Tata: ಟಾಟಾದ ಈ ಕಾರು ಬಿಡುಗಡೆಯಾಗಿ 1 ತಿಂಗಳು ಅಷ್ಟೇ, ಭಾರೀ ಬೇಡಿಕೆ!

ಭಾರತದ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ (Tata Motors), ಕಳೆದ ತಿಂಗಳು ನವೀಕರಿಸಿದ ಹೊಸ ಹ್ಯಾರಿಯರ್‌ನೊಂದಿಗೆ ಸಫಾರಿ (Safari) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ರೂ.16.19 ಲಕ್ಷ ಆರಂಭಿಕ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿರುವ ಈ ಕಾರಿಗೆ ಭಾರೀ ಬೇಡಿಕೆ ಬಂದಿದ್ದು, ನವೆಂಬರ್ ತಿಂಗಳು ಒಂದಷ್ಟು ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ.

ಟಾಟಾ ಸಫಾರಿ ಫೇಸ್‌ಲಿಫ್ಟ್ (Tata Safari facelift) 10 ರೂಪಾಂತರದ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಸಿಗುತ್ತದೆ. ಅವುಗಳಲ್ಲಿ ಸ್ಮಾರ್ಟ್ (ಒ), ಪ್ಯೂರ್ (ಒ), ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಡ್ವೆಂಚರ್ ಪ್ಲಸ್ ಡಾರ್ಕ್, ಅಕಾಂಪ್ಲಿಶ್ಡ್, ಅಕಾಂಪ್ಲಿಶ್ಡ್ ಡಾರ್ಕ್ ಪ್ರಮುಖವಾಗಿವೆ. ಜೊತೆಗೆ 7 ಬಣ್ಣದ ಆಯ್ಕೆಯಲ್ಲಿ ಸಿಗಲಿದ್ದು, ಇದನ್ನು ಆಧರಿಸಿ ಕಾಯುವಿಕೆ ಅವಧಿಯು ನಿರ್ಧಾರವಾಗುತ್ತದೆ.

Tata: ಟಾಟಾದ ಈ ಕಾರು ಬಿಡುಗಡೆಯಾಗಿ 1 ತಿಂಗಳು ಅಷ್ಟೇ, ಭಾರೀ ಬೇಡಿಕೆ!

ಅದು 4 ರಿಂದ 6 ವಾರಗಳವರೆಗೆ ಇರಬಹುದು. ಆದರೆ, ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್, ಸ್ಟಾಕ್ ಲಭ್ಯತೆ ಲೆಕ್ಕಾಚಾರದಲ್ಲಿ ವಿತರಣೆಯಾಗುವ ಸಮಯಾವಕಾಶ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ. ನವೀಕರಣಗೊಂಡಿರುವ ಟಾಟಾ ಸಫಾರಿ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ನವೀನ ಹೆಡ್‌ಲ್ಯಾಂಪ್‌ ಹಾಗೂ ಎಲ್ಇಡಿ ಲೈಟ್ ಬಾರ್, 9-ಇಂಚಿನ ಅಲಾಯ್ ವೀಲ್ಸ್ ಪಡೆಯುವ ಮೂಲಕ ಅತ್ಯಾಧುನಿಕವಾಗಿದೆ.

ಟಾಟಾ ಸಫಾರಿ ಫೇಸ್‌ಲಿಫ್ಟ್, 2 - ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 170 PS ಗರಿಷ್ಠ ಪವರ್ ಹಾಗೂ 350 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 6 - ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿದ್ದು, 16.30 ಕಿ.ಮೀ ಮೈಲೇಜ್ ನೀಡಬಹುದು.

Tata: ಟಾಟಾದ ಈ ಕಾರು ಬಿಡುಗಡೆಯಾಗಿ 1 ತಿಂಗಳು ಅಷ್ಟೇ, ಭಾರೀ ಬೇಡಿಕೆ!

ಈ ಕಾರು, ಭರಪೂರ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್‌ಸ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್, ಆಪಲ್ ಕಾರ್‌ ಪ್ಲೇ, ಆಂಬಿಯೆಂಟ್ ಲೈಟಿಂಗ್, ಟಚ್-ಬೇಸ್ಡ್ ಎಸಿ ಪ್ಯಾನೆಲ್‌, ಡುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಅನ್ನು ಹೊಂದಿದೆ.

ಸುರಕ್ಷತೆಯ ದೃಷ್ಟಿಯಿಂದಲ್ಲೂ ಟಾಟಾ ಸಫಾರಿ ಫೇಸ್‌ಲಿಫ್ಟ್ ಅತ್ಯುತ್ತಮವಾಗಿದ್ದು, 7 ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮರಾ, ಲೇನ್ ಡಿಪಾರ್ಚರ್ ವಾರ್ನಿಂಗ್ ಸೇರಿದಂತೆ ವಿವಿಧ ಫೀಚರ್ಸ್ ಇದೆ.

Tata: ಟಾಟಾದ ಈ ಕಾರು ಬಿಡುಗಡೆಯಾಗಿ 1 ತಿಂಗಳು ಅಷ್ಟೇ, ಭಾರೀ ಬೇಡಿಕೆ!

ಟಾಟಾ ಸಫಾರಿಯೊಂದಿಗೆ ಬಿಡುಗಡೆಯಾಗಿರುವ ಹೊಸ ಹ್ಯಾರಿಯರ್‌ ಬಗ್ಗೆ ಹೇಳುವುದಾದರೆ, ಇದು ರೂಪಾಂತರಗಳಿಗೆ ಅನುಗುಣವಾಗಿ ರೂ.15.49 ಲಕ್ಷದಿಂದ ರೂ.26.44 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಬಿಡುಗಡೆಯಾಗಿತ್ತು. ಹ್ಯಾರಿಯರ್ ಸಹ 2.0 - ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 6 - ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಪಡೆದಿದೆ.

ಟಾಟಾ ಹ್ಯಾರಿಯರ್‌ ರೂಪಾಂತರಗಳ ಅನ್ವಯ 10.25-ಇಂಚು ಅಥವಾ 12.3-ಇಂಚಿನ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಸಿಸ್ಟಮ್, ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೊಸದಾದ 4 - ಸ್ಪೋಕ್ ಸ್ಟೀರಿಂಗ್ ವೀಲ್, ಡ್ಯುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್ ಹೊಂದಿದೆ. ಸುರಕ್ಷತೆ ದೃಷ್ಟಿಯಿಂದ 7 ಏರ್‌ಬ್ಯಾಗ್‌ ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವQರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, November 23, 2023, 13:52 [IST]
English summary
Tata safari facelift suv november waiting period revealed
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+