Tata Nexon EV: ಹೊಸ ಲುಕ್‌ನೊಂದಿಗೆ ನವೀಕರಿಸಿದ ಟಾಟಾ ನೆಕ್ಸಾನ್ ಇವಿ ಬಿಡುಗಡೆ, ದೈತ್ಯರಿಗೆ ಶುರುವಾಯ್ತು ಭೀತಿ!
ಭಾರತದಲ್ಲಿ ಟಾಟಾ (Tata) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿದ್ದು, ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಹಲವು ತಿಂಗಳಿಂದ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಇದೀಗ, ಹೊಸ ಲುಕ್‌ನೊಂದಿಗೆ ನವೀಕರಿಸಿದ ನೆಕ್ಸಾನ್ ಇವಿ (Nexon EV) ಬಿಡುಗಡೆಗೊಳಿಸಿದೆ. ಆ ಬಗ್ಗೆ ಸಂಪೂರ್ಣ ವಿವರ ತಿಳಿಯೋಣ ಬನ್ನಿ.
ಈ ನೂತನ ಟಾಟಾ ನೆಕ್ಸಾನ್ ಇವಿ ರೂ.14.74 ಲಕ್ಷ ಆರಂಭಿಕ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಸಿಗಲಿದ್ದು, ಈ ಕೊಡುಗೆ ಸೀಮಿತ ಅವಧಿಗೆ ಲಭ್ಯವಿದೆ. ನವೀಕರಿಸಿದ ನೆಕ್ಸಾನ್ ಇವಿ ವಿನ್ಯಾಸ ಹಾಗೂ ವೈಶಿಷ್ಟ್ಯ ವಿಷಯದಲ್ಲಿ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ. ಈಗಾಗಲೇ, ಟಾಟಾ 53,000 ಯುನಿಟ್ ನೆಕ್ಸಾನ್ ಇವಿಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದೆ.

ನವೀಕರಣದೊಂದಿಗೆ ಲಾಂಚ್ ಆಗಿರುವ ಇಂಧನ ಚಾಲಿತ (ICE) ಟಾಟಾ ನೆಕ್ಸಾನ್ ಕಾರಿಗೆ ಹೋಲಿಸಿದರೆ, ನೆಕ್ಸಾನ್ ಇವಿಯೂ ಕಂಪನಿಯ ಕರ್ವ್ವ್ (ಕಾನ್ಸೆಪ್ಟ್) ಎಸ್‌ಯುವಿಯ ವಿನ್ಯಾಸವನ್ನು ಆಧರಿಸಿದೆ. ಅತ್ಯಾಧುನಿಕ ಸ್ಲಿಕ್ ಸ್ಪ್ಲಿಟ್ ಹೆಡ್‌ಲ್ಯಾಂಪ್, ಎಲ್ಇಡಿ ಲೈಟ್ ಸ್ಟ್ರಿಪ್, ನೂತನ ಕನೆಕ್ಟ್ದ್ ರೇರ್ ಲೈಟ್ಸ್, ರೂಫ್-ಮೌಂಟೆಡ್ ಸ್ಪಾಯ್ಲರ್ ಅನ್ನು ಒಳಗೊಂಡಿದೆ. ಜೊತೆಗೆ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟಿನ್ ವೈಟ್ ಫ್ಲೇಮ್ ರೆಡ್ ಸೇರಿದಂತೆ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಈ ಕಾರು, ಯುವ ಗ್ರಾಹಕರನ್ನು ಆಕರ್ಷಿಸುವ ವೈಶಿಷ್ಟ್ಯಗಳನ್ನು ಪಡೆದಿದ್ದು, ಮುಖ್ಯವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್-ಮೌಂಟೆಡ್ ಪ್ಯಾಡಲ್ ಶಿಫ್ಟರ್, 360-ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, ವಾಯ್ಸ್ ಕಮಾಂಡ್ ಫಂಕ್ಷನ್, ಏರ್ ಪ್ಯೂರಿಫೈಯರ್, JBL ಆಡಿಯೊ ಸಿಸ್ಟಮ್ ಮತ್ತು ಸನ್‌ರೂಫ್ ಅನ್ನು ಹೊಂದಿದೆ.
