ಹೊಸ ಅಪ್ಡೇಟ್ ಪಡೆಯಲಿದೆ ಟಾಟಾ ಪಂಚ್: ಎದುರಾಳಿ ಹ್ಯುಂಡೈ ಎಕ್ಸ್‌ಟರ್‌ಗೆ ನಡುಕ ಶುರು
ದೇಶದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ (Tata) ಜನಪ್ರಿಯತೆ ಗಳಿಸಿದೆ. ಕಂಪನಿಯು ಟಾಟಾ ಪಂಚ್ (Tata Punch) ಮೂಲಕ ಮೆಕ್ರೋ ಎಸ್‌ಯುವಿ ವಿಭಾಗವನ್ನು ಪ್ರವೇಶಿಸಿತು. ಈ ಪಂಚ್ ಕಾರು, ಬಿಡುಗಡೆಯಾಗಿ ಎರಡು ವರ್ಷ ಕಳೆದರೂ ಅದರ ಖ್ಯಾತಿ ಒಂದಿಷ್ಟು ಕಡಿಮೆಯಾಗಿಲ್ಲ. ಇದಕ್ಕಾಗಿ ಈಗಲೂ ದೀರ್ಘಕಾಲ ಕಾಯುವಿಕೆ ಅವಧಿಯನ್ನು ಹೊಂದಿದೆ.
ಇದೀಗ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಎಸ್‍ಯುವಿಗೆ 'ಫೀಲ್ ಗುಡ್' ಫೀಚರ್ಸ್ ಅನ್ನು ಸೇರಿಸಲು ನಿರ್ಧರಿಸಿದೆ. ಈ ಹೊಸ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಟಾಪ್-ಸ್ಪೆಕ್ ಕ್ರಿಯೇಟಿವ್ ಟ್ರಿಮ್ ವರೆಗೆ ಟಾಟಾ ಪಂಚ್ ಸ್ಟ್ಯಾಂಡರ್ಡ್ ಸಲಕರಣೆಗಳ ಭಾಗವಾಗಿರುತ್ತದೆ. ಈ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ 4-ಇಂಚಿನ ಯುನಿಟ್ ಆಗಿದೆ. ಟಾಟಾ ಪಂಚ್‌ನ ಟಾಪ್-ಸ್ಪೆಕ್ ಕ್ರಿಯೇಟಿವ್ ಟ್ರಿಮ್ ಹೆಚ್ಚು ಸುಧಾರಿತ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಈ ಇನ್ಸ್ಟ್ರುಮೆಂಟ್ ಕ್ಲಸ್ಟರ್ TFT ತಂತ್ರಜ್ಞಾನವನ್ನು ಸಹ ಹೊಂದಿದೆ ಮತ್ತು ಕಡಿಮೆ ಟ್ರಿಮ್ ಹಂತಗಳಲ್ಲಿ ನೀಡಲಾದ 4-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಿಂತ ಹೆಚ್ಚು ಪ್ರೀಮಿಯಂ ಆಗಿ ಕಾಣುತ್ತದೆ. ಮೊದಲಿಗೆ ಪೆಟ್ರೋಲ್ ರೂಪಾಂತರದ ಬಗ್ಗೆ ಮಾತನಾಡೋಣ. ಇದು 1.2-ಲೀಟರ್, 3-ಸಿಲಿಂಡರ್, ಪೆಟ್ರೋಲ್ ಎಂಜಿನ್ ಹೊಂದಿದ್ದು, 85 bhp ಪವರ್ ಹಾಗೂ 113 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ, 5-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.
