ಬಲಿಷ್ಠ ಟಾಟಾ ಸಫಾರಿ ಎಸ್‍ಯುವಿಗೆ ಭಾರೀ ಡಿಮ್ಯಾಂಡ್: ಇದಕ್ಕೆ ಮತ್ತಷ್ಟು ಕಾಯಬೇಕು

ಜನಪ್ರಿಯ ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳನ್ನು ಪರಿಚಯಿಸುತ್ತೇವೆ. ಇತ್ತೀಚೆಗೆ ಟಾಟಾ ಕಾರುಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತ್ತವೆ. ಇದರಿಂದ ಕೆಲವು ಜನಪ್ರಿಯ ಟಾಟಾ ಕಾರುಗಳಿಗೆ ಕಾಯುವ ಅವಧಿಯ ಹೆಚ್ಚಾಗಿದೆ. ಟಾಟಾದ ಸಫಾರಿ (Tata Safari) ಎಸ್‍ಯುವಿಯ ಕಾಯುವ ಅವಧಿ ಕೂಡ ಹೆಚ್ಚಾಗಿದೆ.

ಟಾಟಾ ಮೋಟರ್‌ನ ಪ್ರಮುಖ ಎಸ್‍ಯುವಿ, 2023ರ ಟಾಟಾ ಸಫಾರಿಯನ್ನು ಫೆಬ್ರವರಿಯಲ್ಲಿ ತಿಂಗಳಿನಲ್ಲಿ ಬಿಡುಗಡೆಗೊಂಡಿತು. ಈ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.15.65 ಲಕ್ಷವಾಗಿದೆ. ಇನ್ನು ಈ ಟಾಟಾ ಸಫಾರಿ ಈಗ ಬುಕ್ಕಿಂಗ್ ಮಾಡಿದ ದಿನದಿಂದ ಆರರಿಂದ ಎಂಟು ವಾರಗಳವರೆಗೆ ಕಾಯುವ ಅವಧಿಯನ್ನು ಆಕರ್ಷಿಸುತ್ತದೆ. ಇದು ಮುಂಬೈನಲ್ಲಿ ಬುಕಿಂಗ್‌ಗಳಿಗೆ ಅನ್ವಯಿಸುತ್ತದೆ ಮತ್ತು ಡೀಲರ್, ರೂಪಾಂತರ, ಬಣ್ಣ, ಆವೃತ್ತಿ ಮತ್ತು ಇತರ ಅಂಶಗಳನ್ನು ಅವಲಂಬಿಸಿ ಬದಲಾಗಬಹುದು.

Tata Safari

ಟಾಟಾ ಸಫಾರಿ ಎಸ್‍ಯುವಿಯ ಕಾಯುವ ಅವಧಿಯ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮ್ಮ ಹತ್ತಿರದ ಟಾಟಾ ಡೀಲರ್‌ಶಿಪ್ ಅನ್ನು ಸಂಪರ್ಕಿಸಿ. ಇನ್ನು ಟಾಟಾ ಮೋಟಾರ್ಸ್, ಸಫಾರಿ ಎಸ್‌ಯುವಿಯ ಎಂಜಿನ್ ಅನ್ನು ಭಾರತದಾದ್ಯಂತ ಮುಂಬರಲಿರುವ ಎಮಿಷನ್ (BS6 ಹಂತ 2) ಮಾನದಂಡಗಳಿಗೆ ನವೀಕರಿಸಿದೆ. ಈ ಕಾರು ಚಾಲಕರಿಗೆ ಅನುಕೂಲವಾಗುವಂತಹ ADAS (ಅಡ್ವಾನ್ಸ್ಡ್ ಡೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ಭರಪೂರ ವೈಶಿಷ್ಟ್ಯಗಳನ್ನು ಪಡೆದುಕೊಂಡು ಅತ್ಯಾಕರ್ಷಕವಾಗಿದೆ.

