Tata Nexon: ನವೀಕರಿಸಿದ ಟಾಟಾ ನೆಕ್ಸಾನ್ ರಿವ್ಯೂ ವಿಡಿಯೋ, ಹೇಗಿದೆ ಗೋತ್ತಾ?
ಟಾಟಾ (Tata) ಕಂಪನಿ ಇತ್ತೀಚೆಗೆ ನವೀಕರಿಸಿದ ನೆಕ್ಸಾನ್ (Nexon) ಕಾರನ್ನು ಅನಾವರಣ ಮಾಡಿತ್ತು. ಈ ಕಾಂಪ್ಯಾಕ್ಟ್ ಎಸ್‌ಯುವಿ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, ನಮ್ಮ ತಂಡಕ್ಕೆ ರಾಜಸ್ಥಾನದ ಜೈಪುರದಲ್ಲಿ ನೆಕ್ಸಾನ್ ಟೆಸ್ಟ್ ಡ್ರೈವ್ ಮಾಡುವ ಅವಕಾಶ ದೊರೆಯಿತು. ಅದರ ವಿಡಿಯೋ ರಿವ್ಯೂ ಇಲ್ಲಿದೆ.
ಹೊಚ್ಚ ಹೊಸ ಟಾಟಾ ನೆಕ್ಸಾನ್ ಎಸ್‌ಯುವಿ, ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಕರ್ವ್ವ್ ಕಾನ್ಸೆಪ್ಟ್ ಕಾರಿಗೆ ಹೋಲಿಕೆಯಾಗುವ ಡಿಸೈನ್ ಹೊಂದಿದೆ. ಅತ್ಯಾಕರ್ಷಕ ಹೆಡ್‌ಲ್ಯಾಂಪ್ಸ್, ಟರ್ನ್ ಸಿಗ್ನಲ್‌ಗಳಾಗಿ ಎಲ್‌ಇಡಿ ಡಿಆರ್‌ಎಲ್ಸ್, 16 ಇಂಚಿನ ಅಲಾಯ್ ವೀಲ್ಸ್, ವೈ - ಆಕಾರದ ಎಲ್ಇಡಿ ಟೈಲ್‌ಲೈಟ್ಸ್, ಪಡೆದಿದೆ. ಈ ಮೂಲಕ ನೋಡುಗರನ್ನು ತನ್ನತ್ತ ಆಕರ್ಷಿಸುತ್ತದೆ.
ಈ ಕಾರು, ಎರಡು ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ, 1.2 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 118.2 bhp ಗರಿಷ್ಠ ಪವರ್ ಹಾಗೂ 170 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 5/ 6 ಸ್ವೀಡ್ ಮ್ಯಾನುವಲ್, 6 ಸ್ವೀಡ್/ 7 ಸ್ವೀಡ್ ಡುಯಲ್ ಕ್ಲಚ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.
ಮತ್ತೊಂದು, 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಪಡೆದಿದ್ದು, 113.3 bhp ಪವರ್, 260 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6 ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಮೈಲೇಜ್ ಬಗ್ಗೆ ಕಂಪನಿಯು ಎಲ್ಲಿಯೂ ಮಾಹಿತಿ ಬಹಿರಂಗಪಡಿಸಿಲ್ಲ. ಆದರೂ, 24.07 kmpl ಗಿಂತ ಹೆಚ್ಚಿನ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ನವೀಕರಿಸಿದ ಟಾಟಾ ನೆಕ್ಸಾನ್ ಪಡೆದುಕೊಂಡಿರುವ ವೈಶಿಷ್ಟ್ಯಗಳ ಬಗ್ಗೆ ಮಾತನಾಡುವುದಾದರೆ, ಈ ಕಾರು, 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಸ್ಪೀಕರ್ JBL ಆಡಿಯೊ ಸಿಸ್ಟಮ್ ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಪಡೆದಿದೆ.
ಈ ನೆಕ್ಸಾನ್ ಕಾರು, 3,995 ಎಂಎಂ ಉದ್ದ, 1,804 ಎಂಎಂ ಅಗಲ ಹಾಗೂ 2,498 ಎಂಎಂ ಉದ್ದದ ವೀಲ್‌ಬೇಸ್ ಒಳಗೊಂಡಿದ್ದು, ಫಿಯರ್‌ಲೆಸ್ ಪರ್ಪಲ್, ಕ್ರಿಯೇಟಿವ್ ಓಷನ್, ಪ್ರಿಸ್ಟಿನ್ ವೈಟ್, ಪ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಬೆಲೆಯ ವಿಚಾರವಾಗಿಯೂ ಯಾವುದೇ ಮಾಹಿತಿ ಇಲ್ಲ. ಸುಮಾರು 8 ಲಕ್ಷದಿಂದ ರೂ.15 ಲಕ್ಷ ಬೆಲೆಗೆ ಖರೀದಿಗೆ ಸಿಗಬಹುದು ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಶಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.


Click it and Unblock the Notifications