Toyota Rumion: ಫ್ಯಾಮಿಲಿ ಕಾರು 'ಟೊಯೊಟಾ ರೂಮಿಯಾನ್' ಬಿಡುಗಡೆ ದಿನಾಂಕ ಕಡೆಗೂ ತಿಳಿಯಿತು, ಬೆಲೆ ಎಷ್ಟು?

ದೇಶದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿದೆ. ಅದರ ಕಾರುಗಳು, ಆಕರ್ಷಕ ವೈಶಿಷ್ಟ್ಯ ಹಾಗೂ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಪ್ರತಿಯೊಬ್ಬರು ಇಷ್ಟಪಡುತ್ತಾರೆ. ಸದ್ಯ, ಮಾರುತಿ ಸುಜುಕಿ ಎರ್ಟಿಗಾ ರೀ-ಬ್ಯಾಡ್ಜ್ ರೂಮಿಯಾನ್ (Rumion) ಮಾರಾಟವನ್ನು ಕೆಲವೇ ದಿನಗಳಲ್ಲಿ ಪ್ರಾರಂಭಿಸಲಿದೆ.

ಎರಡು ವಾರಗಳ ಹಿಂದೆಯಷ್ಟೇ ಟೊಯಾಟಾ, ದೇಶೀಯ ಮಾರುಕಟ್ಟೆಯಲ್ಲಿ ರೂಮಿಯಾನ್ ಎಂಪಿವಿಯನ್ನು ಅನಾವರಣ ಮಾಡಿ, ಇದರ ಬಗ್ಗೆ ಒಂದಷ್ಟು ಮಾಹಿತಿಯನ್ನು ನೀಡಿತ್ತು. ಇದೀಗ, ಬಹುತೇಕ ಈ ತಿಂಗಳ ಅಂತ್ಯದಲ್ಲಿ ಕಂಪನಿಯು ರೂಮಿಯಾನ್ ಎಂಪಿವಿಯನ್ನು ಬಿಡುಗಡೆಗೊಳಿಸಿ, ಮಾರಾಟವನ್ನು ಶುರು ಮಾಡಲಿದೆ ಎಂಬ ವಿವರಗಳು ಲಭಿಸಿವೆ. ಜೊತೆಗೆ ಶೀಘ್ರದಲ್ಲೇ ಬುಕ್ಕಿಂಗ್ ಆರಂಭಿಸಲಿದ್ದು, ಮುಂದಿನ ತಿಂಗಳಿಂದ ವಿತರಣೆಯನ್ನು ಮಾಡಲಿದೆ ಎಂದು ಹೇಳಲಾಗಿದೆ.

Toyota Rumion: ಫ್ಯಾಮಿಲಿ ಕಾರು ಟೊಯೊಟಾ ರೂಮಿಯಾನ್ ಬಿಡುಗಡೆ ದಿನಾಂಕ ಕಡೆಗೂ ತಿಳಿಯಿತು, ಬೆಲೆ ಎಷ್ಟು?

ಟೊಯೊಟಾ ಕಂಪನಿಯು ರೂಮಿಯಾನ್ ಕಾರನ್ನು ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಮಾರಾಟ ಮಾಡಲು ತೀರ್ಮಾನಿಸಿದೆ. ಅದರಲ್ಲೂ ದಕ್ಷಿಣ ಆಫ್ರಿಕಾ ಮಾರುಕಟ್ಟೆಯಲ್ಲಿ ಸೇಲ್ ಮಾಡಲಿದೆ. ಮಾರುತಿ ಸುಜುಕಿ ಎರ್ಟಿಗಾ ರೀ-ಬ್ಯಾಡ್ಜ್ ಆವೃತ್ತಿಯಾಗಿರುವ ಈ ಎಂಪಿವಿ, ಏಳು ಆಸನಗಳನ್ನು ಹೊಂದಿದ್ದು, ಮಧ್ಯದ ಸಾಲಿನಲ್ಲಿ (middle-row) ಕ್ಯಾಪ್ಟನ್ ಸೀಟ್ ಅನ್ನು ಪಡೆಡಿದೆ. ಕಿಯಾ ಕ್ಯಾರೆನ್ಸ್ ಎಂಪಿವಿಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿದೆ.

ಟೊಯೊಟಾ ರೂಮಿಯಾನ್, ಮಾರುತಿ ಸುಜುಕಿ ಎರ್ಟಿಗಾ ರೀ-ಬ್ಯಾಡ್ಜ್ ಮಾದರಿಯಾಗಿದ್ದರೂ, ವಿನ್ಯಾಸದಲ್ಲಿ ಒಂದಷ್ಟು ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿದೆ. ಹೊಸದಾದ ಟೂ ಟೋನ್ ಅಲಾಯ್ ವೀಲ್ಸ್, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರೀಲ್, ನವೀಕರಣಗೊಂಡಿರುವ ಫಾಗ್ ಲ್ಯಾಂಪ್ ಸೇರಿದಂತೆ ಡಿಸೈನ್ ವಿಷಯದಲ್ಲಿ ಸಾಕಷ್ಟು ಹೊಸತನವನ್ನು ಒಳಗೊಂಡಿದ್ದು, ಹೆಚ್ಚು ಅತ್ಯಾಧುನಿಕವಾಗಿದೆ.

Toyota Rumion: ಫ್ಯಾಮಿಲಿ ಕಾರು ಟೊಯೊಟಾ ರೂಮಿಯಾನ್ ಬಿಡುಗಡೆ ದಿನಾಂಕ ಕಡೆಗೂ ತಿಳಿಯಿತು, ಬೆಲೆ ಎಷ್ಟು?

ನೂತನ ರೂಮಿಯಾನ್ ಎಂಪಿವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮೌಂಟೆಡ್ ಕಂಟ್ರೋಲ್‌ ಸ್ಟೀರಿಂಗ್ ವೀಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಅರ್ಕಾಮಿಸ್ ಸೌರ್ಸ್ಡ್ ಆಡಿಯೊ ಸಿಸ್ಟಮ್, 4 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಒಳಗೊಂಡಂತೆ ವಿವಿಧ ಫೀಚರ್ಸ್ ಪಡೆದಿದೆ.

ಈ ರೂಮಿಯಾನ್, ಎರ್ಟಿಗಾ ಎಂಪಿವಿ ರೀತಿಯಲ್ಲಿಯೇ 1.5 ಲೀಟರ್ ಫೋರ್ ಸಿಲಿಂಡರ್ ಮೈಲ್ಡ್ ಹೈಬ್ರಿಡ್ ಕೆ15ಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 103 hp ಗರಿಷ್ಠ ಪವರ್ ಹಾಗೂ 137 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5 ಸ್ವೀಡ್ ಮ್ಯಾನುವಲ್, 6 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ. ಜೊತೆಗೆ ಸಿಎನ್‌ಜಿ ರೂಪಾಂತರದ ಆಯ್ಕೆಯಲ್ಲಿಯೂ ಸಿಗುತ್ತದೆ.

ಬೆಲೆ ವಿಚಾರವಾಗಿ ಮಾತನಾಡುವಾದರೆ, ಹೊಸ ಟೊಯೊಟಾ ರೂಮಿಯಾನ್ ರೂ.8.99 ಲಕ್ಷದಿಂದ ರೂ.13.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುವ ಸಾಧ್ಯತೆಯಿದೆ. ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಇನ್ನು, ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ರೂಪಾಂತರಗಳಿಗೆ ಅನುಗುಣವಾಗಿ ರೂ.8.64 ಲಕ್ಷದಿಂದ ರೂ.13.08 ಲಕ್ಷ ದರದಲ್ಲಿ ಸಿಗುತ್ತದೆ.

ಮಾರುತಿ ಸುಜುಕಿ ಎರ್ಟಿಗಾ 1.5 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 103 hp ಪವರ್ ಮತ್ತು 137 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಕಿಟ್ ಪಡೆದಿರುವ ಕಾರು, 88 PS ಗರಿಷ್ಠ ಪವರ್ ಹಾಗೂ 121.5 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 20.51 kmpl ರಿಂದ 26.11 kmpl ಮೈಲೇಜ್ ನೀಡುತ್ತದೆ.

ಈ ಕಾರು, 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್‌, ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲೈಟ್‌ ಅನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಬ್ರೇಕ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೆನ್ಸರ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), SOFIX ಚೈಲ್ಡ್ ಸೀಟ್ ಆಂಕಾರೇಜ್ಸ್ ಅನ್ನು ಒಳಗೊಂಡಿದೆ.

Article Published On: Monday, August 21, 2023, 15:19 [IST]
English summary
Toyota rumion sales stats india soon expected price details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+