಜ್ ಹ್ಯಾಚ್‌ಬ್ಯಾಕ್ 18.05 - 23.64 kmpl ಮೈಲೇಜ್ ನೀಡುತ್ತದೆ. ಇದು, ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕನೆಕ್ಟ್ದ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್, ಸಿಂಗಲ್ ಪೇನ್ ಸನ್‌ರೂಫ್ ಒಳಗೊಂಡಿದೆ.
ಸುರಕ್ಷತೆಯ ದೃಷ್ಟಿಯಿಂದಲೂ ಈ ಕಾರು, ಅತ್ಯುತ್ತಮವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, ISOFIX ಚೈಲ್ಡ್-ಸೀಟ್ ಆಂಕರರ್ಸ್, ಆಟೋ ಪಾರ್ಕ್ ಲಾಕ್ ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ಹಲವು ಸೇಫ್ಟಿ ಫೀಚರ್ಸ್ ಹೊಂದಿದೆ. ಈ ಕಾರಿಗೆ, ಹುಂಡೈ ಐ20, ಮಾರುತಿ ಸುಜುಕಿ ಬಲೆನೊ ಮತ್ತು ಟೊಯೊಟಾ ಗ್ಲಾನ್ಜಾ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಮುಂಬರುವ ದಸರಾ ಹಬ್ಬದ ವೇಳೆಗೆ ಈ ಕಾರಿಗೆ ಡಿಮ್ಯಾಂಡ್ ಹೆಚ್ಚಾಗಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications