Tata: ವಿಜಯದಶಮಿಗೆ ಈ ಟಾಟಾ ಕಾರು ಖರೀದಿಸಬಹುದು.. ಇಲ್ಲಿದೆ ಗುಡ್ ನ್ಯೂಸ್

ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಕಾರುಗಳನ್ನು ಮಾರಾಟಗೊಳಿಸುವ ಮೂಲಕ ಟಾಟಾ (Tata) ಕಂಪನಿ ಖ್ಯಾತಿಗಳಿಸಿದೆ. ಅದರ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್‌ ಟಿಯಾಗೊ (Tiago) ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿದೆ. ನೀವು ವಿಜಯದಶಮಿಗೆ ಈ ಕಾರು ಖರೀದಿಸಬೇಕು ಅಂದುಕೊಂಡರೆ ಇಲ್ಲಿದೆ ಸಿಹಿಸುದ್ದಿ.

ಈ ಅಕ್ಟೋಬರ್ (October) ತಿಂಗಳು ಟಾಟಾ ಟಿಯಾಗೊ ಕಾರಿನ ಕಾಯುವಿಕೆ ಅವಧಿ ಗಣನೀಯವಾಗಿ ಇಳಿಕೆಯಾಗಿದೆ. ಸಿಎನ್‌ಜಿ ರೂಪಾಂತರವನ್ನು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಮಾಡಲು 8 ವಾರ ಕಾಯಬೇಕು. ಪೆಟ್ರೋಲ್ ರೂಪಾಂತರಗಳು, 4 ವಾರಗಳ ಕಾಯುವಿಕೆ ಅವಧಿಯನ್ನು ಹೊಂದಿವೆ. ಇದು, ಮುಂಬೈ ಮಹಾನಗರಿಗೆ ಮಾತ್ರ ಅನ್ವಯಿಸುತ್ತದೆ. ರಾಜ್ಯದಿಂದ ರಾಜ್ಯಕ್ಕೆ ಡಿಲೆವರಿಗೆ ಹಿಡಿಯುವ ಸಮಯ ಬೇರೆಯಾಗಿದ್ದು, ಹೆಚ್ಚಿನ ಮಾಹಿತಿಗೆ ಹತ್ತಿರದ ಡೀಲರ್ ಶಿಪ್ ಸಂಪರ್ಕಿಸಿರಿ.

Tata: ವಿಜಯದಶಮಿಗೆ ಈ ಟಾಟಾ ಕಾರು ಖರೀದಿಸಬಹುದು.. ಇಲ್ಲಿದೆ ಗುಡ್ ನ್ಯೂಸ್

ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌, ರೂ.5.60 ಲಕ್ಷದಿಂದ ರೂ.8.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ (ಒ) ಹಾಗೂ ಎಕ್ಸ್‌ಟಿ ಸೇರಿದಂತೆ 6 ರೂಪಾಂತರ, ಜೊತೆಗೆ ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ ಹಾಗೂ ಫ್ಲೇಮ್ ರೆಡ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಈ ಕಾರು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ, 1.2 - ಲೀಟರ್ ಪೆಟ್ರೋಲ್ ಎಂಜಿನ್ 86 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಒಳಗೊಂಡಿದೆ. 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಟಾಟಾ ಟಿಯಾಗೊ, ಸಿಎನ್‌ಜಿ ರೂಪಾಂತರ ಅದೇ ಎಂಜಿನ್ ಪಡೆದಿದೆ. ಆದರೆ, ಕೊಂಚ ಕಡಿಮೆ ಪವರ್ ಉತ್ಪಾದಿಸುತ್ತದೆ. ಇದು, 73.5 PS ಪವರ್ ಹಾಗೂ 95 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ದೊರೆಯುತ್ತದೆ. ಮೈಲೇಜ್ ವಿಷಯದ ಬಗ್ಗೆ ಮಾತನಾಡುವುದಾದರೆ, ವೇರಿಯೆಂಟ್ ಅನ್ವಯ, 20.01 kmpl - 26.49km/kg ಇಂಧನ ದಕ್ಷತೆ ಹೊಂದಿದೆ.

ಈ ಕಾರು, ಈಗಿನ ಜಮಾನದ ಯುವ ಗ್ರಾಹಕರನ್ನು ಆಕರ್ಷಿಸುವ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಡ್ರೈವರ್‌ಸ್ ಡಿಸ್ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ಕೂಲ್ಡ್ ಗ್ಲೋವ್‌ಬಾಕ್ಸ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದಲ್ಲೂ ಟಾಟಾ ಟಿಯಾಗೊ ಉತ್ತಮವಾಗಿದ್ದು, ಡುಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್, ಪಾರ್ಕಿಂಗ್ ಸೆನ್ಸರ್ಸ್, ಕಾರ್ನೆರಿಂಗ್ ಸ್ಟೆಬಿಲಿಟಿ ಕಂಟ್ರೋಲ್ ಒಳಗೊಂಡಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ. ಈ ಕಾರಿಗೆ ಮಾರುತಿ ಸುಜುಕಿ ಸೆಲೆರಿಯೊ, ವ್ಯಾಗನ್ ಆರ್ ಮತ್ತು ಸಿಟ್ರಸ್ ಸಿ3 ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಇನ್ನು, ಟಿಯಾಗೊ, ಟಾಟಾ ಕಂಪನಿಯ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್‌ ಆಗಿದ್ದರೂ ದೊಡ್ಡಮಟ್ಟದಲ್ಲಿ ಬೇಡಿಕೆ ಹೊಂದಿದೆ. ಈಗಲೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ. ಟಿಯಾಗೊ ಎಲೆಕ್ಟ್ರಿಕ್ ರೂಪದಲ್ಲಿಯೂ ಸಿಗಲಿದ್ದು, ರೂ.8.69 ಲಕ್ಷದಿಂದ 12.04 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 250 ರಿಂದ 315 km ರೇಂಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, October 16, 2023, 10:43 [IST]
English summary
Tata tiago car waiting period october 2023 comes down
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+