Tata Harrier: ಭಾರತದಲ್ಲಿ ಎಲ್ಲರೂ ಮೆಚ್ಚುವಂತಹ ಸಾಧನೆ ಮಾಡಿದ ಪವರ್ ಫುಲ್ ಟಾಟಾ ಹ್ಯಾರಿಯರ್

ಟಾಟಾ ಮೋಟಾರ್ಸ್, ಭಾರತದಲ್ಲಿ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಅದರ ಕಾರುಗಳ ಕಾರ್ಯಕ್ಷಮತೆ, ವೈಶಿಷ್ಟ್ಯ ಹಾಗೂ ವಿನ್ಯಾಸ ಪ್ರತಿಯೊಬ್ಬ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ, ಹ್ಯಾರಿಯರ್ ಎಸ್‌ಯುವಿ ಮಾರಾಟದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದು, ಆ ಬಗ್ಗೆ ಸಂಪೂರ್ಣ ವಿವರ ತಿಳಿಯೋಣ ಬನ್ನಿ.

ಟಾಟಾ (Tata) ಕಂಪನಿ, ಹ್ಯಾರಿಯರ್ ಎಸ್‌ಯುವಿಯನ್ನು 1 ಲಕ್ಷ ಯುನಿಟ್ ಮಾರಾಟ ಮಾಡಿ, ಮೈಲಿಗಲ್ಲನ್ನು ನಿರ್ಮಾಣ ಮಾಡಿದೆ. 2019ರಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಈ ಮಿಡ್ ಸೈಜ್ ಎಸ್‌ಯುವಿಯು ನಾಲ್ಕೂವರೆ ವರ್ಷಗಳಲ್ಲಿಯೇ ದೊಡ್ಡಮಟ್ಟದ ಸಾಧನೆ ಮಾಡಿರುವುದು ವಿಶೇಷವಾಗಿದೆ. ಐದು ಆಸನ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಸಫಾರಿ ಎಸ್‌ಯುವಿಯಷ್ಟೇ ಜನಪ್ರಿಯತೆ ಗಳಿಸಿದೆ.

Tata Harrier: ಭಾರತದಲ್ಲಿ ಎಲ್ಲರೂ ಮೆಚ್ಚುವಂತಹ ಸಾಧನೆ ಮಾಡಿದ ಪವರ್ ಫುಲ್ ಟಾಟಾ ಹ್ಯಾರಿಯರ್

ಟಾಟಾ ಹ್ಯಾರಿಯರ್ ಬೆಲೆ ಬಗ್ಗೆ ಮಾತನಾಡುವುದಾದರೆ, ಇದು ರೂ.15 ಲಕ್ಷದಿಂದ 24.07 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಲ್ಯಾಂಡ್ ರೋವರ್ D8 ಹೊಂದಿರುವಂತೆ OMEGA ಆರ್ಕ್ ಪ್ಲಾಟ್‌ಫಾರ್ಮ್ ಆಧರಿಸಿದೆ. ಈ ಎಸ್‌ಯುವಿ ಪಡೆದಿರುವ ಡೀಸೆಲ್ ಎಂಜಿನ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್ ಹಾಗೂ ಸಫಾರಿಗೆ ಹೋಲಿಕೆಯಾಗುತ್ತದೆ.

ಹ್ಯಾರಿಯರ್ ಎಸ್‌ಯುವಿಯ ಎಂಜಿನ್ ಕಾರ್ಯಕ್ಷಮತೆ ಕುರಿತು ಹೇಳುವುದಾದರೆ, ಇದು, 2.0 ಲೀಟರ್ 4 ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ ಹೊಂದಿದ್ದು, 170 PS ಗರಿಷ್ಠ ಪವರ್ ಹಾಗೂ 350 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 6 ಸ್ವೀಡ್ ಮ್ಯಾನುವಲ್ ಅಥವಾ 6 ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ಈ ಕಾರಿನ ಹೊರಭಾಗ ಹಾಗೂ ಒಳಭಾಗದ ವಿನ್ಯಾಸಕ್ಕೆ ಮನಸೋಲದವರೇ ಇಲ್ಲ. ಅಷ್ಟರ ಮಟ್ಟಿಗೆ ಅದ್ಭುತವಾಗಿದೆ. ಜೊತೆಗೆ ಗ್ರಾಹಕರನ್ನು ತನ್ನತ್ತ ಸೆಳೆಯುವ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ರೈನ್ ಸೆನ್ಸಿಂಗ್ ವೈಪರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಹ್ಯಾರಿಯರ್ ಯಾವೆಲ್ಲ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ ಎಂಬುದನ್ನು ನೋಡುವುದಾದರೆ, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್‌) ಹೊಂದಿದೆ. ಈ ವೈಶಿಷ್ಟ್ಯವು ಫಾರ್ವರ್ಡ್ ಡಿಕ್ಕಿ ಅಲರ್ಟ್, ಆಟೋ ಎಮರ್ಜೆನ್ಸಿ ಬ್ರೇಕಿಂಗ್ ಮತ್ತು ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಬಗ್ಗೆ ಮಾಹಿತಿ ಒದಗಿಸುತ್ತದೆ.

ಟಾಟಾ, ಹ್ಯಾರಿಯರ್‌ ಎಸ್‌ಯುವಿಯನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಯೋಜಿಸುತ್ತಿದ್ದು, ಕಳೆದ ಜನವರಿಯಲ್ಲಿ ನಡೆದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅದನ್ನು ಪ್ರದರ್ಶಿಸಿತ್ತು. ಈ ಕಾರು, 2025ರಲ್ಲಿ ಲಾಂಚ್ ಆಗಲಿದೆ. ಜೊತೆಗೆ ಸಂಪೂರ್ಣ ಚಾರ್ಜಿನಲ್ಲಿ 400 ಕಿಲೋಮೀಟರ್ ಗೂ ಹೆಚ್ಚಿನ ರೇಂಜ್ ನೀಡುವ ನೀರಿಕ್ಷೆ ಇದ್ದು, ರೂ.30 ಲಕ್ಷ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಅಂದಾಜಿಸಲಾಗಿದೆ.

ಇನ್ನು, ಟಾಟಾ ಹ್ಯಾರಿಯರ್ ಎಸ್‌ಯುವಿಯನ್ನು 1 ಲಕ್ಷ ಯುನಿಟ್ ಮಾರಾಟ ಮಾಡಿ, ಮೈಲಿಗಲ್ಲನ್ನು ನಿರ್ಮಾಣ ಮಾಡಿದೆ. ಈ ಮಾಲಕ ದೇಶೀಯ ಮಾರುಕಟ್ಟೆಯಲ್ಲಿ ತನ್ನ ಕಾರುಗಳು ಸಹ ದೊಡ್ಡ ಮಟ್ಟದಲ್ಲಿ ಬೇಡಿಕೆ ಹೊಂದಿವೆ ಎಂಬುದನ್ನು ತೋರಿಸಿಕೊಟ್ಟಿದ್ದು, ಸುರಕ್ಷತೆ ದೃಷ್ಟಿಯಿಂದ ಅತ್ಯುತ್ತಮವಾಗಿರುವ ಈ ಕಾರಿಗೆ ಮುಂದಿನ ದಿನಗಳಲ್ಲಿಯೂ ಭಾರೀ ಬೇಡಿಕೆ ಬರಲಿದೆ ಎಂಬುದು ಕಂಪನಿ ನಂಬಿಕೆಯಾಗಿದೆ.

Article Published On: Thursday, May 18, 2023, 17:51 [IST]
English summary
Tata harrier achieves 1 lakh sales milestone details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+