ನೂತನ ನೆಕ್ಸಾನ್ ಎಲೆಕ್ಟ್ರಿಕ್ ಕಾರು, ಮೀಡಿಯಂ ರೇಂಜ್ (ಎಂಆರ್) ಮತ್ತು ಲಾಂಗ್ ರೇಂಜ್ (ಎಲ್ಆರ್) ರೂಪಾಂತರ ಆಯ್ಕೆಯಲ್ಲಿ ಖರೀದಿದಾರರಿಗೆ ದೊರೆಯುತ್ತದೆ. ಎಂಆರ್ ವೇರಿಯೆಂಟ್ 30kWh ಮತ್ತು ಎಲ್ಆರ್ ವೇರಿಯೆಂಟ್ 40.5kWh ಬ್ಯಾಟರಿ ಪ್ಯಾಕ್ ಪಡೆದಿದೆ. ಜನರೇಷನ್ 2 ಮೋಟಾರ್ ಹೊಂದಿದ್ದು, ಕ್ರಮವಾಗಿ, 127 bhp ಹಾಗೂ 143 bhp ಪವರ್, ಜೊತೆಯಲ್ಲಿ 215Nm ಪೀಕ್ ಟಾರ್ಕ್ ಉತ್ಪಾದಿಸುತ್ತವೆ.
ನವೀಕರಿಸಿದ ಟಾಟಾ ನೆಕ್ಸಾನ್ ಇವಿಯ ಎಂಆರ್ ರೂಪಾಂತರ ಫುಲ್ ಚಾರ್ಜಿನಲ್ಲಿ 325 km ಹಾಗೂ ಎಲ್ಆರ್ ರೂಪಾಂತರ 465 km (ARAI) ರೇಂಜ್ ನೀಡುವ ಸಾಮರ್ಥ್ಯ ಹೊಂದಿದೆ. ಮನೆ ವಿದ್ಯುತ್ ಬಳಕೆಯಲ್ಲಿ ಎಂಆರ್ ವೇರಿಯೆಂಟ್ 10.5 ಗಂಟೆ, ಎಲ್ಆರ್ ವೇರಿಯೆಂಟ್ ಬ್ಯಾಟರಿ 15 ಗಂಟೆಯಲ್ಲಿ ಸಂಪೂರ್ಣ ಚಾರ್ಜ್ ಆಗುತ್ತದೆ. ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಇವೆರೆಡು ಕಾರುಗಳ ಬ್ಯಾಟರಿ 10-80% ಚಾರ್ಜ್ ಆಗಲು 56 ನಿಮಿಷ ಸಾಕು.
ಈ ಕಾರು, ಇಕೋ, ಸಿಟಿ ಹಾಗೂ ಸ್ಪೋರ್ಟ್ಸ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್, ರೇರ್ ಡಿಸ್ಕ್ ಬ್ರೇಕ್ಸ್, ಹಿಲ್ ಡೀಸೆಂಟ್ ಕಂಟ್ರೋಲ್ ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ.
ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ ಇವಿಗಿರುವ ಏಕೈಕ ಪ್ರತಿಸ್ಪರ್ಧಿ ಮಹೀಂದ್ರಾ XUV400 ಇವಿ. ಇದು ರೂ.15.99 ಲಕ್ಷದಿಂದ ರೂ. ರೂ.19.39 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಹೊಸ ನೆಕ್ಸಾನ್ ಇವಿ ಗ್ರಾಹಕರು ಊಹಿಸಿದ್ದಕ್ಕಿಂತ ಅತ್ಯಾಧುನಿಕ ವೈಶಿಷ್ಟ್ಯದೊಂದಿಗೆ ಬಿಡುಗಡೆಯಾಗಿದ್ದು, ಮುಂಬರುವ ಹಬ್ಬದ ಋತುವಿನಲ್ಲಿ ಹೆಚ್ಚಿನ ಖರೀದಿದಾರನ್ನು ಆಕರ್ಷಿಸಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications