Tata Harrier: ನೂತನ ಟಾಟಾ ಹ್ಯಾರಿಯರ್ ವಿತರಣೆ ಶುರು, ಖುಷಿ ವ್ಯಕ್ತಪಡಿಸಿದ ಗ್ರಾಹಕ!
ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್ (Tata Harrier) ಶಕ್ತಿಯುತ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಇದು, ಸುರಕ್ಷತೆಯ ದೃಷ್ಟಿಯಿಂದ ಅತ್ಯುತ್ತಮವಾಗಿರುವುದರಿಂದ ಬಹುತೇಕರು ತಮ್ಮ ಆಯ್ಕೆಯ ಕಾರಾಗಿ ಪರಿಗಣಿಸುತ್ತಾರೆ. ಕಳೆದ ಅಕ್ಟೋಬರ್ ತಿಂಗಳು (2023) ಟಾಟಾ ಕಂಪನಿ ನವೀಕರಿಸಿದ ಹ್ಯಾರಿಯರ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು.
ನೂತನ ಹ್ಯಾರಿಯರ್ ಎಸ್‌ಯುವಿ, ರೂಪಾಂತರಗಳಿಗೆ ಅನುಗುಣವಾಗಿ ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಆಸಕ್ತ ಗ್ರಾಹಕರು, ರೂ.25,000 ಮುಂಗಡ ಪಾವತಿಸುವ ಮೂಲಕ ಟಾಟಾ ಶೋರೂಂ ಅಥವಾ ಆನ್‌ಲೈನ್ ಪೋರ್ಟಲ್ ನಲ್ಲಿ ಬುಕ್ಕಿಂಗ್ ಮಾಡಬಹುದು. ಈಗ, ನವೀಕರಿಸಿದ ಹ್ಯಾರಿಯರ್ ವಿತರಣೆ ದೇಶಾದ್ಯಂತ ವಿವಿಧ ಡೀಲರ್‌ಶಿಪ್ ಗಳಲ್ಲಿ ಆರಂಭವಾಗಿದ್ದು, ಗ್ರಾಹಕರು ಖುಷಿಯಿಂದಲೇ ಡಿಲೆವರಿ ಪಡೆದಿದ್ದಾರೆ ಎಂದು ವರದಿಯಾಗಿದೆ.

ಮೊದಲಿಗೆ ನವೀಕರಣಗೊಂಡಿರುವ (ಫೇಸ್‌ಲಿಫ್ಟ್) ಟಾಟಾ ಹ್ಯಾರಿಯರ್ ಎಸ್‌ಯುವಿ ಪವರ್‌ಟ್ರೇನ್ ಬಗ್ಗೆ ತಿಳಿಯೋಣ. ಈ ಕಾರು, 2.0 - ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿದ್ದು, 170 hp ಪವರ್ ಹಾಗೂ 350 Nm ಪೀಕ್ ಟಾರ್ಕ್ ಹೊರ ಹಾಕುತ್ತದೆ. ರೂಪಾಂತರಗಳ ಅನ್ವಯ 6 - ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ.
ಹಳೆಯ ಮಾದರಿಗೆ ಹೋಲಿಸಿದರೆ, ವಿನ್ಯಾಸದಲ್ಲಿ ಹೊಸ ಟಾಟಾ ಹ್ಯಾರಿಯರ್ ಎಸ್‌ಯುವಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಮುಖ್ಯವಾಗಿ ನವೀನವಾದ ಗ್ರಿಲ್ ಹಾಗೂ ಸ್ಪ್ಲಿಟ್ ಹೆಡ್‌ಲೈಟ್ ಒಳಗೊಂಡಿದೆ. ಗ್ರಿಲ್ ಮೇಲ್ಭಾಗ ಫುಲ್-ವಿಡ್ತ್ ಎಲ್ಇಡಿ ಲೈಟ್ ಬಾರ್ ಇದ್ದು, ನೋಡುಗರನ್ನು ಸೆಳೆಯುತ್ತದೆ. ಜೊತೆಗೆ 18 ಹಾಗೂ 19 ಇಂಚಿನ ಅಲಾಯ್ ವೀಲ್ಸ್ ಪಡೆದಿದ್ದು, ಕಾರಿನ ಹಿಂಭಾಗ ಹೆಚ್ಚು ಆಕರ್ಷಣೀಯವಾಗಿದೆ.

ನೂತನ ಟಾಟಾ ಹ್ಯಾರಿಯರ್ ಪಡೆದುಕೊಂಡಿರುವ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಈ ಕಾರು, ವೇರಿಯೆಂಟ್ಸ್ ಅನ್ವಯ 10.25 - ಇಂಚು ಅಥವಾ 12.3 - ಇಂಚಿನ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಸಿಸ್ಟಮ್, ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 10.25 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೊಸದಾದ 4 - ಸ್ಪೋಕ್ ಸ್ಟೀರಿಂಗ್ ವೀಲ್, ಡ್ಯುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, 360 - ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಅನ್ನು ಒಳಗೊಂಡಿದೆ.
ಈ ಕಾರು, ಇಕೋ (Eco), ಸಿಟಿ (City) ಹಾಗೂ ಸ್ಪೋರ್ಟ್ (Sports) ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಪಡೆದಿದೆ. ಜೊತೆಗೆ ಲೂನಾರ್ ವೈಟ್, ಪೆಬಲ್ ಗ್ರೇ, ಸನ್ಲೈಟ್ ಯೆಲ್ಲೋ ಮತ್ತು ಕೊರಲ್ ರೆಡ್ ಸೇರಿದಂತೆ 6 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಹೊಸ ಟಾಟಾ ಹ್ಯಾರಿಯರ್ ಎಸ್‌ಯುವಿಗೆ ಹುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಸುರಕ್ಷತೆಯ ದೃಷ್ಟಿಯಿಂದಲ್ಲೂ ಟಾಟಾ ಹ್ಯಾರಿಯರ್ ಅತ್ಯುತ್ತಮವಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 33.05 ಅಂಕ ಗಳಿಸುವ ಮೂಲಕ 5 - ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. 7 ಏರ್‌ಬ್ಯಾಗ್, ADAS (ಸುಧಾರಿತ ಚಾಲಕ ಸಹಾಯಕ ವ್ಯವಸ್ಥೆ) ಹಿಲ್ - ಹೋಲ್ಡ್ ಕಂಟ್ರೋಲ್, 3 - ಪಾಯಿಂಟ್ ಸೀಟ್ ಬೆಲ್ಟ್ ರಿಮೆಂಡರ್ ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇನ್ನು, ದೀಪಾವಳಿಗೂ ಮುನ್ನವೇ ಹೊಸ ಟಾಟಾ ಹ್ಯಾರಿಯರ್ ಎಸ್‌ಯುವಿ ವಿತರಣೆ ಶುರುವಾಗಿರುವುದು ಗ್ರಾಹಕರಿಗೆ ಖುಷಿತಂದಿದೆ. ಈ ಕಾರು, ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಅದರ ವಿನ್ಯಾಸವು ನೋಡುಗರನ್ನು ಸೆಳೆಯಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹೆಚ್ಚಾಗಬಹುದು. ಎಸ್‌ಯುವಿ ಮಾರಾಟದಲ್ಲಿ ಟಾಟಾಗೆ ಉತ್ತಮ ಲಾಭವನ್ನು ತಂದುಕೊಡಬಹುದು. ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.'


Click it and Unblock the Notifications