ಭಾರತದಲ್ಲಿ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಬೆಲೆ ಹೆಚ್ಚಿಸಿದ ಟೊಯೊಟಾ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ತನ್ನ ನವೀಕರಿಸಿದ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಮಾರ್ಚ್ 15 ರಂದು ಬಿಡುಗಡೆಗೊಳಿಸಿತ್ತು. ಇದೀಗ ಟೊಯೊಟಾ ಕಂಪನಿಯು ತನ್ನ ಈ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಬೆಲೆಯನ್ನು ಹೆಚ್ಚಿಸಿದೆ.

ಟೊಯೊಟಾ ಕಂಪನಿಯು ಗ್ಲಾಂಝಾ ಕಾರಿನ ಬೆಲೆಯನ್ನು ರೂ.12,000 ವರೆಗೆ ಹೆಚ್ಚಿಸಿದೆ. ಬೆಲೆ ಏರಿಕೆಯು ಗ್ಲಾಂಝಾ ಕಾರಿನ ಎಲ್ಲಾ ರೂಪಾಂತರಗಳ ಮೇಲೆ ಪರಿಣಾಮ ಬೀರಿದೆ. ಟೊಯೊಟಾ ಗ್ಲಾಂಝಾ ಕಾರಿನ ಪೆಟ್ರೋಲ್ ರೂಪಾಂತರದ ಬೆಲೆಯು ರೂ.12,000 ರಷ್ಟು ಹೆಚ್ಚಾದರೆ, ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಬೈ-ಫ್ಯಿಯೊಲ್ (ಪೆಟ್ರೋಲ್ ಮತ್ತು ಸಿಎನ್‌ಜಿ) ರೂಪಾಂತರಗಳ ಬೆಲೆಗಳನ್ನು ರೂ 2,000 ವರೆಗೆ ಹೆಚ್ಚಿಸಲಾಗಿದೆ. ಮ್ಯಾನ್ಯುವಲ್ ಗೇರ್ ಬಾಕ್ಸ್ ಹೊಂದಿರುವ ಟೊಯೊಟಾ ಗ್ಲಾಂಝಾ ಹ್ಯಾಚ್‌ಬ್ಯಾಕ್‌ನ ಪೆಟ್ರೋಲ್ ರೂಪಾಂತರಗಳ ಬೆಲೆಗಳನ್ನು ರೂ.7,000 ವರೆಗೆ ಹೆಚ್ಚಾಗಿದೆ.

ಭಾರತದಲ್ಲಿ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಬೆಲೆ ಹೆಚ್ಚಿಸಿದ ಟೊಯೊಟಾ

ಬೆಲೆ ಏರಿಕೆಯ ಬಳಿಕ, ಟೊಯೊಟಾ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಪ್ರಾರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.6.66 ಲಕ್ಷವಾಗಿದೆ. ಈ ಗ್ಲಾಂಝಾ ಕಾರು ಕಳೆದ ವರ್ಷ ಎಕ್ಸ್ ಶೋರೂಂ ಪ್ರಕಾರ ರೂ.6.39 ಲಕ್ಷ ಬೆಲೆಗೆ ಬಿಡುಗಡೆಗೊಂಡಿತು. ಈ ಟೊಯೊಟಾ ಗ್ಲಾಂಝಾ ಕಾರು ಮಾರುತಿ ಸುಜುಕಿ ಬಲೆನೊ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದೆ. ಈ ಟೊಯೊಟಾ ಪ್ರೀಮಿಯಂ ಗ್ಲಾಂಝಾ ಕಾರು ಹಿಂದಿನ ಮಾದರಿಗಿಂತ ಹೆಚ್ಚು ಸ್ಪೋರ್ಟಿಯರ್ ವಿನ್ಯಾಸದ ಶೈಲಿಯನ್ನು ಹೊಂದಿದೆ.

ಈ ಟೊಯೊಟಾ ಗ್ಲಾಂಝಾ ಕಾರಿನಲ್ಲಿ 1.2-ಲೀಟರ್ ಡ್ಯುಯಲ್-ಜೆಟ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್‌ ಸಿಎನ್‌ಜಿ ಇಂಧನದೊಂದಿಗೆ, 76 ಬಿಹೆಚ್‍ಪಿ ಪವರ್ ಮತ್ತು 98.5 ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಟೊಯೊಟಾ ಗ್ಲಾಂಝಾ ಇ-ಸಿಎನ್‌ಜಿ 5-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ, ಇನ್ನು ಈ ಟೊಯೊಟಾ ಗ್ಲಾಂಝಾ ಕಾರಿನ ವಿನ್ಯಾಸದ ಬಗ್ಗೆ ಹೆಳುವುದಾದರೆ, ಈ ಕಾರಿನ ಮುಂಭಾಗದ ಹೊಸ ವಿನ್ಯಾಸ ಶೈಲಿಯೊಂದಿಗೆ ಬಂದಿದೆ. ಇದು ಟೊಯೊಟಾದ ಜಾಗತಿಕ ಕಾರುಗಳಿಗೆ ಅನುಗುಣವಾಗಿದ್ದು, ಕ್ಯಾಮ್ರಿ ತರಹದ ಮುಂಭಾಗದ ಗ್ರಿಲ್ ಮತ್ತು ಬಂಪರ್, ಹೊಸ ಕ್ರೋಮ್ ಮತ್ತು ಎಲ್-ಆಕಾರದ ಎಲ್ಇಡಿ ಡಿಆರ್ಎಲ್ (ಡೇಟೈಮ್ ರನ್ನಿಂಗ್ ಲ್ಯಾಂಪ್) ಗಳನ್ನು ಒಳಗೊಂಡಿದೆ.