ನವೀಕರಿಸಿದ ಈ ಟಾಟಾ ಸಫಾರಿ ಎಸ್‌ಯುವಿ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು 2.0 ಲೀಟರ್ Kryotec ಡೀಸೆಲ್ ಎಂಜಿನ್ ಹೊಂದಿದ್ದು, 168 bhp ಗರಿಷ್ಠ ಪವರ್ ಹಾಗೂ 350 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಅಥವಾ 6 ಸ್ವೀಡ್ ಆಟೋಮೆಟಿಕ್ ಟ್ರಾಸ್ಮಿಷನ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯಲಿದೆ.

Tata Safari

ಈ ಸಫಾರಿ ಎಸ್‌ಯುವಿ ಹತ್ತು ಹಲವು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ದೊಡ್ಡದಾದ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯುನಿಟ್, ಆಪಲ್ ಕಾರ್‌ ಪ್ಲೇ, ಆಂಡ್ರಾಯ್ಡ್ ಆಟೋ, ಫುಲ್ ಡಿಜಿಟಲ್ ಇನ್ಸ್ರುಮೆಂಟ್ ಕ್ಲಸ್ಟರ್‌, 6 ವೇ ಪವರ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, 60-ಡಿಗ್ರಿ ಸರೌಂಡ್-ವ್ಯೂ ಕ್ಯಾಮೆರಾ ಸೇರಿದಂತೆ ಹಲವು ನೂತನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇವು ಖರೀದಿದಾರರನ್ನು ಸೆಳೆದುಕೊಂಡಿದೆ.

ಇನ್ನ್ನು ಸುರಕ್ಷತೆಯ ದೃಷ್ಟಿಯಿಂದಲೂ ಟಾಟಾ ಸಫಾರಿ ಎಸ್‌ಯುವಿ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ADAS (ಅಡ್ವಾನ್ಸ್ಡ್ ಡೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಒಳಗೊಂಡಿದ್ದು, ಇದು ಟ್ರಾಫಿಕ್ ಸಿಗ್ನಲ್ ರೆಕಗ್ನಿಷನ್, ಹೈ ಬೀಮ್ ಅಸಿಸ್ಟ್, ಬ್ಲೈಂಡ್-ಸ್ಪಾಟ್ ಡಿಟೆಕ್ಷನ್, ಲೇನ್ ಡಿಪಾರ್ಚರ್ ವಾರ್ನಿಂಗ್, ರೇರ್ ಕ್ರಾಸ್ ಟ್ರಾಫಿಕ್ ಅಲರ್ಟ್, ಡೋರ್ ಓಪನ್ ಅಲರ್ಟ್ ಒಳಗೊಂಡಂತೆ ಹೆಚ್ಚಿನ ಮಾಹಿತಿಯನ್ನು ನೀಡುತ್ತದೆ.

ಟಾಟಾ ಸಫಾರಿ ಎಸ್‌ಯುವಿ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಎಕ್ಸ್‌ಯುವಿ700 ಗೆ ಭಾರೀ ಪೈಪೋಟಿ ನೀಡುತ್ತಿದೆ.. ಜೊತೆಗೆ ಸುರಕ್ಷತೆಯ ದೃಷ್ಟಿಯಿಂದಲೂ ಸುಧಾರಿಸಿದ್ದು, ADAS ತಂತ್ರಜ್ಞಾನ ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರು ಖರೀದಿಸಲು ಮನಸ್ಸು ಮಾಡಬಹುದು. ಒಟ್ಟಾರೆ, ಎಂಜಿನ್ ಹಾಗೂ ವೈಶಿಷ್ಟ್ಯದ ದೃಷ್ಟಿಯಿಂದ ಈ ಸಫಾರಿ ಎಸ್‌ಯುವಿ ಅತ್ಯುತ್ತಮವಾಗಿದೆ ಎಂದು ಹೇಳಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.

Article Published On: Tuesday, July 25, 2023, 11:28 [IST]
English summary
Tata safari suv waiting period extends details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+