ಈ ಕಾರು, ವಿನ್ಯಾಸದ ದೃಷ್ಟಿಯಿಂದ ಸಾಕಷ್ಟು ಅತ್ಯಾಧುನಿಕವಾಗಿದ್ದು, ಮುಂಭಾಗ, ಸಿಗ್ನೇಚರ್ ಗ್ರಿಲ್ ಆಕರ್ಷಕ ಹೆಡ್‌ಲೈಟ್ ಹಾಗೂ ಫಾಗ್ ಲೈಟ್ ಹೊಂದಿದೆ. ಇದರೊಟ್ಟಿಗೆ, ಫೋರ್-ಸ್ಪೋಕ್ 16 ಇಂಚಿನ ಅಲಾಯ್ ವೀಲ್ಸ್, ಟರ್ನ್ ಇಂಡಿಕೇಟರ್ ಪಡೆದಿದೆ. ಮೈಲೇಜ್ ವಿಷಯವಾಗಿ ಹೇಳುವುದಾದರೆ, ರೂಪಾಂತರಗಳಿಗೆ ಅನುಗುಣವಾಗಿ, 18.8 - 20.09 kmpl ಇಂಧನ ದಕ್ಷತೆ ಹೊಂದಿದೆ.

ಈ ಕಾರು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದ್ದು, ಸುರಕ್ಷತೆಯ ದೃಷ್ಟಿಯಿಂದ ಪಂಚ್ ಖರೀದಿದಾರರಿಗೆ ಉತ್ತಮ ಆಯ್ಕೆಯಾಗುತ್ತದೆ. ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್, ರೇರ್ ವ್ಯೂ ಕ್ಯಾಮೆರಾ ಒಳಗೊಂಡಂತೆ ಹಲವು ಸೇಫ್ಟಿ ಫೀಚರ್ಸ್ ಹೊಂದಿದೆ.
ಟಾಟಾ ಪಂಚ್ ಸಿಎನ್‌ಜಿ ಆವೃತ್ತಿ ಬಗ್ಗೆ ಹೇಳುವುದಾದರೆ, ಇದು, 1.2 ಲೀಟರ್, 3-ಸಿಲಿಂಡರ್ ಎಂಜಿನ್ ಹೊಂದಿದ್ದು, ಪೆಟ್ರೋಲ್ ಆವೃತ್ತಿಗೆ ಹೋಲಿಸಿದರೆ, ಕೊಂಚ ಕಡಿಮೆ 74 bhp ಪವರ್ ಹಾಗೂ 95 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಗ್ರಾಹಕರಿಗೆ ಸಿಗಲಿದ್ದು, ಯಾವ ಬೈಕಿಗೂ ಕಮ್ಮಿ ಇಲ್ಲದಂತಹ ಮೈಲೇಜ್ ನೀಡಲಿದ್ದು, 26.9 km/kg ಮೈಲೇಜ್ ನೀಡುತ್ತದೆ.

ಟಾಟಾ ಕಂಪನಿ ಎಲೆಕ್ಟ್ರಿಕ್ ರೂಪದಲ್ಲಿಯೂ ಪಂಚ್ ಕಾರನ್ನು ಬಿಡುಗಡೆಗೊಳಿಸಲು ತಯಾರಿ ನಡೆಸಿದ್ದು, ಈಗಾಗಲೇ ಹಲವು ಬಾರಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ. ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ದೊಡ್ಡದಾದ ಬ್ಯಾಟರಿ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿರಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 350 km ರೇಂಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ರೂ.12 ಲಕ್ಷ ಬೆಲೆಗೆ ಸಿಗಬಹುದು.
ಮುಂಬರಲಿರುವ ಟಾಟಾ ಪಂಚ್ ಇವಿ, ಟಿಗೂರ್ ಇವಿ ಹಾಗೂ ಟಿಯಾಗೊ ಇವಿಯಂತೆ 26 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿರಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 300 km ರೇಂಜ್ ನೀಡುವ ಸಾಮರ್ಥ್ಯ ಹೊಂದಿರಬಹುದು. ಜೊತೆಯಲ್ಲಿ 7.2 kW ಎಸಿ ಚಾರ್ಜರ್ ಹಾಗೂ ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಖರೀದಿಗೆ ದೊರೆಯಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








