Tata: ಕಡಿಮೆ ಬೆಲೆಯ ಟಾಟಾ ಟಿಯಾಗೊ ಕಾರಿಗೆ ನೀರಿಕ್ಷೆಗೂ ಮೀರಿದ ಬೇಡಿಕೆ: ಇಲ್ಲಿದೆ ಸಿಹಿಸುದ್ದಿ

ದೇಶದಲ್ಲಿ ಟಾಟಾ ಮೋಟಾರ್ಸ್ (Tata motors) ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿದೆ. ಅದರ ಕಾರುಗಳ ಆಕರ್ಷಕ ವೈಶಿಷ್ಟ್ಯ, ವಿನ್ಯಾಸ ಹಾಗೂ ಕೈಗೆಟುಕುವ ಬೆಲೆ ಪ್ರತಿಯೊಬ್ಬ ಗ್ರಾಹಕರನ್ನು ಸೆಳೆಯುತ್ತಿದೆ. ಇದೀಗ, ಕಂಪನಿಯ ಎಂಟ್ರಿ ಲೆವೆಲ್ ಟಿಯಾಗೊ ಹ್ಯಾಚ್‌ಬ್ಯಾಕ್‌ಗೆ ಫುಲ್ ಡಿಮ್ಯಾಂಡ್ ಬಂದಿದ್ದು, ವಿತರಣೆಗೆ ಹಲವು ವಾರಗಳು ಕಾಯಬೇಕಾಗಿದೆ.

ಭಾರತದಲ್ಲಿ ಬಹುತೇಕ ಮಧ್ಯಮ ವರ್ಗದ ಜನರೇ ವಾಸಿಸುತ್ತಾರೆ. ಅವರಿಗೆ ಜೀವನದಲ್ಲಿ ಕಾರು ಖರೀದಿಸಬೇಕೆಂಬುದು ಬಹುದೊಡ್ಡ ಕನಸಾಗಿರುತ್ತದೆ. ಅದನ್ನು ಸಹಕಾರಗೊಳಿಸಲು ಪ್ರಮುಖ ದೇಶೀಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿರುವ ಟಾಟಾ, ಅತ್ಯಂತ ಕಡಿಮೆ ಬೆಲೆಗೆ ತನ್ನ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ಕಾರಣಕ್ಕೂ ಏನೋ ಟಿಯಾಗೊ ಹ್ಯಾಚ್‌ಬ್ಯಾಕ್‌ಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ.

Tata: ಕಡಿಮೆ ಬೆಲೆಯ ಟಾಟಾ ಟಿಯಾಗೊ ಕಾರಿಗೆ ನೀರಿಕ್ಷೆಗೂ ಮೀರಿದ ಬೇಡಿಕೆ: ಇಲ್ಲಿದೆ ಸಿಹಿಸುದ್ದಿ

ಕೋಲ್ಕತ್ತಾದಲ್ಲಿ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ನ CNG ರೂಪಾಂತರವನ್ನು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು 9 ತಿಂಗಳು ಕಾಯಬೇಕು. ಪೆಟ್ರೋಲ್ ವೇರಿಯೆಂಟ್ 4 ವಾರಗಳ ಬಳಿಕ ಗ್ರಾಹಕರ ಕೈ ಸೇರಲಿವೆ. ಆದರೆ, ಕಾಯುವಿಕೆ ಅವಧಿ ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿರುತ್ತದೆ. ಜೊತೆಗೆ ಈ ತಿಂಗಳು ಒಟ್ಟು ರೂ.35,000ವರೆಗೆ ರಿಯಾಯಿತಿ ಪ್ರಯೋಜನವನ್ನು ಈ ಕಾರು ಪಡೆದಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್‌ಶಿಪ್ ಸಂಪರ್ಕಿಸಿರಿ.

ಭಾರತದ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ ರೂ.5.60 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, XE, XM, XT(O), XT, ಮತ್ತು XZ+ ಎಂಬ ಐದು ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತಿದೆ. ಇದಿಷ್ಟೇ ಅಲ್ಲದೆ, ಫ್ಲೇಮ್ ರೆಡ್, ಓಪಲ್ ವೈಟ್, ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ ಹಾಗೂ ಅರಿಜೋನಾ ಬ್ಲೂ ಎಂಬ ಐದು ಬಣ್ಣಗಳಲ್ಲಿ ಲಭ್ಯವಿದ್ದು, ನಿಮಿಷ್ಟದ ಕಲರ್ ಆಯ್ದುಕೊಳ್ಳಬಹುದು.

ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ ಎಂಜಿನ್ ಬಗ್ಗೆ ಮಾತನಾಡುವುದಾದರೆ, ಇದು 1.2 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 86 PS ಗರಿಷ್ಠ ಪವರ್ ಹಾಗೂ 113Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 5 ಸ್ವೀಡ್ ಮ್ಯಾನುವಲ್ ಅಥವಾ 5 ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ.

CNG ಕಿಟ್ ಆಯ್ಕೆ ಪಡೆದಿರುವ ಟಿಯಾಗೊ ಕೊಂಚ ಕಡಿಮೆ ಕಾರ್ಯಕ್ಷಮತೆ ಹೊಂದಿದ್ದು, 73 PS ಪವರ್ ಹಾಗೂ 95 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಈ ಕಾರು, ರೂಪಾಂತರಗಳಿಗೆ ಅನುಗುಣವಾಗಿ 19.0 - 19.01 kmpl (ಪೆಟ್ರೋಲ್), 26.49 km/kg (CNG) ಮೈಲೇಜ್ ನೀಡುತ್ತದೆ.

ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ ವೈಶಿಷ್ಟ್ಯದ ಬಗ್ಗೆ ಮಾತನಾಡುವುದಾದರೆ, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಎಲ್ಇಡಿ DRLs, ಪ್ರೊಜೆಕ್ಟರ್ ಹೆಡ್‌ಲೈಟ್ಸ್, ವೈಪರ್‌ನೊಂದಿಗೆ ರೇರ್ ಡಿಫಾಗರ್, 8 ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಕೂಲ್ಡ್ ಗ್ಲೋವ್‌ಬಾಕ್ಸ್ ಸೇರಿದಂತೆ ಹಲವು ಫೀಚರ್ಸ್ ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದ ಟಿಯಾಗೊ ಹ್ಯಾಚ್‌ಬ್ಯಾಕ್‌ ಡುಯಲ್ ಫ್ರಂಟ್ ಏರ್ ಬಾಗ್ಸ್, ರೇರ್ ಪಾರ್ಕಿಂಗ್ ಸೆನ್ಸರ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಕಾರ್ನರಿಂಗ್ ಸ್ಟೆಬಿಲಿಟಿ ಕಂಟ್ರೋಲ್ ಅನ್ನು ಹೊಂದಿದೆ. ಈ ಕಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸೆಲೆರಿಯೊ, ವ್ಯಾಗನ್ ಆರ್ ಮತ್ತು ಸಿಟ್ರಸ್ ಸಿ3 ಪ್ರತಿಸ್ಪರ್ಧಿಯಾಗಿವೆ. ಟಿಯಾಗೊ ಎಲೆಕ್ಟ್ರಿಕ್ ರೂಪದಲ್ಲಿಯು ಖರೀದಿಗೆ ಲಭ್ಯವಿದೆ.

Article Published On: Thursday, June 22, 2023, 10:51 [IST]
English summary
Tata tiago waiting period increases india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+