Tata - Maruti suzuki - Renault: ಅಗ್ಗದ ದರ, ಬೈಕ್‌ನಂತೆ ಮೈಲೇಜ್‌.. ಮಾರುತಿ ಸುಜುಕಿ, ಟಾಟಾ ಕಾರುಗಳು

ಭಾರತದಂತಹ ದೇಶದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಬಹುತೇಕರು ಕಡಿಮೆ ಬೆಲೆಯಲ್ಲಿ ಹೆಚ್ಚಿನ ಕಾರ್ಯಕ್ಷಮತೆ ಹೊಂದಿರುವ ಕಾರುಗಳನ್ನು ಹುಡುಕುತ್ತಿರುತ್ತಾರೆ. ಅಂತಹವರಿಗಾಗಿ ಟಾಟಾ (Tata), ಮಾರುತಿ ಸುಜುಕಿ (Maruti suzuki) ಹಾಗೂ ರೆನಾಲ್ಟ್ (Renault) ಕಂಪನಿ ಕಾರುಗಳನ್ನು ಪಟ್ಟಿ ಮಾಡಲಾಗಿದೆ.

ಮೊದಲಿಗೆ ಮಾರುತಿ ಸುಜುಕಿ ವಾಗನ್ಆರ್ (Maruti Suzuki WagonR) ಬಗ್ಗೆ ಮಾತನಾಡೋಣ. ಇದು ರೂ.5.45 ಲಕ್ಷದಿಂದ ರೂ.7.30 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಇಂಧನ ದಕ್ಷತೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರ 25.19 kmpl, ಸಿಎನ್‌ಜಿ ವೇರಿಯೆಂಟ್ 34.05 km/kg ಮೈಲೇಜ್ ನೀಡುತ್ತದೆ.

Tata - Maruti suzuki - Renault: ಅಗ್ಗದ ದರ, ಬೈಕ್‌ನಂತೆ ಮೈಲೇಜ್‌.. ಮಾರುತಿ ಸುಜುಕಿ, ಟಾಟಾ ಕಾರುಗಳು

1 ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿರುವ ವಾಗನ್ಆರ್ ಕಾರು, 67 PS ಗರಿಷ್ಠ ಪವರ್, 89Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2 ಲೀಟರ್ ಎಂಜಿನ್ ಹೊಂದಿರುವ ಕಾರು, 90 PS ಪವರ್ ಮತ್ತು 113 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ವೀಡ್ ಮ್ಯಾನುವಲ್/ಆಟೋಮೆಟಿಕ್ (AMT) ಗೇರ್ ಬಾಕ್ಸ್ ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti suzuki Swift), ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಈ ಕಾರು, 1.2 - ಲೀಟರ್ ಪೆಟ್ರೋಲ್ ಎಂಜಿನ್, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ದೊರೆಯುತ್ತದೆ. ಪೆಟ್ರೋಲ್ ರೂಪಾಂತರ 22.38 kmpl, ಸಿಎನ್‌ಜಿ ವೇರಿಯೆಂಟ್ 30.90 km/kg ಇಂಧನ ದಕ್ಷತೆಯನ್ನು ಪಡೆದಿದೆ.

Tata - Maruti suzuki - Renault: ಅಗ್ಗದ ದರ, ಬೈಕ್‌ನಂತೆ ಮೈಲೇಜ್‌.. ಮಾರುತಿ ಸುಜುಕಿ, ಟಾಟಾ ಕಾರುಗಳು

ಮಾರುತಿ ಸುಜುಕಿ ಆಲ್ಟೊ ಕೆ10 (Maruti suzuki Alto K10), ದೇಶೀಯ ಮಾರುಕಟ್ಟೆಯಲ್ಲಿ ರೂ.4 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ LXi, VXi, ಸೇರಿದಂತೆ ನಾಲ್ಕು ರೂಪಾಂತರದ ಆಯ್ಕೆಯಲ್ಲಿ ಸಿಗುತ್ತದೆ. ಇದು 1 ಲೀಟರ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್, 5 ಸ್ವೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 24.39-24.9 kmpl ಮೈಲೇಜ್ ನೀಡುತ್ತದೆ.

ಟಾಟಾ ಟಿಯಾಗೊ (Tata Tiago) ರೂ.5.60 ಲಕ್ಷದಿಂದ ರೂ.8.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಇದು, 1.2 - ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, 5-ಸ್ವೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 20.01 kmpl, 26.49 kmpl ಮೈಲೇಜ್ ನೀಡುತ್ತದೆ.

ಟಾಟಾ ಟಿಯಾಗೊ, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8 - ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಹಾಗೂ ಕೂಲ್ಡ್ ಗ್ಲೋವ್‌ಬಾಕ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ಸ್, ರೇರ್ ಪಾರ್ಕಿಂಗ್ ಸೆನ್ಸರ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ರೆನಾಲ್ಟ್ ಕ್ವಿಡ್ (Renault KWID) ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಹೊಂದಿದ್ದು, 5-ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 21.46 - 22.3 kmpl ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, September 16, 2023, 15:33 [IST]
English summary
Tata maruti suzuki renault most fuel efficient petrol cars in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+