Toyota: ದೊಡ್ಡ ಕಾರು ಟೊಯೊಟಾ ಇನ್ನೋವಾಗೆ ಮನಸೋತ ಗ್ರಾಹಕ, ತುಂಬಿತುಳುಕುತ್ತಿವೆ ಶೋರೂಂ!
ಭಾರತದಲ್ಲಿ ಟೊಯೊಟಾ (Toyota)ದ ಜನಪ್ರಿಯ ಇನ್ನೋವಾ (Innova) ಸರಣಿ ಎಂಪಿವಿ ದಶಕದಿಂದ ಜನಪ್ರಿಯತೆಗಳಿಸಿದ್ದು, ಇವುಗಳ ವಿನ್ಯಾಸ ಹಾಗೂ ವೈಶಿಷ್ಟ್ಯಕ್ಕೆ ಮನಸೋಲದವರೇ ಇಲ್ಲ. ಈಗಲೂ ಹೆಚ್ಚಿನ ಗ್ರಾಹಕರು ಇನ್ನೋವಾ ಎಂಪಿವಿಗಳು ಬುಕ್ಕಿಂಗ್ ಮಾಡುತ್ತಿದ್ದು, ದೀರ್ಘಾವಧಿ ಕಾಯುವಿಕೆ ಅವಧಿಯನ್ನು ಹೊಂದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ನವೆಂಬರ್ 1ಕ್ಕೆ ಅನ್ವಯವಾಗುವಂತೆ ಟೊಯೊಟಾ ಇಂಡಿಯಾ (Toyota India) ಇನ್ನೋವಾ ಸರಣಿ ಎಂಪಿವಿಗಳ ಕಾಯುವಿಕೆ ಅವಧಿ (Waiting Period)ಯನ್ನು ಬಹಿರಂಗಪಡಿಸಿದೆ. ನೀವು ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಕಾರನ್ನು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು 7 ತಿಂಗಳು ಕಾಯಬೇಕು. ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಪೆಟ್ರೋಲ್ ರೂಪಾಂತರಗಳು ಡೆಲೆವರಿಯಾಗಲು 6 ತಿಂಗಳು ಬೇಕು.

ಟೊಯೊಟಾ ಇನ್ನೋವಾ ಹೈಕ್ರಾಸ್ ಹೈಬ್ರಿಡ್ (hybrid) ವೇರಿಯೆಂಟ್ ಗರಿಷ್ಠ ಕಾಯುವಿಕೆ ಅವಧಿಯನ್ನು ಒಳಗೊಂಡಿದ್ದು, 14 - 15 ತಿಂಗಳೊಳಗೆ ಗ್ರಾಹಕರ ಕೈಸೇರುತ್ತದೆ. ಬೇಡಿಕೆ ಹೆಚ್ಚಿರುವ ಕಾರಣ, ಝಡ್ಏಕ್ಸ್ ಹಾಗೂ ಝಡ್ಏಕ್ಸ್ (ಒ) ಮಾದರಿಗಳ ಬುಕ್ಕಿಂಗ್ ಅನ್ನು ಸ್ಥಗಿತಗೊಳಿಸಲಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ ರೂ.18.82 ಲಕ್ಷದಿಂದ 30.26 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ.
ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ಎರಡು ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. ಅವುಗಳೆಂದರೆ, 2.0 ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0 ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್. ಜೊತೆಗೆ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, 21 kmpl ಮೈಲೇಜ್ ನೀಡುತ್ತದೆ.

7, 8 ಆಸನ ಆಯ್ಕೆಯಲ್ಲಿ ದೊರೆಯುವ ಈ ಎಂಪಿವಿ ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗಲಿದ್ದು, 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತೆಯ ದೃಷ್ಟಿಯಿಂದ ಕೂಡ ಟೊಯೊಟಾ ಇನ್ನೋವಾ ಹೈಕ್ರಾಸ್ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ಫ್ರಂಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಬಗ್ಗೆ ಹೇಳುವುದಾದರೆ, ಇದು ರೂ.19.99 ಲಕ್ಷದಿಂದ ರೂ.26.05 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿದಾರರಿಗೆ ಸಿಗುತ್ತದೆ. ಜಿಎಕ್ಸ್, ವಿಎಕ್ಸ್ ಹಾಗೂ ಝಡ್ಏಕ್ಸ್ ರೂಪಾಂತರದ ಆಯ್ಕೆಯಲ್ಲಿ ದೊರೆಯಲಿದ್ದು, ಕೇವಲ 2.4 - ಲೀಟರ್ ಡಿಸೇಲ್ ಎಂಜಿನ್ ಮಾತ್ರ ಹೊಂದಿದ್ದು, 150 PS ಗರಿಷ್ಠ ಪವರ್, 343 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮಾನ್ಯವಲ್ ಗೇರ್ ಬಾಕ್ಸ್ ಪಡೆದಿದೆ.
ಇನ್ನೋವಾ ಕ್ರಿಸ್ಟಾ ಭರಪೂರ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, , 8-ವೇ ಪವರ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ರೇರ್ ಎಸಿ ವೆಂಟ್ಸ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ ಅನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್ ಇದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications