ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್: ಹೇಗಿದೆ ಗೊತ್ತಾ?
ಭಾರತದಲ್ಲಿ ಟಾಟಾ ಮೋಟಾರ್ಸ್ ಕಾರುಗಳನ್ನು ಪ್ರತಿಯೊಬ್ಬರು ಇಷ್ಟಪಟ್ಟು ಖರೀದಿಸುತ್ತಾರೆ. ಅವುಗಳ ಆಕರ್ಷಕ ವಿನ್ಯಾಸ, ವೈಶಿಷ್ಟ್ಯಗಳು ಎಲ್ಲರನ್ನು ಆಕರ್ಷಿಸುತ್ತದೆ. ಸದ್ಯ ಕಂಪನಿಯು ವಿವಿಧ ಕಾರುಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಲು ತಯಾರಿ ನಡೆಸುತ್ತಿದೆ. ಅದರ ಭಾಗವಾಗಿ ಬಹುನೀರಿಕ್ಷಿತ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಅಭಿವೃದ್ಧಿಪಡಿಸುತ್ತಿದೆ.
ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‌ಯುವಿಯು ಇದೇ ಮೊದಲ ಬಾರಿಗೆ ರಸ್ತೆಯಲ್ಲಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ. ಹೊಸ ಕಾರು ಹೊರ ಹಾಗೂ ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆಯಲಿದೆ ಎಂದು ಹೇಳಲಾಗಿದೆ. 2017ರಲ್ಲಿ ಟಾಟಾ ಮೋಟಾರ್ಸ್, ನೆಕ್ಸಾನ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿತ್ತು. 2020ರಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿ, ಮತ್ತೆ ಗ್ರಾಹಕರಿಗೆ ನೀಡಲಾಗಿತ್ತು. ಕೆಲವೊಂದು ಕಾರಣಗಳಿಗೆ ನೆಕ್ಸಾನ್ ಬೇಡಿಕೆಯನ್ನು ಕಳೆದುಕೊಳ್ಳಬೇಕಾಯಿತು. ಆದರೆ, ಇತ್ತೀಚಿನ ವರ್ಷದಲ್ಲಿ ತನ್ನ ಮಾರಾಟ ಪ್ರಮಾಣವನ್ನು ಹಲವುಪಟ್ಟು ಹೆಚ್ಚಿಸಿಕೊಂಡಿದೆ.

ಪ್ರಸುತ್ತ, ಸಬ್-ಫೋರ್-ಮೀಟರ್ ಮಾಡೆಲ್ ಎಸ್‌ಯುವಿಗಳು ಮಾರುಕಟ್ಟೆಯಲ್ಲಿ ಅತಿಹೆಚ್ಚಿನ ಗ್ರಾಹಕರನ್ನು ಪಡೆದುಕೊಂಡಿವೆ. ಈ ನೆಕ್ಸಾನ್ ಕಾರು, ಈ ವರ್ಗಕ್ಕೆ ಸೇರುತ್ತದೆ. ಮುಂಬರಲಿರುವ ಫೇಸ್‌ಲಿಫ್ಟ್ ಆವೃತ್ತಿ ಬಗ್ಗೆ ಹೇಳುವುದಾದರೆ, ಇದು ಒಳ ಹಾಗೂ ಹೊರಭಾಗದಲ್ಲಿ ಸಾಕಷ್ಟು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದುಕೊಂಡಿದೆ. ಇದರ ಮುಂಭಾಗದ ವಿನ್ಯಾಸವು ಬಹುತೇಕ ದೆಹಲಿಯ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡ ಕರ್ವ್ವ್ (Curvv) ಕಾರಿಗೆ ಹೋಲುತ್ತದೆ. ಅಲ್ಲದೆ, ಬಂಪರ್‌ನಲ್ಲಿಯೇ ಹೆಡ್‌ಲ್ಯಾಂಪ್ಸ್ ಹಾಗೂ ಕನೆಕ್ಟೆಡ್ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ಪಡೆದುಕೊಂಡಿದೆ.
ನೆಕ್ಸಾನ್ ಫೇಸ್‌ಲಿಫ್ಟ್ ಎಸ್‌ಯುವಿಯ ಹಿಂಭಾಗದ ಬಂಪರ್‌ಗಳನ್ನು ಮರುವಿನ್ಯಾಸ ಮಾಡಲಾಗಿದ್ದು, ಹೊಸದಾದ ಅಲಾಯ್ ವೀಲ್ಸ್, ಎಲ್ಇಡಿ ಟೈಲ್ ಲ್ಯಾಂಪ್ಸ್ ಅನ್ನು ಹೊಂದಿರಲಿದೆಯಂತೆ. ಒಳಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾಗಿದ್ದು, ಆ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ, ಈ ಕಾರು ಗ್ರಾಹಕರಿಗೆ ಇಷ್ಟವಾಗುವಂತಹ ಅತ್ಯಾಧುನಿಕ ವೈಶಿಷ್ಟ್ಯಗಳೊಂದಿಗೆ ಖರೀದಿಗೆ ಸಿಗುವುದು ಖಚಿತ ಎಂದು ಹೇಳಬಹುದು. ಇದು ದೊಡ್ಡದಾದ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಆಕರ್ಷಕ ಡಿಜಿಟಲ್ ಇನ್ಸ್ಟ್ರುಮೆಂಟಲ್ ಕ್ಲಸ್ಟರ್ ಹೊಂದಿರಲಿದೆ.

ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಯಾವ ರೀತಿಯ ಎಂಜಿನ್ ಆಯ್ಕೆಯೊಂದಿಗೆ ಸಿಗಲಿದೆ ಎಂಬುದರ ಬಗ್ಗೆ ಸಾಕಷ್ಟು ಕುತೂಹಲವಿದೆ. ಸದ್ಯ, ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನೆಕ್ಸಾನ್, ಕಾರು, 1.2 - ಲೀಟರ್ ಪೆಟ್ರೋಲ್ ಹಾಗೂ 1.5 - ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಮುಂಬರುವ ಫೇಸ್‌ಲಿಫ್ಟ್ ಆವೃತ್ತಿಯು ಆಟೋ ಎಕ್ಸ್‌ಪೋದಲ್ಲಿ ಟಾಟಾ ಮೋಟಾರ್ಸ್ ವತಿಯಿಂದ ಪ್ರದರ್ಶಿಸಲಾದ ಶಕ್ತಿಯುತ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಬಹುದು.
ನೂತನ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‌ಯುವಿ ಈ ವರ್ಷ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದು ಅನುಮಾನವಾಗಿದ್ದು, ಮುಂದಿನ ವರ್ಷ ಗ್ರಾಹಕರಿಗೆ ಖರೀದಿಗೆ ಸಿಗಬಹುದು. ಈ ಕಾರು, ಸುರಕ್ಷತೆಯ ದೃಷ್ಟಿಯಿಂದಲ್ಲೂ ಅತ್ಯತ್ತಮವಾಗಿರಲಿದೆ ಎಂದು ಹೇಳಲಾಗಿದ್ದು, ಆರು ಏರ್ ಬಾಗ್ಸ್ ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. ಬೆಲೆಯು ಕೂಡ ಕೈಗೆಟುಕಲಿದ್ದು, ರೂ.7.79 ಲಕ್ಷ ಆರಂಭಿಕ ದರ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಕುಟುಂಬದೊಂದಿಗೆ ಪ್ರಯಾಣಿಸಲು ಇದು ಅತ್ಯುತ್ತಮ ಕಾರು ಎಂದು ಹೇಳಬಹುದು.

ಸದ್ಯ ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ನೆಕ್ಸಾನ್, ರೂ.7.80 ಲಕ್ಷದಿಂದ ರೂ.14.30 ಲಕ್ಷ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಒಟ್ಟು ಎಂಟು ರೂಪಾಂತರಗಳ ಆಯ್ಕೆಯಲ್ಲಿ ಸಿಗಲಿದೆ. ಇದರ 1.2-ಲೀಟರ್ 3 ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ 120 PS ಪವರ್ ಹಾಗೂ 170 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ 4-ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್, 110 PS ಗರಿಷ್ಠ ಪವರ್ ಹಾಗೂ 260 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 6 ಸ್ವೀಡ್ ಮ್ಯಾನುಯಲ್ ಟ್ರಾಸ್ಮಿಷನ್ ಅಥವಾ 6 ಸ್ವೀಡ್ AMT ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ.
ಟಾಟಾ ನೆಕ್ಸಾನ್ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಇದು 7 ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೋಲ್, 8 ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದಲ್ಲೂ ಈ ಕಾರು ಅತ್ಯುತ್ತಮವಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ಸ್, ABS (ಆಂಟಿ ಬ್ರೇಕಿಂಗ್ ಸಿಸ್ಟಮ್), ರೇರ್ ವ್ಯೂ ಕ್ಯಾಮೆರಾ, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಾಗೂ TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದುಕೊಂಡಿದೆ.


Click it and Unblock the Notifications