Toyota: ಜನಪ್ರಿಯ ಟೊಯೊಟಾ ಇನ್ನೋವಾ ಕ್ರಿಸ್ಟಾ ಬಗ್ಗೆ ಹೊರಬಿತ್ತು ಮಹತ್ವದ ಮಾಹಿತಿ

ಭಾರತದ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ (Toyota Innova) ಸರಣಿ ಕಾರುಗಳು ಭರ್ಜರಿ ಬೇಡಿಕೆ ಹೊಂದಿವೆ. ಅದರಲ್ಲೂ ಕ್ರಿಸ್ಟಾ (Crysta) ಎಂಪಿವಿಗೆ ಪ್ರತ್ಯೇಕ ಅಭಿಮಾನಿ ಬಳಗವಿದೆ. ಸದ್ಯ, ಸೆಪ್ಟೆಂಬರ್‌ ತಿಂಗಳಲ್ಲಿ 'ಇನ್ನೋವಾ ಕ್ರಿಸ್ಟಾ' ಹೊಂದಿರುವ ಕಾಯುವಿಕೆ ಅವಧಿ (waiting period) ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಸ್ತುತ, ದೇಶದ ವಿವಿಧ ಭಾಗಗಳಲ್ಲಿ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿಯನ್ನು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು 30 ವಾರಗಳು ಕಾಯಬೇಕು. ಆದರೆ, ರಾಜ್ಯದಿಂದ ರಾಜ್ಯಕ್ಕೆ ಈ ಕಾಯುವಿಕೆ ಅವಧಿಯಲ್ಲಿ ವ್ಯತ್ಯಾಸವಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಡೀಲರ್ ಶಿಪ್ ಸಂಪರ್ಕಿಸಿರಿ. ಅಲ್ಲಿ ನಿಮಗೆ ಖಚಿತ ವಿವರಗಳು ಲಭ್ಯವಾಗುತ್ತದೆ.

Toyota: ಜನಪ್ರಿಯ ಟೊಯೊಟಾ ಇನ್ನೋವಾ ಕ್ರಿಸ್ಟಾ ಬಗ್ಗೆ ಹೊರಬಿತ್ತು ಮಹತ್ವದ ಮಾಹಿತಿ

ಕಳೆದ ಮಾರ್ಚ್ ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿಯನ್ನು ಬಿಡುಗಡೆ ಮಾಡಲಾಗಿತ್ತು. ಈ ಕಾರು, ರೂ.19.99 ಲಕ್ಷ ಆರಂಭಿಕ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, 7 - 8 ಆಸನ ಆಯ್ಕೆ ವ್ಯವಸ್ಯೆ ಹಾಗೂ ಜಿಎಕ್ಸ್, ವಿಎಕ್ಸ್ ಹಾಗೂ ಝಡ್ಎಕ್ಸ್ ರೂಪಾಂತರ ಆಯ್ಕೆಯಲ್ಲಿ ಸಿಗುತ್ತದೆ. ಕಳೆದ ತಿಂಗಳು ಕಂಪನಿಯು ಇದರ ಬೆಲೆಯನ್ನು ರೂ.37,000 ಹೆಚ್ಚಳಗೊಳಿಸಿತ್ತು.

ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಕೇವಲ ಒಂದು ಎಂಜಿನ್ ಆಯ್ಕೆಯಲ್ಲಿ ಮಾತ್ರ ದೊರೆಯಲಿದ್ದು, ಇದರ 2.4 - ಲೀಟರ್ ಡೀಸೆಲ್ ಎಂಜಿನ್ 148 bhp ಗರಿಷ್ಠ ಪವರ್ ಹಾಗೂ 343 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಈ ಎಂಪಿವಿ, ವೈಟ್ ಪರ್ಲ್ ಕ್ರಿಸ್ಟಲ್ ಶೈನ್, ಸೂಪರ್ ವೈಟ್, ಸಿಲ್ವರ್ ಸೇರಿದಂತೆ 5 ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಗೆ, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 8 ವೇ ಪವರ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ರೇರ್ ಎಸಿ ವೆಂಟ್ಸ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ಅತ್ಯಾಧುನಿಕ ಫೀಚರ್ಸ್ ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಅತ್ಯುತ್ತಮವಾಗಿದ್ದು, 7 ಏರ್‌ಬ್ಯಾಗ್ಸ್, ABS (ಆಂಟಿಲಾಕಿಂಗ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಬ್ರೇಕ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಮಹೀಂದ್ರಾ ಮರಾಜ್ಜೊ ಮತ್ತು ಕಿಯಾ ಕ್ಯಾರೆನ್ಸ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಇನ್ನೋವಾ ಕ್ರಿಸ್ಟಾದಂತೆ ಭಾರೀ ಡಿಮ್ಯಾಂಡ್ ಹೊಂದಿರುವ ಟೊಯೊಟಾ ಇನ್ನೋವಾ ಹೈಕ್ರಾಸ್ ಬಗ್ಗೆ ಮಾತನಾಡೋಣ. ಈ ಎಂಪಿವಿ, ರೂ.18.82 ಲಕ್ಷದಿಂದ ರೂ.30.26 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. 2- ಲೀಟರ್ ಪೆಟ್ರೋಲ್ ಹಾಗೂ 2 - ಲೀಟರ್ ಪೆಟ್ರೋಲ್ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 16.13 kmpl ರಿಂದ 23.24 kmpl ಮೈಲೇಜ್ ನೀಡುತ್ತದೆ.

ಟೊಯೊಟಾ ಇನ್ನೋವಾ ಹೈಕ್ರಾಸ್, 10 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 360 ಡಿಗ್ರಿ ಕ್ಯಾಮೆರಾ, 6 ಏರ್‌ಬ್ಯಾಗ್ಸ್, ABS (ಆಂಟಿಲಾಕಿಂಗ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 22, 2023, 17:28 [IST]
English summary
Toyota innova crysta september waiting period revealed
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+