6 ಏರ್‌ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು

ಹೊಸ ಕಾರು ಖರೀದಿಸುವವರೂ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವುಗಳು ಸೇಫ್ಟಿ ವಿಚಾರದಲ್ಲೂ ಉತ್ತಮವಾಗಿರಬೇಕು. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಬೇಕು ಎಂದು ಬಯಸುತ್ತಾರೆ. ಆರು ಏರ್ ಬಾಗ್ಸ್ ಹೊಂದಿರುವ ಹಾಗೂ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯ ಆಸುಪಾಸಿನಲ್ಲಿ ಖರೀದಿಗೆ ಸಿಗುವ ಕಾರುಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಫೇಸ್‌ಲಿಫ್ಟ್:
ಈ ಕಾರು, ಕೆಲವೇ ದಿನಗಳ ಹಿಂದೆಯಷ್ಟೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಆರು ಏರ್ ಬಾಗ್ಸ್ ಹೊಂದಿರುವ ಅತ್ಯಂತ ಕೈಗೆಟುಕುವ ಬೆಲೆಯ ಕಾರಾಗಿದೆ. ಇದರ ಟಾಪ್ ಎಂಡ್ ರೂಪಾಂತರವಾದ ಆಸ್ಟಾದಲ್ಲಿ ಈ ವೈಶಿಷ್ಟ್ಯವನ್ನು ಪಡೆದುಕೊಂಡಿದೆ. ಜೊತೆಗೆ ABS (ಆಂಟಿ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯುಶಷನ್), ISOFIX ಆಂಕಾರೇಜ್‌ಗಳು, ಹಿಲ್-ಹೋಲ್ಡ್ ಅಸಿಸ್ಟ್ ನಂತಹ ಇತರೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

6 ಏರ್‌ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು

ರೂ.7.93 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 83 PS ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸಲಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು AMT ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಸಿಗಲಿದ್ದು, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಜೊತೆಗೆ 8.0 - ಇಂಚಿನ ಟಚ್‌ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.

ಮಾರುತಿ ಸುಜುಕಿ ಬಲೆನೊ:
ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಬಲೆನೊ ಅತ್ಯುನ್ನತ ಸುರಕ್ಷತಾ ಮಾನದಂಡ ಹೊಂದಿರುವ ಕಾರಾಗಿದ್ದು, 5 ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿದೆ. ಬಲೆನೊದ ಜಿಟಾ (ZETA) ರೂಪಾಂತರವು ಸುರಕ್ಷತೆ ದೃಷ್ಟಿಯಿಂದ ಆರು ಏರ್ ಬಾಗ್ಸ್ ಪಡೆದುಕೊಂಡಿದೆ. ಜೊತೆಗೆ EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯುಶಷನ್), ABS (ಆಂಟಿ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಿಲ್-ಹೋಲ್ಡ್ ಅಸಿಸ್ಟ್, ISOFIX ಆಂಕಾರೇಜ್‌ಗಳು, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾದಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

6 ಏರ್‌ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು

ಈ ಕಾರು ರೂ.8.33 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯಲಿದೆ. ಇದರಲ್ಲಿ 1.2-ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಬಳಕೆ ಮಾಡಲಾಗಿದ್ದು, ಇದು 90 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿಕೊಂಡಿದೆ. 5-ಸ್ವೀಡ್ ಮ್ಯಾನುಯಲ್ ಅಥವಾ 5-ಸ್ವೀಡ್ AMTಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದ್ದು, 22.35 kmpl ಇಂಧನ ದಕ್ಷತೆಯನ್ನು ಹೊಂದಿದೆ.

ಹ್ಯುಂಡೈ ಔರಾ:
ಇದು ಕೂಡ ಕೈಗೆಟುಕುವ ಬೆಲೆಯಲ್ಲಿ ದೊರೆಯುವ ಸೆಡಾನ್ ಆಗಿದ್ದು, ಹ್ಯುಂಡೈ ಔರಾದ ಟಾಪ್ ಎಂಡ್ ರೂಪಾಂತರವಾದ SX (O) ಆರು ಏರ್ ಬಾಗ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದ್ದು, ರೂ.8.58 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕೆಲದಿನಗಳ ಹಿಂದೆಯಷ್ಟೇ 'ಔರಾ ಫೇಸ್‌ಲಿಫ್ಟ್' ಆವೃತ್ತಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಇದು 1.2-ಲೀಟರ್ ಪೆಟ್ರೋಲ್ ಎಂಜಿನ್‌ ಹೊಂದಿದ್ದು, 83 hp ಪವರ್ ಮತ್ತು 113.8 Nm ಪೀಕ್ ಟಾರ್ಕ್ ಉತ್ಪಾದಿಸಲಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ AMT ಗೇರ್‌ಬಾಕ್ಸ್‌ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ.

6 ಏರ್‌ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು

ಕಿಯಾ ಸಾನೆಟ್:
ಭಾರತೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಿಡ್ ಸೈಜ್ ಎಸ್‌ಯುವಿ ಕಿಯಾ ಸಾನೆಟ್ ಕೂಡ ಆರು ಏರ್ ಬಾಗ್ಸ್ ನೊಂದಿಗೆ ಖರೀದಿಗೆ ಲಭ್ಯವಿದ್ದು, ರೂ.10.69 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗಲಿದ್ದು. ಇತರೆ ಸುರಕ್ಷತಾ ವೈಶಿಷ್ಟ್ಯಗಳಾದ ABS, EBD, ESC, ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್ಮೆಂಟ್ (VSM) ಹಾಗೂ ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS) ಅನ್ನು ಪಡೆದಿದೆ. 1-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್, 1.2-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಮಹೀಂದ್ರಾ XUV300:
ದೇಶದ ಪ್ರಮುಖ ವಾಹನ ತಯಾರಕ ಕಂಪನಿ ಮಹೀಂದ್ರಾದ XUV300 ಕೂಡ ಆರು ಏರ್ ಬಾಗ್ಸ್ ಆಯ್ಕೆಯಲ್ಲಿ ರೂ.
12.38 ಲಕ್ಷ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಸಿಗಲಿದೆ. ABS, EBD, ಡಿಸ್ಕ್ ಬ್ರೇಕ್ಸ್, ಕಾರ್ನರ್ ಬ್ರೇಕಿಂಗ್ ಕಂಟ್ರೋಲ್, ರೈನ್-ಸೆನ್ಸಿಂಗ್ ವೈಪರ್ಸ್, ಫ್ರಂಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ನಂತಹ ಇತರೆ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿರುವ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 PS ಗರಿಷ್ಠ ಪವರ್ ಹಾಗೂ 200 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಡೀಸೆಲ್ ಎಂಜಿನ್ 117 PS ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

Most Read Articles

Kannada
English summary
Top five most affordable cars six airbags details kannada
Story first published: Friday, February 3, 2023, 14:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X