Tata cars: ಮುಂದಿನ 2 ತಿಂಗಳಲ್ಲೇ ಸಿಗಲಿವೆ ಅಗ್ಗದ ಬೆಲೆಯ ಟಾಟಾ ಕಾರುಗಳು.. ಅವೇ ನಂಬರ್ 1 ರೀ!

ಭಾರತದಲ್ಲಿ ಟಾಟಾ (Tata) ತಯಾರಿಸುವ ಕಾರುಗಳು ಅತ್ಯಂತ ವಿಶ್ವಾಸಾರ್ಹವಾಗಿದ್ದು, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತವೆ ಎಂದು ಗ್ರಾಹಕರು ನಂಬಿದ್ದು, ಅದನ್ನು ಕಂಪನಿಯು ಉಳಿಸಿಕೊಂಡಿದೆ. ಮುಂದಿನ ಎರಡು ತಿಂಗಳಲ್ಲಿ ತನ್ನ, ಆಲ್ಟ್ರೋಜ್ ರೇಸರ್, ಪಂಚ್ ಹಾಗೂ ಆಲ್ಟ್ರೋಜ್ ಸಿಎನ್‌ಜಿ ಕಾರನ್ನು ಬಿಡುಗಡೆ ಮಾಡಲಿದೆ.

ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಟಾಟಾ, ಆಲ್ಟ್ರೋಜ್ ರೇಸರ್ ಸ್ಪೋರ್ಟಿ ಹ್ಯಾಚ್‌ಬ್ಯಾಕ್ ಪ್ರದರ್ಶನ ಮಾಡಿತ್ತು. ಇತ್ತೀಚೆಗೆ ಕಂಪನಿಯು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಕಾರನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಒಂದಷ್ಟು ವಿನ್ಯಾಸದಲ್ಲಿ ಬದಲಾವಣೆ ಮಾಡಿರುವುದು ಬಿಟ್ಟರೆ, ಬಹುತೇಕ ಹಿಂದಿನ ಮಾದರಿಯಲ್ಲಿ ಹೋಲುತ್ತದೆ. ಸರಿ ಸುಮಾರು ರೂ.10 ಲಕ್ಷ ಬೆಲೆಯಲ್ಲಿ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ.

Tata cars: ಮುಂದಿನ 2 ತಿಂಗಳಲ್ಲೇ ಸಿಗಲಿವೆ ಅಗ್ಗದ ಬೆಲೆಯ ಟಾಟಾ ಕಾರುಗಳು.. ಅವೇ ನಂಬರ್ 1 ರೀ!

ಈ ಕಾರಿನ 1.2 ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್, 120 bhp ಗರಿಷ್ಠ ಪವರ್ ಹಾಗೂ 170 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 6 ಸ್ವೀಡ್ ಮ್ಯಾನುವಲ್ ಟ್ರಾನ್ಸ್ಮಿಷನ್ ಪಡೆದಿದೆ. ಮತ್ತೊಂದು ಮಾಹಿತಿ ಪ್ರಕಾರ, ಡ್ಯುಯಲ್ ಕ್ಲಚ್ DCA ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ದೊರೆಯಬಹುದು. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ.

ಆಲ್ಟ್ರೋಜ್ ಸಿಎನ್‌ಜಿ ಆವೃತ್ತಿಯನ್ನು ಸಹ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು. ಸಿಎನ್‌ಜಿ ಆಯ್ಕೆಯಲ್ಲಿ ದೇಶೀಯ ಮಾರುಕಟ್ಟೆಗೆ ಬರುತ್ತಿರವುದರಿಂದ ಈ ಕಾರು, ಹೆಚ್ಚಿನ ಮೈಲೇಜ್ ನೀಡಲಿದೆ. ಪೆಟ್ರೋಲ್ ಮಾದರಿಗೆ ಹೋಲಿಸಿದರೆ ಕೊಂಚ ಹೆಚ್ಚಿನ ಬೆಲೆ ಏರಿಕೆಯನ್ನು ಪಡೆದುಕೊಂಡಿರಲಿದ್ದು, ರೂ. 90 ಸಾವಿರದಿಂದ ರೂ.1 ಲಕ್ಷ ಹೆಚ್ಚಿರಬಹುದು. 7.0 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು 1.2 ಲೀಟರ್ 3-ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 86 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಕಿಟ್ ಪಡೆದಿರುವ ಕಾರು, 77 PS ಪವರ್, 93 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. ಕೇವಲ 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುವ ನಿರೀಕ್ಷೆಯಿದೆ.

ಭಾರತದ ಮಾರುಕಟ್ಟೆಯಲ್ಲಿ ಟಾಟಾ ಪಂಚ್ ಈಗಾಗಲೇ ಜನಪ್ರಿಯ ಕಾರೆಂದು ಖ್ಯಾತಿಗಳಿಸಿದೆ. ಮುಂಬರುವ ತಿಂಗಳಲ್ಲಿ ಪಂಚ್ ಸಿಎನ್‌ಜಿ ಆವೃತ್ತಿಯು ಲಾಂಚ್ ಆಗುವ ನೀರಿಕ್ಷೆ ಇದ್ದು, ರೂ.10.14 ಲಕ್ಷ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಬಹುದು. ಇದು ಕೂಡ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಪ್ರಮುಖವಾಗಿ 7.0 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಅನ್ನು ಹೊಂದಿದೆ.

ಪಂಚ್ ಸಿಎನ್‌ಜಿ ಎಂಜಿನ್ ಬಗ್ಗೆ ಹೇಳುವುದಾದರೆ, ಇದು 1.2 ಲೀಟರ್ 3-ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟೋಲ್ ಎಂಜಿನ್ ಹೊಂದಿದ್ದು, 86 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. ಸಿಎನ್‌ಜಿ ಕಿಟ್ ಪಡೆದಿರುವ ಕಾರು, 77 PS ಪವರ್ ಹಾಗೂ 93 Nm ಪೀಕ್ ಟಾರ್ಕ್ ಉತ್ಪಾದಿಸಲಿದೆ. ಆದರೆ, ಗೇರ್ ಬಾಕ್ಸ್ ಆಯ್ಕೆ ಕುರಿತಂತೆ ಸ್ಪಷ್ಟ ಮಾಹಿತಿಯಿಲ್ಲ. 5 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಹೊಂದಿರಬಹುದು.

ಇನ್ನು, ಟಾಟಾ ಮೋಟಾರ್ಸ್ ಮುಂಬರುವ ಎರಡು ತಿಂಗಳಲ್ಲಿಯೇ ಈ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಕೈಗೆಟುಕುವ ಬೆಲೆಯಲ್ಲಿ ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಬರುತ್ತಿರುವುದರಿಂದ ಹೆಚ್ಚಿನ ಗ್ರಾಹಕರು ಲೈಕ್ ಮಾಡಲಿದ್ದಾರೆ. ಅಲ್ಲದೆ, ಇವುಗಳು ಮಾರುತಿ ಸುಜುಕಿ ಕಂಪನಿ ಕಾರುಗಳಿಗೆ ತೀವ್ರ ಪ್ರತಿಸ್ಪರ್ಧಿಯಾಗಲಿವೆ ಎಂದು ಅಂದಾಜಿಸಲಾಗಿದ್ದು, ಲಾಂಚ್ ಆದ ಮೇಲೆ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Article Published On: Thursday, April 13, 2023, 8:30 [IST]
English summary
Tata cars launching next two months details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+