ಈ ಗ್ಲಾಂಝಾ ಪ್ರೀಮಿಯಂ ಕಾರಿನ ಹಿಂಭಾಗವು ಸ್ವಲ್ಪ ಪರಿಷ್ಕೃತ ಬಂಪರ್ ಮತ್ತು ಟೈಲ್-ಲೈಟ್‌ಗಾಗಿ ಹೊಸ ಇನ್‌ಸರ್ಟ್‌ಗಳೊಂದಿಗೆ ಬರುತ್ತದೆ. ಇದು ಹೊಸದಾಗಿ ಟೊಯೊಟಾ ಗ್ಲಾಂಝಾ ವಿನ್ಯಾಸಗೊಳಿಸಲಾದ 16-ಇಂಚಿನ ವ್ಹೀಲ್ ಗಳನ್ನು ಹೊಂದಿದೆ. ಇನ್ನು ಈ ಹೊಸ ಗ್ಲಾಂಝಾ ಕಾರು ರೆಡ್, ಬ್ಲೂ, ಗ್ರೇ, ವೈಟ್ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದ್ದು, ಗ್ರಾಹಕರು ಇದರಲ್ಲಿ ತಮ್ಮ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಇನ್ನು ಗ್ಲಾಂಝಾ ಹ್ಯಾಚ್‌ಬ್ಯಾಕ್ ಕಾರಿನ ಕ್ಯಾಬಿನ್ ಹೊಸ ಬಲೆನೊ ಮಾದರಿಗೆ ಹೋಲುವಂತಿದೆ.

ಈ ಟೊಯೊಟಾ ಗ್ಲಾಂಝಾ ಕಾರಿನ ವೈಶಿಷ್ಟ್ಯಗಳ ವಿಷಯದಲ್ಲಿ, ಈ ಕಾರಿನಲ್ಲಿ ಮಲ್ಟಿ-ಫಂಕ್ಷನಲ್ ಲೆದರ್ ಸುತ್ತಿದ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್, ನವೀಕರಿಸಿದ ಇನ್ಸ್ಟ್ರುಮೆಂಟ್ ಕನ್ಸೋಲ್, ಸೆಂಟರ್ ಕನ್ಸೋಲ್‌ನಲ್ಲಿ ಹೊಸ ಏರ್-ಕಾನ್ ವೆಂಟ್‌ಗಳು ಮತ್ತು ಹಿಂಭಾಗ ಆಟೋಮ್ಯಾಟಿಕ್ ಎಸಿಯನ್ನು ಒಳಗೊಂಡಿವೆ. ಇದರೊಂದಿಗೆ Apple CarPlay ಮತ್ತು Android Auto, ನ್ಯಾವಿಗೇಶನ್ ಮತ್ತು ವಾಯ್ಸ್ ಕಾಮೆಂಡ್ ಗಳೊಂದಿಗೆ ದೊಡ್ಡ 9-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಬಂದಿದೆ.

ಈ ಕಾರಿನಲ್ಲಿ60-ಡಿಗ್ರಿ ಕ್ಯಾಮೆರಾ, ಹೆಡ್ಸ್-ಅಪ್ ಡಿಸ್ಪ್ಲೇ (HUD), ವಾಯ್ಸ್ ಅಸಿಸ್ಟ್ ಫೈಂಡ್ ಮೈ ಕಾರ್ ವೈಶಿಷ್ಟ್ಯ ಮತ್ತು ರಿಮೋಟ್ ಲಾಕ್ ಮತ್ತು ಅನ್‌ಲಾಕ್ ಕಾರ್ಯಗಳಂತಹ ವೈಶಿಷ್ಟ್ಯಗಳೊಂದಿಗೆ ಕನೆಕ್ಟಿವಿಟಿ ಕಾರ್ ತಂತ್ರಜ್ಞಾನಗಳನ್ನು ಒಳಗೊಂಡಿವೆ. ಈ ಹ್ಯಾಚ್‌ಬ್ಯಾಕ್ ನಲ್ಲಿ ಸುರಕ್ಷೆತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು, ಇದಕ್ಕಾಗಿ ಆರು ಏರ್‌ಬ್ಯಾಗ್‌ಗಳು, ಕ್ರೂಸ್ ಕಂಟ್ರೋಲ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎತ್ತರ ಹೊಂದಾಣಿಕೆಯ ಡ್ರೈವರ್ ಸೀಟ್, ಇಬಿಡಿಯೊಂದಿಗೆ ಎಬಿಎಸ್ ಇತ್ಯಾದಿಗಳಂತಹ ಉನ್ನತ-ಮಟ್ಟದ ಸುರಕ್ಷತಾ ವೈಶಿಷ್ಟ್ಯಗಳನ್ನು ನೀಡಿದೆ.

Most Read Articles

Kannada
Read more on ಟೊಯೊಟಾ toyota
English summary
Toyota glanza hatchback price hiked updated prices details in kannada
Story first published: Monday, February 6, 2023, 14:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X