TOYOTA ಇನ್ನೋವಾ ಹೈಕ್ರಾಸ್‌ನ Maruti Suzuki ವರ್ಷನ್ ಕೇವಲ 2 ತಿಂಗಳಲ್ಲಿ ಪರಿಚಯ: ಧೂಳೆಬ್ಬಿಸುವುದು ಪಕ್ಕಾ!
ಭಾರತದ ಮಾರುಕಟ್ಟೆಯಲ್ಲಿ ಟೊಯೊಟಾ ಕಂಪನಿಯ ಇನ್ನೋವಾ ಸರಣಿಯ ಕಾರುಗಳು ಭಾರೀ ಜನಪ್ರಿಯತೆಯನ್ನು ಗಳಿಸಿವೆ. ಮಾರುತಿ ಸುಜುಕಿ ಹಾಗೂ ಟೊಯೊಟಾ ಪಾಲುದಾರಿಕೆ ಹೊಂದಿರುವುದು ಗೊತ್ತೇ ಇದೆ. ಅದರ ಭಾಗವಾಗಿ ಮುಂಬರುವ ಒಂದೆರಡು ತಿಂಗಳಲ್ಲಿ ಇನ್ನೋವಾ ಹೈಕ್ರಾಸ್ ಆಧಾರಿತ ಎಂಪಿವಿಯನ್ನು ಪರಿಚಯಿಸಲು ಮಾರುತಿ ಸುಜುಕಿ ತಯಾರಿ ನಡೆಸಿದೆ.
ಬುಧವಾರವಷ್ಟೇ ಹೈಬ್ರಿಡ್ ಎಂಜಿನ್ ಆಧಾರಿತ ಪ್ರೀಮಿಯಂ ಎಂಪಿವಿ ವಿಭಾಗಕ್ಕೆ ಪ್ರವೇಶಿಸಲಾಗುವುದು ಎಂದು ಕಂಪನಿ ಘೋಷಿಸಿದ್ದು, ಮುಂದಿನ ಎರಡು ತಿಂಗಳಲ್ಲಿಯೇ ಟೊಯೊಟಾ ಇನೋವಾ ಆಧಾರಿತ ಎಂಪಿವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಾಗುವುದು ಎಂದು ಹೇಳಿದೆ. ಸದ್ಯ, ಇನ್ನೋವಾ ಹೈಕ್ರಾಸ್ ಎಂಪಿವಿಯ ಹಲವು ರೂಪಾಂತರಗಳು ಹೈಬ್ರಿಡ್ ಎಂಜಿನ್ ಹೊಂದಿದ್ದು, ಇದರಿಂದ ಅವುಗಳ ಕಾರ್ಯಕ್ಷಮತೆಯು ಅತ್ಯುತ್ತಮವಾಗಿದೆ.

ಮುಂಬರಲಿರುವ ಇನ್ನೋವಾ ಹೈಕ್ರಾಸ್ ಆಧಾರಿತ ಮಾರುತಿ ಸುಜುಕಿಯ ಪ್ರೀಮಿಯಂ ಎಂಪಿವಿಗೆ ಭಾರತದಲ್ಲಿ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿಯಾಗಬಹುದು. ಜೊತೆಗೆ ಕಂಪನಿಯ ಪೋರ್ಟ್‌ಫೋಲಿಯೊವನ್ನು ಮತ್ತಷ್ಟು ಬಲಪಡಿಸಲು ಸಾಧ್ಯವಾಗುತ್ತದೆ. ಹೊಸ ಎಂಪಿವಿಯನ್ನು ಸಹ 3 ರೋ, 7 ಆಸನಗಳ ಆಯ್ಕೆಯಲ್ಲಿ ಖರೀದಿಗೆ ಸಿಗುವ ಸಾಧ್ಯತೆಯಿದ್ದು, ದೇಶಾದ್ಯಂತ ನೆಕ್ಸಾ ಡೀಲರ್ ಶಿಪ್ ಮೂಲಕ ಸೇಲ್ ಮಾಡುವ ನೀರಿಕ್ಷೆಯಿದೆ. ಬೆಲೆಯು ಸ್ಪರ್ಧಾತ್ಮಕವಾಗಿರಲಿದೆ.
ಆದರೆ, ಮಾರುತಿ ಸುಜುಕಿಯ ನೂತನ ಎಂಪಿವಿ ಟೊಯೊಟಾ ಇನ್ನೋವಾ ಹೈಕ್ರಾಸ್ ಆಧಾರಿತವಾಗಿರಲಿದೆ ಎಂದು ಹೇಳಲಾಗಿವುದು ಬಿಟ್ಟರೆ ಪವರ್‌ಟ್ರೇನ್, ವೈಶಿಷ್ಟ್ಯ ಹಾಗೂ ವಿನ್ಯಾಸದ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಟೊಯೊಟಾ ಇನ್ನೋವಾ ಹೈಕ್ರಾಸ್ ಬಗ್ಗೆ ಒಂದಷ್ಟು ವಿಚಾರಗಳನ್ನು ಹೇಳುವುದಾದರೆ, ಇದು ರೂ.18.30 ಲಕ್ಷದಿಂದ ರೂ.28.97 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.
ಇನ್ನೋವಾ ಹೈಕ್ರಾಸ್ ಪವರ್‌ಟ್ರೇನ್ ಬಗ್ಗೆ ಮಾತನಾಡುವುದಾದರೆ, ಇದರ 2.0 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 174 PS ಪವರ್, 205 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 2.0 ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ 186 PS ಗರಿಷ್ಠ ಪವರ್ ಹಾಗೂ 206 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, e-CVT ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ವೈಶಿಷ್ಟ್ಯ ಹಾಗೂ ಮೈಲೇಜ್ ಬಗ್ಗೆ ಹೇಳುವುದಾದರೆ, 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ಸನ್‌ರೂಫ್, ಫೋನ್ ಚಾರ್ಜಿಂಗ್, 360 ಡಿಗ್ರಿ ಕ್ಯಾಮೆರಾ, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆಂಟ್ ಸಿಸ್ಟಮ್) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದ್ದು, 21 kmpl ಮೈಲೇಜ್ ನೀಡಲಿದೆ.
ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಸ್ಟ್ರಾಂಗ್ ಹೈಬ್ರಿಡ್ ರೂಪಾಂತರಗಳಿಗೆ ಬೇಡಿಕೆ ಎಷ್ಟಿದೆ ಅಂದ್ರೆ, ಇವತ್ತು ಬುಕಿಂಗ್ ಮಾಡಿದರೂ ವಿತರಣೆ ವರ್ಷಗಳೇ ಕಾಯಬೇಕಾಗಿದೆ. ಇನ್ನು, ಮಾರುತಿ ಸುಜುಕಿ ಹಾಗೂ ಟೊಯೊಟಾ ಕಂಪನಿಗಳು ಪಾಲುದಾರಿಕೆ ಹೊಂದಿರುವುದರಿಂದ ನೂತನ ಎಂಪಿವಿ ಬಹುತೇಕ ಇನ್ನೋವಾದಂತೆಯೇ ವೈಶಿಷ್ಟ್ಯ ಹಾಗೂ ಎಂಜಿನ್ ಹೊಂದಿರುವ ಸಾಧ್ಯತೆ ಇದ್ದು, ಆ ಬಗ್ಗೆ ಇನ್ನೆರಡು ತಿಂಗಳಲ್ಲಿ ಸ್ಪಷ್ಟ ಮಾಹಿತಿ ಸಿಗಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications