ಭಾರತದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಿಸಿದ ಟಾಟಾ ಪಂಚ್

ಟಾಟಾ ಮೋಟಾರ್ಸ್ ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಇದೀಗ, ತನ್ನ ಕೈಗೆಟುಕುವ ಬೆಲೆಯ ಪಂಚ್ ಎಸ್‌ಯುವಿ ಮಾರಾಟದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ನಿರ್ಮಿಸಿದ್ದು, 2021ರ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾದ ಈ ಎಸ್‌ಯುವಿಯ 1.75 ಲಕ್ಷ ಯುನಿಟ್‌ಗಳನ್ನು ಈವರೆಗೆ ಮಾರಾಟ ಮಾಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಇದೊಂದು ದೊಡ್ಡ ಮಟ್ಟದ ದಾಖಲೆಯೇ ಸರಿ ಎಂದು ಆಟೋಮೊಬೈಲ್ ಕ್ಷೇತ್ರದ ತಜ್ಞರು ಹೇಳುತ್ತಿದ್ದಾರೆ. ಬಿಡುಗಡೆಯಾಗಿ ಎರಡು ವರ್ಷ ಕಳೆಯುವುದರಲ್ಲಿ ಸಾವಿರಾರು ಮಂದಿಯ ಮನಗೆದ್ದಿದೆ. ಇದಕ್ಕೆ ಈ ಎಸ್‌ಯುವಿಯ ವೈಶಿಷ್ಟ್ಯ, ವಿನ್ಯಾಸ, ಕಾರ್ಯಕ್ಷಮತೆ ಹಾಗೂ ಕೈಗೆಟುಕುವ ಬೆಲೆಯೇ ಕಾರಣವಾಗಿದೆ. ಇದು ರೂ.6 ಲಕ್ಷದಿಂದ ರೂ. 9.47 ಲಕ್ಷ (ಎಕ್ಸ್ ಶೋ ರೂಂ) ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ.

ಭಾರತದಲ್ಲಿ ಐಸಿಹಾಸಿಕ ಮೈಲಿಗಲ್ಲು ನಿರ್ಮಿಸಿದ ಟಾಟಾ ಪಂಚ್

ಟಾಟಾ ಪಂಚ್ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 86 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಅಥವಾ 5 ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿದೆ. CNG ಕಿಟ್ ಹೊಂದಿರುವ ಪಂಚ್ ಎಸ್‌ಯುವಿ, 77 PS ಪವರ್, 97 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 18.8 - 20.09 kmpl ಮೈಲೇಜ್ ನೀಡಲಿದೆ.

ಪಂಚ್ ಎಸ್‌ಯುವಿ ಐದು ಆಸನಗಳ ವ್ಯವಸ್ಥೆಯನ್ನು ಹೊಂದಿದ್ದು, ಹೊರಭಾಗವು ನೋಡಲು ಅತ್ಯಾಕರ್ಷಕವಾಗಿದೆ. ಬರೋಬ್ಬರಿ 30 ರೂಪಾಂತರಗಳಲ್ಲಿ ಲಭ್ಯವಾಗಲಿದೆ. 366 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಹೊಂದಿದ್ದು, ವೈಶಿಷ್ಟಗಳ ವಿಚಾರಕ್ಕೆ ಬರುವುದಾದರೆ 7 ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸರ್, ಆಟೋ ಏರ್ ಕಂಡೀಷನ್, ಆಟೋಮೆಟಿಕ್ ಹೆಡ್‌ಲೈಟ್ಸ್ ಮತ್ತು ಕ್ರೂಸ್ ಕಂಟ್ರೋಲ್‌ ಸೇರಿದಂತೆ ಭರಪೂರ ವೈಶಿಷ್ಟ್ಯಗಳನ್ನು ಪಡೆದಿದೆ.

