Toyota: ಕರ್ನಾಟಕದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ ಖರೀದಿಸಬೇಕೇ.. ಸಿಹಿಸುದ್ದಿ

ಭಾರತದಲ್ಲಿ ಟೊಯೊಟಾ (Toyota) ಪ್ರಖ್ಯಾತ ಕಾರು ತಯಾರಕ ಸಂಸ್ಥೆಯಾಗಿದೆ. 2022ರ ಡಿಸೆಂಬರ್ ತಿಂಗಳಲ್ಲಿ ಕಂಪನಿಯು ಇನ್ನೋವಾ ಹೈಕ್ರಾಸ್ ಎಂಪಿವಿಯನ್ನು ಲಾಂಚ್ ಮಾಡಿತ್ತು. ಆಗಿನಿಂದಲೇ ದೊಡ್ಡಮಟ್ಟದಲ್ಲಿ ಬೇಡಿಕೆ ಪಡೆದುಕೊಂಡು ಕಾಯುವಿಕೆ ಅವಧಿಯು ಹೆಚ್ಚಾಗಿತ್ತು. ಸದ್ಯ, ದೇಶದ ವಿವಿಧೆಡೆ ಆ ಸಮಯ ಕಡಿಮೆಯಾಗಿದೆ ಎಂದು ವರದಿಯಾಗಿದೆ.

ಪ್ರಸ್ತುತ, ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಯ ಪೆಟ್ರೋಲ್ ರೂಪಾಂತರಗಳನ್ನು ಇವತ್ತು ಬುಕ್ಕಿಂಗ್ ಮಾಡಿದರೂ 6 - 7 ತಿಂಗಳಲ್ಲಿ ವಿತರಣೆಯಾಗಲಿವೆ. ಅದೇ ರೀತಿಯಲ್ಲಿ ಹೈಬ್ರಿಡ್ ವೇರಿಯೆಂಟ್ಸ್ ಅನ್ನು ಡಿಲೆವರಿ ಪಡೆಯಲು 15 ತಿಂಗಳು ಕಾಯಬೇಕು. ಆದರೆ, ಈ ಅವಧಿಯು ರಾಜ್ಯದಿಂದ ರಾಜ್ಯದ ಡೀಲರ್‌ಶಿಪ್, ರೂಪಾಂತರ ಹಾಗೂ ಬಣ್ಣ ಆಧರಿಸಿ ಬೇರೆ - ಬೇರೆಯಾಗಿದೆ.

Toyota: ಕರ್ನಾಟಕದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ ಖರೀದಿಸಬೇಕೇ.. ಸಿಹಿಸುದ್ದಿ

ಈ ಹಿಂದೆ, ಏಪ್ರಿಲ್ ತಿಂಗಳಲ್ಲಿ ಪೂರೈಕೆ ಸರಪಳಿ ಸಮಸ್ಯೆಯಿಂದ ಟಾಪ್ ಎಂಡ್ ಮಾದರಿಗಳಾದ ಝಡ್ಎಕ್ಸ್ ಹಾಗೂ ಝಡ್ಎಕ್ಸ್(ಒ) ಬುಕ್ಕಿಂಗ್ ಸ್ವೀಕರಿಸುವುದನ್ನು ನಿಲ್ಲಿಸಿತ್ತು. ಆದರೂ ಇತರೆ ರೂಪಾಂತರಗಳ ಆರ್ಡರ್ ಪಡೆಯುವುದನ್ನು ಶುರು ಮಾಡಿತ್ತು. ಈಗ, ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, ರೂ.18.82 ಲಕ್ಷದಿಂದ ರೂ.30.26 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, ಎರಡು ವಿಧದ ಪೆಟ್ರೋಲ್ ಎಂಜಿನ್ ಹೊಂದಿದೆ. ಮೊದಲ 2.0 ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 172 bhp ಪವರ್ ಮತ್ತು 205 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ CVT ಗೇರ್ ಬಾಕ್ಸ್ ಆಯ್ಕೆಯೊಂದಿಗೆ ದೇಶೀಯ ಗ್ರಾಹಕರಿಗೆ ಖರೀದಿಗೆ ಸಿಗುತ್ತದೆ.

ಮತ್ತೊಂದು, ಶಕ್ತಿಯುತ 2.0 ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹಾಗೂ ಎಲೆಕ್ಟ್ರಿಕ್ ಮೋಟಾರ್ ಹೊಂದಿರುವ ಕಾರು, 184.8 bhp ಗರಿಷ್ಠ ಪವರ್ ಹಾಗೂ 206 Nm ಪೀಕ್ ಟಾರ್ಕ್ ಹೊರ ಹಾಕುವ ಸಾಮರ್ಥ್ಯ ಒಳಗೊಂಡಿದ್ದು, 21 kmpl ಮೈಲೇಜ್ ನೀಡುತ್ತದೆ. ಇದಿಷ್ಟೇ ಅಲ್ಲದೆ, ರೂಪಾಂತರಗಳಿಗೆ ಅನುಗುಣವಾಗಿ 7- 8 ಆಸನ ಆಯ್ಕೆಯಲ್ಲಿ ಲಭ್ಯವಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, ಗ್ಲಾಸ್ ಫ್ಲೇಕ್, ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಸೇರಿದಂತೆ ಏಳು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಿದೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತೆಯ ಸಲುವಾಗಿ ಇನ್ನೋವಾ ಹೈಕ್ರಾಸ್ ಎಂಪಿವಿ, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕಿಂಗ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆಂಟ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ. ಈ ಕಾರಿಗೆ, ಮಾರುತಿ ಇನ್ವಿಕ್ಟೊ, ಕಿಯಾ ಕ್ಯಾರೆನ್ಸ್‌ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಶಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.

Article Published On: Monday, September 11, 2023, 8:30 [IST]
English summary
Toyota innova hycross waiting period reduced details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+