Tata Cars: ಭಾರತದಲ್ಲಿ ಬಿಡುಗಡೆಯಾಗಲಿವೆ ಟಾಟಾದ ನೂತನ ಕಾರುಗಳು.. ನಂಬರ್ 1 ಪಕ್ಕಾ

ಭಾರತದಲ್ಲಿ ಟಾಟಾ (Tata) ಕಂಪನಿ ತಯಾರಿಸುವ ಕಾರುಗಳಿಗೆ ದೊಡ್ಡ ಅಭಿಮಾನಿ ಬಳಗವಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪನಿ ವಿವಿಧ ಮಾದರಿಗಳನ್ನು ಈ ವರ್ಷವೇ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದ್ದು, ಖರೀದಿದಾರರಲ್ಲಿ ನೀರಿಕ್ಷೆ ಹೆಚ್ಚಾಗಿದೆ. ಬನ್ನಿ.. ಮುಂಬರುವ ದಿನಗಳಲ್ಲಿ ಟಾಟಾ ಲಾಂಚ್ ಮಾಡಲಿರುವ ಕಾರುಗಳು ಯಾವುದೆಂದು ತಿಳಿಯೋಣ.

ಮೊದಲಿಗೆ ಬಹುತೇಕ ಆಗಸ್ಟ್ ತಿಂಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ನವೀಕರಿಸಿರುವ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿ ಬಗ್ಗೆ ಮಾತನಾಡೋಣ. ಇದರ ವಿನ್ಯಾಸ ಹಾಗೂ ಪವರ್ ಫುಲ್ ಟರ್ಬೊ ಪೆಟ್ರೋಲ್ ಎಂಜಿನ್, ಕಳೆದ ಜನವರಿಯಲ್ಲಿ ದೆಹಲಿಯ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ Curvv ಕಾನ್ಸೆಪ್ಟ್ ಎಸ್‌ಯುವಿಯನ್ನೇ ಹೋಲುತ್ತದೆ. ಅದರಂತೆಯೇ ಹೆಡ್ ಲ್ಯಾಂಪ್ ನೊಂದಿಗೆ ಕನೆಕ್ಟ್ ಆಗಿರುವ LED ಲೈಟ್ ಬಾರ್, ಟೈಲಿ ಲೈಟ್ ಹಾಗೂ ರೇರ್ ಬಂಪರ್ ಅನ್ನು ಹೊಂದಿದೆ.

Tata Cars: ಭಾರತದಲ್ಲಿ ಬಿಡುಗಡೆಯಾಗಲಿವೆ ಟಾಟಾದ ನೂತನ ಕಾರುಗಳು.. ನಂಬರ್ 1 ಪಕ್ಕಾ

ನವೀಕರಿಸಿರುವ ನೆಕ್ಸಾನ್ ಎಸ್‌ಯುವಿ, ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಮುಖವಾಗಿ ಹೊಸದಾದ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕನೆಕ್ಟ್ದ್ ಕಾರ್ ಟೆಕ್, ಡ್ರೈವ್ ಮೋಡ್ ಸೆಲೆಕ್ಟರ್, 360 ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್ ಪಡೆದಿದೆ. ಜೊತೆಗೆ ಇದರ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 125 PS ಪವರ್, 225 Nm ಪೀಕ್ ಟಾರ್ಕ್ ಉತ್ಪಾದಿಸಲಿದೆ.

ಟಾಟಾ ಮೋಟಾರ್ಸ್ ಮುಂಬರುವ ತಿಂಗಳಲ್ಲಿ ನವೀಕರಿಸಿದ ಹ್ಯಾರಿಯರ್ ಹಾಗೂ ಸಫಾರಿ ಎಸ್‌ಯುವಿಗಳನ್ನು ಬಿಡುಗಡೆ ಮಾಡಲಿದೆ. ಇವೆರೆಡರ ವಿನ್ಯಾಸ ದೆಹಲಿಯ ಆಟೋ ಎಕ್ಸ್‌ಪೋದಲ್ಲಿ ಅನಾವರಣ ಮಾಡದ ಹ್ಯಾರಿಯರ್ ಇವಿಗೆ ಹೋಲಿಕೆಯಾಗುತ್ತದೆ. ಹ್ಯಾರಿಯರ್ ಮತ್ತು ಸಫಾರಿ ಎಸ್‌ಯುವಿಗಳು LED ಲೈಟ್ ಬಾರ್ ನೊಂದಿಗೆ ಕನೆಕ್ಟ್ ಆಗಿರುವ ಸ್ಪ್ಲಿಟ್ ಹೆಡ್ ಲ್ಯಾಂಪ್, ನೂತನ ಅಲಾಯ್ ವೀಲ್ಸ್ ಅನ್ನು ಹೊಂದಿವೆ.

