Toyota: ನಿಮಗೆ ಗೊತ್ತಾ.. ಕರ್ನಾಟಕದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ ಖ್ಯಾತಿ ಎಷ್ಟಿದೆ ಅಂತ!
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಗೆ ಸಾಮಾನ್ಯರಿಂದ ದೊಡ್ಡ ಸೆಲೆಬ್ರೆಟಿಗಳವರೆಗೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ. ಇದರ ಆಕರ್ಷಕ ನೋಟಕ್ಕೆ ಮನಸೋಲದವರಿಲ್ಲ ಎಂದು ಹೇಳಿದರೆ ತಪ್ಪಾಗುವುದಿಲ್ಲ. ನಿಮಗೆ ಗೊತ್ತಿರಲಿ.. ಈ ಕಾರನ್ನು ಕರ್ನಾಟಕದ ಬಿಡದಿ ಫ್ಯಾಕ್ಟರಿಯಲ್ಲಿ ತಯಾರಿಸಲಾಗುತ್ತದೆ.
ಭಾರತದಲ್ಲಿ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯನ್ನು 2022ರಲ್ಲಿ ಬಿಡುಗಡೆ ಮಾಡಲಾಗಿತ್ತು. ಅಂದಿನಿಂದ ಭಾರೀ ಬೇಡಿಕೆ ಹೊಂದಿದೆ. ಕೆಲವು ತಿಂಗಳ ಹಿಂದೆ, ಗ್ರಾಹಕರಿಂದ ಹೆಚ್ಚಿನ ಆರ್ಡರ್ ಬಂದ ಹಿನ್ನೆಲೆ, ಈ ಎಂಪಿವಿಯನ್ನು ಪೂರೈಸಲು ಸಮಸ್ಯೆಯಾಗುತ್ತದೆ ಎಂದು ಅರಿತ ಕಂಪನಿಯು ಬುಕ್ಕಿಂಗ್ ಅನ್ನು ಸ್ಥಗಿತಗೊಳಿಸಿತ್ತು. ಲಭ್ಯವಿರುವ ಮಾಹಿತಿ ಪ್ರಕಾರ, ಇನ್ನೋವಾ ಹೈಕ್ರಾಸ್ ಉತ್ಪಾದನೆಯನ್ನು ಹೆಚ್ಚಿಸಲಾಗಿದೆಯಂತೆ.

ಪ್ರಸ್ತುತ, ಇನ್ನೋವಾ ಹೈಕ್ರಾಸ್ ಎಂಪಿವಿಯ ಹೈಬ್ರಿಡ್ ರೂಪಾಂತರಗಳು ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿವೆ. ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು 15 ತಿಂಗಳು ಕಾಯಬೇಕು. ಆದರೆ, ಇತರೆ ಪೆಟ್ರೋಲ್ ರೂಪಾಂತರಗಳು ಕಡಿಮೆ ಕಾಯುವಿಕೆ ಅವಧಿ ಹೊಂದಿದ್ದು, 7 ತಿಂಗಳಲ್ಲಿ ಗ್ರಾಹಕರಿಗೆ ಡಿಲೆವರಿಯಾಗಲಿದೆ. ಮುಂಬರುವ ದಿನದಲ್ಲಿ ಇದು ಕಡಿಮೆಯಾವ ನಿರೀಕ್ಷೆಯಿದೆ.
ಭಾರತದ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ ರೂ.18.82 ಲಕ್ಷದಿಂದ ರೂ.30.26 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು, ಜಿಎಕ್ಸ್, ವಿಎಕ್ಸ್, ವಿಎಕ್ಸ್ (ಒ) ಸೇರಿದಂತೆ ಐದು ರೂಪಾಂತರದ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಯಲ್ಲಿ ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಸೇರಿದಂತೆ 7 ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.
ಇನ್ನೋವಾ ಹೈಕ್ರಾಸ್ ಎಂಪಿವಿ ಎರಡು ಎಂಜಿನ್ ಆಯ್ಕೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. 2.0 ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹಾಗೂ 2.0 ಲೀಟರ್, 4 ಸಿಲಿಂಡರ್ ಹೈಬ್ರಿಡ್ ಎಂಜಿನ್. ಇದರೊಟ್ಟಿಗೆ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಮೈಲೇಜ್ ವಿಚಾರವಾಗಿ ಹೇಳುವುದಾದರೆ, 21 kmpl ಇಂಧನ ದಕ್ಷತೆ ಪಡೆದಿದೆ.
ಈ ಕಾರು, ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಮುಖ್ಯವಾಗಿ, 10 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಕನೆಕ್ಟ್ದ್ ಕಾರ್ ಟೆಕ್ ಅನ್ನು ಒಳಗೊಂಡಿದೆ.
ಸುರಕ್ಷತೆಯ ವಿಚಾರದಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಗೆ ಸರಿ ಸಾಟಿಯೇ ಇಲ್ಲ ಎಂದು ಹೇಳಬಹುದು. ಈ ಕಾರು, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕಿಂಗ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆಂಟ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ.
ಇನ್ನು, ಟೊಯೋಟಾ ಇನ್ನೋವಾ ಕ್ರಿಸ್ಟಾ ಎಂಪಿವಿ, ರೂ.19.99 ಲಕ್ಷದಿಂದ 26.05 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಕೇವಲ 2.4 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 150 PS ಗರಿಷ್ಠ ಪವರ್ ಹಾಗೂ 343 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಒಳಗೊಂಡಿದೆ. 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications