Tata: ಹೊಸ ಟಾಟಾ ನೆಕ್ಸಾನ್ ಇವಿ ಖರೀದಿಸಬೇಕೇ.. ಇಲ್ಲಿದೆ ಮುಖ್ಯ ಮಾಹಿತಿ

ಭಾರತದಲ್ಲಿ ಟಾಟಾ (Tata) ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕೆಲವೇ ದಿನಗಳ ಹಿಂದೆ, ಮಾರುಕಟ್ಟೆಯಲ್ಲಿ ನವೀಕರಿಸಿದ ನೆಕ್ಸಾನ್ ಇವಿ (Nexon EV) ಬಿಡುಗಡೆಗೊಳಿಸಿತ್ತು. ನೀವು ಈ ಕಾರನ್ನು ಖರೀದಿಸಲು ಯೋಚಿಸಿದ್ದರೆ, ಆನ್-ರೋಡ್ ಬೆಲೆ, ಡೌನ್ ಪೇಮೆಂಟ್ ಆಯ್ಕೆ ಬಗ್ಗೆ ಇಲ್ಲಿದೆ ಮಾಹಿತಿ.

ಟಾಟಾ ನೆಕ್ಸಾನ್ ಇವಿ ಕ್ರಿಯೇಟಿವ್ ಪ್ಲಸ್ ಎಂಆರ್ ರೂಪಾಂತರ ದೆಹಲಿಯಲ್ಲಿ ರೂ.15.52 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಬಹುದು. ಇಎಂಐ ಅನ್ನು 5 ವರ್ಷದ ಅವಧಿಗೆ ಶೇಕಡ 10% ಬಡ್ಡಿ ದರದಲ್ಲಿ ಕಟ್ಟಬೇಕು. ಫಿಯರ್ ಲೆಸ್ ಎಂಆರ್ ವೇರಿಯೆಂಟ್ ರೂ.17.04 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ.

Tata: ಹೊಸ ಟಾಟಾ ನೆಕ್ಸಾನ್ ಇವಿ ಖರೀದಿಸಬೇಕೇ.. ಇಲ್ಲಿದೆ ಮುಖ್ಯ ಮಾಹಿತಿ

ಈ ಮಾದರಿಯನ್ನು ರೂ.3.5 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, 5 ವರ್ಷದ ಅವಧಿಗೆ 10% ಬಡ್ಡಿ ದರದಲ್ಲಿ ಸಾಲವನ್ನು ಪಾವತಿಸಬೇಕು. ಫಿಯರ್ ಲೆಸ್ ಎಲ್ಆರ್ ರೂಪಾಂತರ ರೂ.19.13 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದ್ದು, ರೂ.3.83 ಲಕ್ಷ ಡೌನ್ ಪೇಮೆಂಟ್ ಪಾವತಿಸಿ, ಖರೀದಿಸಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಸಮೀಪದ ಡೀಲರ್ ಶಿಪ್ ಸಂಪರ್ಕಿಸಿರಿ.

ನವೀಕರಣದೊಂದಿಗೆ ಹೊಸ ಅವತಾರದಲ್ಲಿ ಬಂದಿರುವ ನೆಕ್ಸಾನ್ ಇವಿ, ಟಾಟಾ ಕರ್ವ್ವ್ (ಕಾನ್ಸೆಪ್ಟ್) ಎಸ್‌ಯುವಿಯಂತೆ ಡಿಸೈನ್ ಹೊಂದಿದೆ. ಎಂಪವರ್ಡ್ ಆಕ್ಸೈಡ್, ಪ್ರಿಸ್ಟಿನ್ ವೈಟ್ ಫ್ಲೇಮ್ ರೆಡ್ ಒಳಗೊಂಡಂತೆ 7 ಆಕರ್ಷಕ ಬಣ್ಣದ ಆಯ್ಕೆಯಲ್ಲಿ ಸಿಗುತ್ತದೆ. ನವೀನ ಸ್ಲಿಕ್ ಸ್ಪ್ಲಿಟ್ ಹೆಡ್‌ಲ್ಯಾಂಪ್, ಎಲ್ಇಡಿ ಲೈಟ್ ಸ್ಟ್ರಿಪ್‌, ಕನೆಕ್ಟ್ದ್ ರೇರ್ ಲೈಟ್ಸ್, ರೂಫ್-ಮೌಂಟೆಡ್ ಸ್ಪಾಯ್ಲರ್ ಅನ್ನು ಹೊಂದಿದೆ.

ಹೊಸ ನೆಕ್ಸಾನ್ ಇವಿ ಬ್ಯಾಟರಿ ಪ್ಯಾಕ್ ಅನುಗುಣವಾಗಿ, ಮೀಡಿಯಂ ರೇಂಜ್ (ಎಂಆರ್) ಹಾಗೂ ಲಾಂಗ್ ರೇಂಜ್ (ಎಲ್ಆರ್) ರೂಪಾಂತರ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಎಂಆರ್ ರೂಪಾಂತರ 30kWh ಹಾಗೂ ಎಲ್ಆರ್ ರೂಪಾಂತರ 40.5kWh ಬ್ಯಾಟರಿ ಪ್ಯಾಕ್ ಹೊಂದಿದೆ. ಜನರೇಷನ್ 2 ಮೋಟಾರ್ ಸಹಾಯದಿಂದ ಕಾರ್ಯನಿರ್ವಹಿಸಲಿದ್ದು, ಕ್ರಮವಾಗಿ, 127 bhp, 143 bhp ಪವರ್, 215 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಕಾರು, ಇಕೋ, ಸಿಟಿ ಹಾಗೂ ಸ್ಪೋರ್ಟ್ಸ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಹೊಂದಿದ್ದು, ಎಂಆರ್ ರೂಪಾಂತರ ಸಂಪೂರ್ಣ ಚಾರ್ಜಿನಲ್ಲಿ 325 km ಮತ್ತು ಎಲ್ಆರ್ ರೂಪಾಂತರ 465 km ರೇಂಜ್ ನೀಡುತ್ತದೆ. ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಇವೆರೆಡು ಕಾರುಗಳ ಬ್ಯಾಟರಿ ಪ್ಯಾಕ್, 10-80% ಚಾರ್ಜ್ ಆಗಲು 56 ನಿಮಿಷ ಬೇಕಾಗುತ್ತದೆ. ಅದೇ ಮನೆಯ ವಿದ್ಯುತ್ ಬಳಕೆಯಲ್ಲಿ 10 ಗಂಟೆಗೂ ಹೆಚ್ಚಿನ ಕಾಲಾವಕಾಶ ಬೇಕು.

ಟಾಟಾ ನೆಕ್ಸಾನ್ ಇವಿ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 12.3 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 - ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ - ಮೌಂಟೆಡ್ ಪ್ಯಾಡಲ್ ಶಿಫ್ಟರ್, 360 - ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, ವಾಯ್ಸ್ ಕಮಾಂಡ್ ಫಂಕ್ಷನ್, ಏರ್ ಪ್ಯೂರಿಫೈಯರ್, ಜೆಬಿಎಲ್ ಆಡಿಯೊ ಸಿಸ್ಟಮ್ ಸೇರಿದಂತೆ ಹತ್ತಾರು ಫೀಚರ್ಸ್ ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ. ಇನ್ನು, ಎಲೆಕ್ಟ್ರಿಕ್ ಕಾರುಗಳಿಗೆ ದೇಶದಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಡಿಮ್ಯಾಂಡ್ ಬರಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, September 18, 2023, 15:43 [IST]
English summary
New tata nexon ev loan down payment details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+