ಇವೆರೆಡು ಎಸ್‌ಯುವಿಗಳು ಎರಡು ಎಂಜಿನ್ ಆಯ್ಕೆಯನ್ನು ಹೊಂದಿರಲಿದ್ದು, 1.5 ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್, 170 bhp ಪವರ್ ಮತ್ತು 280 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 2.0 ಲೀಟರ್ ಟರ್ಬೊ ಡೀಸೆಲ್ ಎಂಜಿನ್, 170 bhp ಗರಿಷ್ಠ ಪವರ್ ಹಾಗೂ 350 Nm ಪೀಕ್ ಟಾರ್ಕ್‌ ಉತ್ಪಾದಿಸುತ್ತದೆ. ಜೊತೆಗೆ ಆಕರ್ಷಕ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ವೈಶಿಷ್ಟ್ಯವನ್ನು ಪಡೆದಿರಲಿದ್ದು, ADAS ತಂತ್ರಜ್ಞಾನವನ್ನು ಹೊಂದಿರಲಿದೆ.

ಕಡೆಯದಾಗಿ ಟಾಟಾ ಮೋಟಾರ್ಸ್ ತುಂಬಾ ನಿರೀಕ್ಷೆಯಿಟ್ಟುಕೊಂಡು ಅಭಿವೃದ್ಧಿಪಡಿಸುತ್ತಿರುವ ಪಂಚ್ ಮೆಕ್ರೋ ಎಲೆಕ್ಟ್ರಿಕ್ ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು, ಬಹುತೇಕ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಇದರ ವಿನ್ಯಾಸ ಬಹುತೇಕ ICE ಚಾಲಿತ ಮಾದರಿಗೆ ಹೋಲಿಕೆಯಾಗುತ್ತದೆ. ಈ ಹೊಸ ಹೊಚ್ಚ ಪಂಚ್ ಇವಿ ಆಲ್ಫಾ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಆಧರಿಸಿದ್ದು, ನೆಕ್ಸಾನ್ ಇವಿಯಂತೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹೊಂದಿರಲಿದೆ.

ಈ ನೂತನ ಟಾಟಾ ಪಂಚ್ ಇವಿ ಐದು ಆಸನ ಆಯ್ಕೆಯಲ್ಲಿ ರೂ.12 ಲಕ್ಷ ಬೆಲೆಯಲ್ಲಿ ಖರೀದಿಗೆ ಸಿಗಬಹುದು. ಜೊತೆಗೆ 7 ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್ ಸೇರಿದಂತೆ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಸಂಪೂರ್ಣ ಚಾರ್ಜಿನಲ್ಲಿ 300 km ರೇಂಜ್ ನೀಡಬಹುದು ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಸಿಟ್ರಸ್ eC3 ಪ್ರತಿಸ್ಪರ್ಧಿಯಾಗಲಿದೆ.

ಇನ್ನು, ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು ಕಾರುಗಳನ್ನು ಬಿಡುಗಡೆ ಮಾಡಲು ಹೊರಟಿದೆ. ಪ್ರತಿಯೊಂದು ಕಾರುಗಳು ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಲಾಂಚ್ ಆಗಲಿದ್ದು, ಭಾರತದ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಲಿದೆ. ಜೊತೆಗೆ ಮಾರುಕಟ್ಟೆಯಲ್ಲಿ ಇತರೆ ಕಂಪನಿ ಕಾರುಗಳಿಗೆ ಹೇಗೆ ಪೈಪೋಟಿ ನೀಡಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.

Article Published On: Monday, May 29, 2023, 15:49 [IST]
English summary
Tata motors launch 4 suvs in india details
Read more on ಟಾಟಾ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+