ಭಾರತದಲ್ಲಿ ಐಸಿಹಾಸಿಕ ಮೈಲಿಗಲ್ಲು ನಿರ್ಮಿಸಿದ ಟಾಟಾ ಪಂಚ್

ಸುರಕ್ಷತೆಯ ದೃಷ್ಟಿಯಿಂದ ಟಾಟಾ ಪಂಚ್ ಎಸ್‌ಯುವಿ ಅತ್ಯುತ್ತಮವಾಗಿದ್ದು, ಗ್ಲೋಬಲ್ NCAPಯಿಂದ ಒಳ್ಳೆಯ ರೇಟಿಂಗ್ ಪಡೆಯಲು ಯಶಸ್ವಿಯಾಗಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ ಒಟ್ಟು 17ಕ್ಕೆ 16.45 ಅಂಕಗಳನ್ನು ಪಡೆಯುವ ಮೂಲಕ 5 ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿದೆ. ಆದರೆ, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 40.89 ಅಂಕಗಳನ್ನು ಗಳಿಸುವ ಮೂಲಕ ಗ್ಲೋಬಲ್ NCAPಯಿಂದ 4 ಸ್ಟಾರ್ ರೇಟಿಂಗ್ ಗಳಿಸಿದೆ.

ಟಾಟಾ ಪಂಚ್ ಯಾವೆಲ್ಲ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ನೋಡುವುದಾದರೆ, ಇದು ಡ್ಯೂಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ರೇರ್ ವ್ಯೂ ಕ್ಯಾಮೆರಾದಂತಹ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಮಹೀಂದ್ರಾ KUV100 NXT, ಮಾರುತಿ ಸುಜುಕಿ ಇಗ್ನಿಸ್‌, ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್‌ ಕಾರುಗಳಿಗೆ ಭಾರೀ ಪೈಪೋಟಿ ನೀಡಲಿದೆ.

ಬಹುನೀರಿಕ್ಷಿತ ಟಾಟಾ ಪಂಚ್ ಇವಿ, ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು. ರೂ.12 ಲಕ್ಷ ಬೆಲೆಯಲ್ಲಿ ಖರೀದಿಗೆ ಸಿಗಬಹುದು. ಇದರ ವಿನ್ಯಾಸ ಬಹುತೇಕ ಇಂಧನ ಚಾಲಿತ ಕಾರಿಗೆ ಹೋಲಿಕೆಯಾಗಲಿದ್ದು, ಪಂಚ್ ಇವಿಯು ಜಿಪ್ಟ್ರಾನ್ ಎಲೆಕ್ಟ್ರಿಕ್ ಪವರ್‌ಟ್ರೇನ್‌ನಿಂದ ಕಾರ್ಯನಿರ್ವಹಿಸಲಿದ್ದು, 90 - 100 hp ಗರಿಷ್ಠ ಪವರ್, 170 - 200 Nm ಪೀಕ್ ಟಾರ್ಕ್ ಉತ್ಪಾದಿಸಬಹುದು.

ಒಟ್ಟಾರೆ, ಬಿಡುಗಡೆಯಾಗಿ ಕೇವಲ ಎರಡು ವರ್ಷದೊಳಗೆ ಟಾಟಾದ ಪಂಚ್ ಎಸ್‌ಯುವಿ ಮಾರಾಟದಲ್ಲಿ ದೊಡ್ಡ ದಾಖಲೆ ನಿರ್ಮಿಸಿದೆ. ಮುಂಬರುವ ದಿನಗಳಲ್ಲಿ ಇದರ ಎಲೆಕ್ಟ್ರಿಕ್ ಆವೃತ್ತಿಯು ಬರಲಿದ್ದು, ಗ್ರಾಹಕರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಸುರಕ್ಷತೆಯ ದೃಷ್ಟಿಯಿಂದಲ್ಲೂ ಪಂಚ್ ಎಸ್‌ಯುವಿಗೆ ಸರಿ ಸಾಟಿಯೇ ಇಲ್ಲ. ಇದರಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರನ್ನು ಆಕರ್ಷಿಸುತ್ತಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

Article Published On: Tuesday, March 21, 2023, 12:54 [IST]
English summary
Tata punch achieve historic milestone in india details kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+