ಟಾಟಾ ಕಾರುಗಳ ಅಬ್ಬರ: ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ, ಹ್ಯುಂಡೈ ಕಾರುಗಳೊಂದಿಗೆ ಸ್ಪರ್ಧಿಸುವ ಪ್ರಮುಖ ವಾಹನ ತಯಾರಕರಲ್ಲಿ ಟಾಟಾ ಮೋಟಾರ್ಸ್ ಒಂದಾಗಿದೆ. ಸ್ವದೇಶಿ ಟಾಟಾ ಮೋಟಾರ್ಸ್ ಇತ್ತೀಚೆಗೆ 2023ರ ಫೆಬ್ರವರಿ ತಿಂಗಳ ವಾಹನ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಇತ್ತೀಚಿನ ದಿನಗಳಲ್ಲಿ, ಟಾಟಾ ಮೋಟಾರ್ಸ್ ದೇಶದಲ್ಲಿ ಎರಡನೇ ಶ್ರೇಯಾಂಕಕ್ಕಾಗಿ ಅಗ್ರೇಸಿವ್ ಆಗಿ ಸ್ಪರ್ಧಿಸುತ್ತಿದೆ.

ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ 2023ರ ಫೆಬ್ರವರಿ ತಿಂಗಳಿನಲ್ಲಿ ಪ್ರಯಾಣಿಕ ವಾಹನಗಳು ಮತ್ತು ವಾಣಿಜ್ಯ ವಾಹನಗಳು ಸೇರಿ ಒಟ್ಟು 79,006 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಟಾಟಾ ಕಂಪನಿಯು 77,733 ಯುನಿಟ್‌ಗಳನ್ನು ಮಾರಾಟಗೊಳಿಸಿತು. ಇದನ್ನು ಕಳೆದ ತಿಂಗಳು ಫೆಬ್ರವರಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.2.5 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 2022ರ ಫೆಬ್ರವರಿ ತಿಂಗಳಿನಲ್ಲಿ 73,875 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 78,006 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ದೇಶಿಯ ಮಾರುಕಟ್ಟೆಯ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವರ್ಷದಿಂದ ವರ್ಷಕ್ಕೆ ಶೇ.6 ರಷ್ಟು ಮಾರಾಟದ ಬೆಳವಣಿಗೆಯನ್ನು ಸಾಧಿಸಿದೆ.

2023ರ ಫೆಬ್ರವರಿ ತಿಂಗಳಿನಲ್ಲಿ ಆಟೋ ತಯಾರಕರು 43,140 ವಾಹನಗಳನ್ನು ಮಾರಾಟ ಮಾಡಿದ್ದಾರೆ, ಕಳೆದ ವರ್ಷ ಇದೇ ಅವಧಿಯಲ್ಲಿ 40,181 ವಾಹನಗಳನ್ನು ಮಾರಾಟ ಮಾಡಿದ್ದರು. ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ.7 ರಷ್ಟು ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಭಾರತೀಯ ಮಾರುಕಟ್ಟೆಯ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಟಾಟಾ ಮೋಟಾರ್ಸ್ ಪಾರುಪತ್ಯ ಸಾಧಿಸುತ್ತಿದೆ.

2023ರ ಫೆಬ್ರವರಿ ತಿಂಗಳಿನಲ್ಲಿ 5318 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. 2022ರ ಫೆಬ್ರವರಿ ತಿಂಗಳಿನಲ್ಲಿ 2934 ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದಾರೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.81 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.ಇತ್ತೀಚೆಗೆ ಹೆಚ್ಚಿನ ಜನರು ಇಂಧನ ಚಾಲಿತ ವಾಹನಗಳಿಗಿಂತ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇನ್ನು ಅಂತರರಾಷ್ಟ್ರೀಯ ವ್ಯಾಪಾರ ಮಾರಾಟ ಸಂಖ್ಯೆಗಳಲ್ಲಿಯೂ ಕೂಡ ಬೆಳವಣಿಗೆಯನ್ನು ಸಾಧಿಸಿದೆ.

ಇನ್ನು 2023ರ ಫೆಬ್ರವರಿ ತಿಂಗಳ ವಾಣಿಜ್ಯ ವಾಹನಗಳ ಮಾರಾಟವು ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಶೇಕಡಾ 3 ರಷ್ಟು ಕಡಿಮೆಯಾಗಿದೆ. ಆದರೆ ಪ್ರಯಾಣಿಕ ವಾಹಕಗಳ ಮಾರಾಟವುದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಭಾರತದ ಮಾರುಕಟ್ಟೆಯಲ್ಲಿ ಟಾಟಾದ ಹ್ಯಾರಿಯರ್, ಸಫಾರಿ ಮತ್ತು ನೆಕ್ಸಾನ್ ಎಸ್‌ಯುವಿಗಳ ರೆಡ್ ಡಾರ್ಕ್ ಆವೃತ್ತಿ ಬಿಡುಗಡೆಯಾಗಿದೆ. ಈ ಮೂರು ಎಸ್‌ಯುವಿಗಳು ಹಲವು ಕಾಸ್ಮೆಟಿಕ್ ನವೀಕರಣಗಳನ್ನು ಪಡೆದುಕೊಂಡಿವೆ.

ಪ್ರಮುಖವಾಗಿ 10.25-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಹ್ಯಾರಿಯರ್, ಸಫಾರಿ ಕಾರುಗಳು ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿವೆ ಅತ್ಯಾಧುನಿಕ ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಬಂದಿರುವ ಈ ಎಸ್‌ಯುವಿಗಳ ಬೆಲೆ ವಿವರವನ್ನು ನೋಡುವುದಾದರೆ, ಟಾಟಾ ನೆಕ್ಸಾನ್ ರೆಡ್ ಡಾರ್ಕ್ ಎಡಿಷನ್ ಬೆಲೆ ರೂ.12.35 ಲಕ್ಷದಿಂದ ರೂ.14.35 ಲಕ್ಷ ಇದೆ. ಟಾಟಾ ಹ್ಯಾರಿಯರ್ ರೆಡ್ ಡಾರ್ಕ್ ಆವೃತ್ತಿ ದರ ರೂ.21.77 ಲಕ್ಷದಿಂದ ರೂ.24.07 ಲಕ್ಷ ಇದೆ.

ಟಾಟಾ ಸಫಾರಿ ರೆಡ್ ಡಾರ್ಕ್ ಆವೃತ್ತಿ 7 ಹಾಗೂ 6 ಆಸನ ಆಯ್ಕೆಯಲ್ಲಿ ಖರೀದಿಗೆ ದೊರೆಯಲಿದ್ದು, 7 ಆಸನ ವ್ಯವಸ್ಥೆ ಹೊಂದಿರುವ ಸಫಾರಿ ಬೆಲೆ ರೂ.22.61 ಲಕ್ಷದಿಂದ ರೂ.24.91 ಲಕ್ಷವಿದೆ. ನೂತನ ಹ್ಯಾರಿಯರ್, ಸಫಾರಿ ಹಾಗೂ ನೆಕ್ಸಾನ್ ರೆಡ್ ಡಾರ್ಕ್ ಆವೃತ್ತಿಗಳ ಹೊರ ಭಾಗದ ವಿನ್ಯಾಸ ಬಹುತೇಕ ಹಿಂದಿನ ಮಾದರಿಗಳನ್ನು ಹೋಲಿಕೆಯಾಗುತ್ತದೆ.

Article Published On: Thursday, March 2, 2023, 11:29 [IST]
English summary
Tata motors car sales february 2023 details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+