Tata: ಟಾಟಾ ಪಂಚ್ ಸಿಎನ್‌ಜಿ ಕಾರಿನ ಬುಕ್ಕಿಂಗ್ ಶುರು? ಬೈಕ್‌ನಂತೆ ಮೈಲೇಜ್ ನೀಡುತ್ತೆ!
ಭಾರತದಲ್ಲಿ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ (Tata) ಜನಪ್ರಿಯತೆ ಗಳಿಸಿದೆ. ಸಿಎನ್‌ಜಿ ವಿಭಾಗಕ್ಕೆ ಹೊಸ ಮಾದರಿಯಾಗಿ ಬಹುಬೇಡಿಕೆ ಪಂಚ್ (Punch) ಮೈಕ್ರೋ ಎಸ್‌ಯುವಿಯನ್ನು ಪರಿಚಯಿಸುತ್ತಿದ್ದು, ಶೀಘ್ರದಲ್ಲಿ ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಸದ್ಯ, ಈ ಕಾರಿನ ಬುಕ್ಕಿಂಗ್ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ.
ದೇಶಾದ್ಯಂತ ಆಯ್ದ ಡೀಲರ್‌ಶಿಪ್ ಗಳು ಸಿಎನ್‌ಜಿ ಚಾಲಿತ ಪಂಚ್ ಎಸ್‌ಯುವಿಗಾಗಿ ಮುಂಗಡ ಆರ್ಡರ್ ತೆಗೆದುಕೊಳ್ಳುವುದಕ್ಕೆ ಶುರು ಮಾಡಿವೆ ಎಂದು ವರದಿಯಾಗಿದೆ. ಇದನ್ನು ಗಮನಿಸಿದಾಗ ಪಂಚ್ ಕಾರು, ಕೆಲವೇ ದಿನಗಳಲ್ಲಿ ಲಾಂಚ್ ಆಗಬಹುದು. ಟಾಟಾ, ಕಳೆದ ಜನವರಿಯಲ್ಲಿ ನಡೆದ ದೆಹಲಿ ಆಟೋ ಎಕ್ಸ್‌ಪೋ (2023)ದಲ್ಲಿ ಆಲ್ಟ್ರೋಜ್ ಸಿಎನ್‌ಜಿ ಕಾರಿನೊಂದಿಗೆ ಪಂಚ್ ಸಿಎನ್‌ಜಿ ಎಸ್‌ಯುವಿಯನ್ನು ಪ್ರದರ್ಶನ ಮಾಡಿತ್ತು.

ಟಾಟಾ ಪಂಚ್ ಸಿಎನ್‌ಜಿ ಕಾರು, 1.2 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿರಲಿದ್ದು, ಸಿಎನ್‌ಜಿ ಮೋಡ್ ನಲ್ಲಿ 76 bhp ಗರಿಷ್ಠ ಪವರ್ ಹಾಗೂ 97 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರಲಿದೆ. 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಸಿಗಬಹುದು. ಮೈಲೇಜ್ ವಿಷಯಕ್ಕೆ ಬರುವುದಾದರೆ, 30 kmpl ಇಂಧನ ದಕ್ಷತೆ ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ.
ಈ ಕಾರು, ಟ್ವಿನ್ ಸಿಲಿಂಡರ್ ತಂತ್ರಜ್ಞಾನವನ್ನು ಪಡೆದಿದೆ. 30 ಲೀಟರ್ ಸಾಮರ್ಥ್ಯದ ಸಿಎನ್‌ಜಿ ಟ್ಯಾಂಕ್ ಬಾನೆಟ್ ಕೆಳಗೆ ಇರಲಿದ್ದು, ನಿಮ್ಮ ಲೆಗೇಜ್ ಇಡಲು ಹೆಚ್ಚಿನ ಬೂಟ್ ಸ್ಪೇಸ್ ದೊರೆಯಲಿದೆ. ಇದಿಷ್ಟೇ ಅಲ್ಲದೆ, ಪಂಚ್ ಸಿಎನ್‌ಜಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಪ್ರಮುಖವಾಗಿ, 6 ಏರ್‌ಬ್ಯಾಗ್ಸ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ಸ್, 16 ಇಂಚಿನ ಅಲಾಯ್ ವೀಲ್ಸ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಪಡೆದಿರಲಿದೆ.

ಬೆಲೆ ವಿಚಾರವಾಗಿ ಮಾತನಾಡುವುದಾದರೆ, ಟಾಟಾ ಪಂಚ್ ಸಿಎನ್‌ಜಿ ಕಾರು, ಸುಮಾರು ರೂ.10 ಲಕ್ಷ ಆರಂಭಿಕ ಬೆಲೆಯಲ್ಲಿ ಖರೀದಿಗೆ ಸಿಗಬಹುದು. ಆದರೆ, ಕಂಪನಿ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಪಂಚ್ ಸಿಎನ್‌ಜಿ ಎಸ್‌ಯುವಿಗೆ ಸಿಟ್ರಸ್ ಸಿ3, ಮಾರುತಿ ಸುಜುಕಿ ಇಗ್ನಿಸ್, ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಪ್ರತಿಸ್ಪರ್ಧಿಯಾಗಿವೆ. ಜೊತೆಯಲ್ಲಿ ಮುಂಬರಲಿರುವ ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿಗೂ ಫೈಟ್ ನೀಡಬೇಕಾಗಿದೆ.
ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ, ರೂ.6 ಲಕ್ಷದಿಂದ ರೂ.9.52 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಇದು, 1.2 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 88 PS ಪವರ್ ಹಾಗೂ 115Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್, 5 ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, 18.8 - 20.09 kmpl ಮೈಲೇಜ್ ನೀಡುತ್ತದೆ.
ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುವ ಈ ಕಾರು, ದೇಶೀಯ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ಆಟೋ ಕ್ಲೇಮೇಟ್ ಕಂಟ್ರೋಲ್, ಆಟೋಮೆಟಿಕ್ ಹೆಡ್‌ಲೈಟ್ಸ್, ಕನೆಕ್ಟ್ದ್ ಕಾರ್ ಟೆಕ್ನಲಾಜಿ, ಕ್ರೂಸ್ ಕಂಟ್ರೋಲ್ ಅನ್ನು ಹೊಂದಿದೆ. ಇವೆಲ್ಲ ಕಾರಣಗಳಿಗೆ ಮಾರಾಟದ ವಿಷಯದಲ್ಲೂ ಪಂಚ್ ಉತ್ತಮ ಸ್ಥಾನವನ್ನು ಕಾಯ್ದುಕೊಂಡಿದೆ.
ಸುರಕ್ಷತೆಯ ದೃಷ್ಟಿಯಿಂದ, ಟಾಟಾ ಪಂಚ್ ಅತ್ಯುತ್ತಮವಾಗಿದ್ದು, ಗ್ಲೋಬಲ್ NCAP ನಡೆಸುವ ಪರೀಕ್ಷೆಯಲ್ಲಿ ಉತ್ತಮ ರೇಟಿಂಗ್ ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 17ಕ್ಕೆ 16.45 ಅಂಕವನ್ನು ಗಳಿಸುವ ಮೂಲಕ 5 ಸ್ಟಾರ್ ರೇಟಿಂಗ್ ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 40.89 ಅಂಕ ಪಡೆದು, 4 ಸ್ಟಾರ್ ರೇಟಿಂಗ್ ಗಳಿಸಿದೆ. ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ಹಲವು ಸೇಫ್ಟಿ ಫೀಚರ್ಸ್ ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications