Popular Cars: ಪಂಚರಾಜ್ಯ ಚುನಾವಣೆ.. ಹಲವರು ಶಾಸಕರಾಗಲೂ ಈ ಕಾರುಗಳೇ ಕಾರಣ!

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ, ಒಂದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣೆ ಹಿಡಿದಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು, ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿದ ಜನಪ್ರಿಯ ಕಾರು (Popular Cars) ಮಾದರಿಗಳ ಕುರಿತು ಇಲ್ಲಿ ವಿವರಿಸಿದ್ದೇವೆ.

ಮೊದಲಿಗೆ ಟೊಯೊಟಾ ಫಾರ್ಚುನರ್ (Toyota Fortuner) ಬಗ್ಗೆ ಮಾತನಾಡೋಣ. ಅದ್ಬುತವಾಗಿರುವ ಈ ಕಾರನ್ನು ಹಲವಾರು ನಾಯಕರು, ತಮ್ಮ ಕ್ಷೇತ್ರ ವ್ಯಾಪ್ತಿಯ ಊರುಗಳನ್ನು ಸುತ್ತಿ ಚುನಾವಣಾ ಪ್ರಚಾರ ಮಾಡಲು ಉಪಯೋಗಿಸಿದ್ದಾರೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚುನರ್, ರೂ.33.43 ಲಕ್ಷದಿಂದ ರೂ.51.44 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ಈ ಕಾರು, 10.0 kmpl ಮೈಲೇಜ್ ನೀಡುತ್ತದೆ.

Popular Cars: ಪಂಚರಾಜ್ಯ ಚುನಾವಣೆ.. ಹಲವರು ಶಾಸಕರಾಗಲೂ ಈ ಕಾರುಗಳೇ ಕಾರಣ!

ಫಾರ್ಚುನರ್ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಸಿಗಲಿದ್ದು, 2WD (ಟೂ ವೀಲ್ ಡ್ರೈವ್)/ 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. 8 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್ ಬ್ಯಾಗ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಒಳಗೊಂಡಂತೆ ವಿವಿಧ ಫೀಚರ್ಸ್ ಪಡೆದಿದೆ.

ಪಂಚರಾಜ್ಯ ಚುನಾವಣಾ ವೇಳೆಯಲ್ಲಿ ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಎಂಪಿವಿಯನ್ನು ಹಲವು ನಾಯಕರು ಬಳಕೆ ಮಾಡಿದ್ದನ್ನು ನೋಡಬಹುದು. ದೇಶೀಯ ಮಾರುಕಟ್ಟೆಯಲ್ಲಿ ಇನ್ನೋವಾ ಕ್ರಿಸ್ಟಾ ರೂ.19.99 ಲಕ್ಷದಿಂದ ರೂ.26.05 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಈ ಎಂಪಿವಿ ಸಿಗಲಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Popular Cars: ಪಂಚರಾಜ್ಯ ಚುನಾವಣೆ.. ಹಲವರು ಶಾಸಕರಾಗಲೂ ಈ ಕಾರುಗಳೇ ಕಾರಣ!

ಈ ಚುನಾವಣೆಯಲ್ಲಿ ಕಾಣಿಸಿಕೊಂಡ ಮತ್ತೊಂದು ಕಾರು ಟೊಯೊಟಾ ಇನ್ನೋವಾ ಹೈಕ್ರಾಸ್. ಇದು, ರೂ.18.82 ಲಕ್ಷದಿಂದ 30.26 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 2.0-ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರಿಗೆ ಸಿಗುವ ಈ ಕಾರು, 21 kmpl ಮೈಲೇಜ್ ಕೊಡುತ್ತದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಪ್ರಮುಖವಾಗಿ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಅನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.

Popular Cars: ಪಂಚರಾಜ್ಯ ಚುನಾವಣೆ.. ಹಲವರು ಶಾಸಕರಾಗಲೂ ಈ ಕಾರುಗಳೇ ಕಾರಣ!

ಮಹೀಂದ್ರಾ ಸ್ಕಾರ್ಪಿಯೋ-ಎನ್ (Mahindra Scorpio-N) ಕೂಡ ಜನಪ್ರಿಯ ಎಸ್‌ಯುವಿಯಾಗಿದ್ದು, ಹಲವು ನಾಯಕರು ಚುನಾವಣಾ ಪ್ರಚಾರದ ವೇಳೆಯಲ್ಲಿ ಬಳಕೆ ಮಾಡಿದ್ದರು. ಸ್ಕಾರ್ಪಿಯೋ ರೂ.13.26 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ಈ ಕಾರು, ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಚುನಾವಣೆಯಲ್ಲಿ ಮಹೀಂದ್ರಾ ಬೊಲೆರೊ (Mahindra Bolero) ಕೂಡ ದೊಡ್ಡಮಟ್ಟದಲ್ಲಿ ಸದ್ದು ಮಾಡಿತು. ಹಲವಾರು ಈ ಕಾರನ್ನು ಬಳಕೆ ಮಾಡಿದ್ದಾರೆ. ಬೊಲೆರೊ ರೂಪಾಂತರಗಳು ರೂ.9.78 ಲಕ್ಷದಿಂದ ರೂ.10.79 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿವೆ. 1.5-ಲೀಟರ್ ಟರ್ಬೊ-ಡೀಸೆಲ್ ಎಂಜಿನ್‌ ಹೊಂದಿರುವ ಬೊಲೆರೊ 75 bhp ಪವರ್ ಹಾಗೂ 210 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

More from DriveSpark

Article Published On: Monday, December 4, 2023, 13:33 [IST]
English summary
Toyota fortuner innova crysta hycross scorpio like popular cars use in election 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+