Tata - MG: ಅತ್ಯಾಧುನಿಕ ವೈಶಿಷ್ಟ್ಯದೊಂದಿಗೆ ಕಡಿಮೆ ಬೆಲೆಗೆ ಸಿಗಲಿವೆ ಟಾಟಾ, ಎಂಜಿಯ ಈ ಎಲೆಕ್ಟ್ರಿಕ್ ಕಾರುಗಳು

ದೇಶದಲ್ಲಿ ಕಳೆದ 2 ವರ್ಷದಿಂದ ಎಲೆಕ್ಟ್ರಿಕ್ ಕಾರುಗಳು ಭಾರೀ ಜನಪ್ರಿಯತೆ ಗಳಿಸುತ್ತಿವೆ. ಹೆಚ್ಚಿನ ಬೆಲೆ ಹೊಂದಿರುವುದರಿಂದ ಹಲವಾರು ಇವುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ, ಆಕರ್ಷಕ ವೈಶಿಷ್ಟ್ಯದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಟಾಟಾ (Tata), ಎಂಜಿ (MG) ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟಗೊಳಿಸುತ್ತಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮೊದಲಿಗೆ ಜನಪ್ರಿಯ ಟಾಟಾ ಟಿಯಾಗೊ ಇವಿ (Tata Tiago EV) ಬಗ್ಗೆ ಮಾತನಾಡೋಣ. ಈ ಕಾರು, ರೂ.8.69 ಲಕ್ಷದಿಂದ ರೂ.12.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್ಇ, ಎಕ್ಸ್‌ಟಿ ಸೇರಿದಂತೆ 4 ರೂಪಾಂತರ ಹಾಗೂ ಸಿಗ್ನೇಚರ್ ಟೀಲ್ ಬ್ಲೂ, ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್ ಒಳಗೊಂಡಂತೆ 5 ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ.

Tata - MG: ಅತ್ಯಾಧುನಿಕ ವೈಶಿಷ್ಟ್ಯದೊಂದಿಗೆ ಕಡಿಮೆ ಬೆಲೆಗೆ ಸಿಗಲಿವೆ ಟಾಟಾ, ಎಂಜಿಯ ಈ ಎಲೆಕ್ಟ್ರಿಕ್ ಕಾರುಗಳು

ಟಾಟಾ ಟಿಯಾಗೊ ಇವಿ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಅವುಗಳೆಂದರೆ, 19.2 kWh ಹಾಗೂ 24 kWh ಬ್ಯಾಟರಿ ಪ್ಯಾಕ್. ಚಿಕ್ಕ ಬ್ಯಾಟರಿ ಹೊಂದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್ 61 PS ಗರಿಷ್ಠ ಪವರ್, 110 Nm ಪೀಕ್ ಟಾರ್ಕ್, ದೊಡ್ಡ ಬ್ಯಾಟರಿ ಪಡೆದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್ 75 PS ಗರಿಷ್ಠ ಪವರ್, 114 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಈ ಎಲೆಕ್ಟ್ರಿಕ್ ಕಾರು, ಬ್ಯಾಟರಿ ಪ್ಯಾಕ್ ಅನುಗುಣವಾಗಿ ಸಂಪೂರ್ಣ ಚಾರ್ಜ್ ನಲ್ಲಿ 250 km ರಿಂದ 315 km ರೇಂಜ್ ನೀಡುತ್ತದೆ. ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಟಿಯಾಗೊ ಇವಿ ಬ್ಯಾಟರಿ ಶೇಕಡ 10 - 80% ಚಾರ್ಜ್ ಆಗಲು 57 ನಿಮಿಷ ತೆಗೆದುಕೊಳ್ಳುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ ಈ ಕಾರು, 240 ಲೀಟರ್ ಸಾಮರ್ಥ್ಯ ಬೂಟ್ ಸ್ಪೇಸ್ ಒಳಗೊಂಡಿದೆ.

Tata - MG: ಅತ್ಯಾಧುನಿಕ ವೈಶಿಷ್ಟ್ಯದೊಂದಿಗೆ ಕಡಿಮೆ ಬೆಲೆಗೆ ಸಿಗಲಿವೆ ಟಾಟಾ, ಎಂಜಿಯ ಈ ಎಲೆಕ್ಟ್ರಿಕ್ ಕಾರುಗಳು

ಟಾಟಾ ಟಿಯಾಗೊ ಇವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಮುಖ್ಯವಾಗಿ, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 4 - ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್ ಹೊಂದಿದೆ. ಸುರಕ್ಷತೆಯ ಸಲುವಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಎಂಜಿ ಕಾಮೆಟ್ ಇವಿ (MG Comet EV) ರೂ.7.98 ಲಕ್ಷದಿಂದ ರೂ.9.98 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ದೊರೆಯುತ್ತದೆ. 4 ಆಸನಗಳನ್ನು ಹೊಂದಿರುವ ಈ ಕಾರು, ಪೀಸ್, ಪ್ಲೇ, ಪ್ಲಶ್ ರೂಪಾಂತರ ಹಾಗೂ ಆಪಲ್ ಗ್ರೀನ್ ವಿತ್ ಸ್ಟಾರ್ರಿ ಬ್ಲ್ಯಾಕ್, ಕ್ಯಾಂಡಿ ವೈಟ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

Tata - MG: ಅತ್ಯಾಧುನಿಕ ವೈಶಿಷ್ಟ್ಯದೊಂದಿಗೆ ಕಡಿಮೆ ಬೆಲೆಗೆ ಸಿಗಲಿವೆ ಟಾಟಾ, ಎಂಜಿಯ ಈ ಎಲೆಕ್ಟ್ರಿಕ್ ಕಾರುಗಳು

2 ಡೋರ್ ಆಯ್ಕೆಯನ್ನು ಹೊಂದಿರುವ ಈ ಕಾರು, 17.3 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 230 km ರೇಂಜ್ ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 42 PS ಗರಿಷ್ಠ ಪವರ್ ಹಾಗೂ 110 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.

ಎಂಜಿ ಕಾಮೆಟ್ ಇವಿ, ಇನ್ಫೋಟೈನ್‌ಮೆಂಟ್ ಮತ್ತು ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಗಾಗಿ 10.25 - ಇಂಚಿನ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ ಪ್ಲೇ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌, ISOFIX ಚೈಲ್ಡ್ ಸೀಟ್ ಆಂಕರ್ಸ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, December 3, 2023, 17:00 [IST]
English summary
Tata mg electric cars low price best features details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+